ಅಪರಾಧ
ಚಲಿಸುತ್ತಿದ್ದ ಲಾರಿಗೆ ಕಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು
ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಒಟ್ಟು ನಾಲ್ವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ
ಬಳ್ಳಾರಿ ಖಾಸಗಿ ಶಾಲೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯಿಂದ ಹಲವರ ಮೇಲೆ ಹಲ್ಲೆ, ಒಬ್ಬನ ಸಾವು
ಬಳ್ಳಾರಿಯ ಖಾಸಗಿ ಶಾಲೆಯ ಹಾಸ್ಟೆಲ್‌ನಲ್ಲಿ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ ಒಂಬತ್ತನೇ ತರಗತಿ ವಿದ್ಯಾರ್ಥಿಯು ರಾಡ್ನಿಂದ ಹಲ್ಲೆ ನಡೆಸಿದ್ದು, ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ
ಬ್ರಿಮ್ಸ್ ಫೊರೆನ್ಸಿಕ್ ಸೈನ್ಸ್ ಮುಖ್ಯಸ್ಥ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ
ಬೀದರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಫೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುನಿಲ್ ತಾಪ್ಸೆ (58) ವಸತಿಗೃಹದ ಕಿಟಕಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆರೋಗ್ಯ ಸಮಸ್ಯೆಗಳ ಕಾರಣದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಅವರು ಬರೆದಿದ್ದಾರೆ ಎನ್ನಲಾದ
ಹಾವೇರಿಯಲ್ಲಿ ಮಟ್ಕಾ ದಂಧೆ: ಪಿಎಸ್‌ಐ ಅಮಾನತು
ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ಎಗ್ಗಿಲ್ಲದೆ ಮಟ್ಕಾ ದಂಧೆ ನಡೆಯುತ್ತಿದ್ದು, ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಲಾಗಿದೆ. ಉಪಸಭಾಪತಿ ರುದ್ರಪ್ಪ ಲಮಾಣಿ ಸ್ಥಳೀಯ ಮಹಿಳೆಯರ ದೂರು ಆಲಿಸಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಆರೋಪಿಯನ್ನು
ಕಡಿಮೆ ಬೆಲೆಗೆ ಚಿನ್ನದ ಆಮಿಷ: ಉದ್ಯಮಿಯಿಂದ 20 ಲಕ್ಷ ರೂ. ದೋಚಿ ಪರಾರಿ
ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ಆಮಿಷವೊಡ್ಡಿ ತೋರಿಸಿ ಹೈದರಾಬಾದ್ ಮೂಲದ ಉದ್ಯಮಿಯನ್ನು ಕರೆಸಿಕೊಂಡ ಗುಂಪೊಂದು 20 ಲಕ್ಷ ರೂ. ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಗ್ರಾಮದ ಬಳಿ ನಡೆದಿದೆ. ಹೈದರಾಬಾದ್‌ನ ಉದ್ಯಮಿ ವಿಶ್ವಪ್ರಸಾದ್ ರೆಡ್ಡಿಯು ಕುಮಾರ್
ಕಾರಿನಲ್ಲಿ ಸಾಗಿಸುತ್ತಿದ್ದ ಹಣ ದೋಚಿದ ಅಪರಿಚಿತರು
ಬಾಗಲಕೋಟೆಯ ಮುಧೋಳ ಸಮೀಪದ ಮಂಟೂರು ಬೈಪಾಸ್ ಬಳಿ ಭಾರೀ ಪ್ರಮಾಣದ ಹಣ ಸಾಗಿಸುತ್ತಿದ್ದ ಕಾರಿನ ಮೇಲೆ ಕಲ್ಲೆಸೆದು ಅರ್ಧದಷ್ಟು ಹಣವನ್ನು ಅಪರಿಚಿತರು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ಮಹೀಂದ್ರಾ ಎಸ್ಯುವಿ 700 (MH 43 CC 9820)
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಹೆಬ್ಬಾಳ ಪಶುವೈದ್ಯಕೀಯ ಕಾಲೇಜು ಅಸಿಸ್ಟೆಂಟ್ ಪ್ರೊಫೆಸರ್ ಇಂದರೇಶ್
ಪವಿತ್ರಾಗೌಡ ಮನೆಯೂಟಕ್ಕೆ ಹೈಕೋರ್ಟ್ ಕೊಕ್
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ಪವಿತ್ರಾ ಗೌಡ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ‘ಮನೆಯೂಟ’ ಸೌಲಭ್ಯ ರದ್ದುಪಡಿಸಿ, ಜೈಲಿನಲ್ಲೇ ಸಿದ್ಧವಾಗುವ ಆಹಾರವನ್ನೇ ಸೇವಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. 2024ರ ಜೂನ್ ಎಂಟರಂದು ಬೆಂಗಳೂರಿನಲ್ಲಿ ದರ್ಶನ್ ಮತ್ತು
ಕಾಲ್, ಮೆಸೇಜ್‌ಗೆ ಸ್ಪಂದಿಸದ ಪ್ರೇಯಸಿ: ಮಂಗಳೂರಿನ ಯುವಕ ಒಮನ್‌ನಲ್ಲಿ ಆತ್ಮಹತ್ಯೆ
ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸುತ್ತಿಲ್ಲವೆಂದು ನೊಂದು ಮಂಗಳೂರಿನ ಸೋಮೇಶ್ವರದ ಯುವಕನೊಬ್ಬ ಒಮನ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ಪೂಜಾರಿ (32) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಒಮನ್‍ನ ಲಿಫ್ಟ್ ಕಂಪನಿಯಲ್ಲಿ ಪುನೀತ್ ಕೆಲಸ
ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ಮಹಿಳೆ ಸುಸೈಡ್
ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೌಟುಂಬಿಕ ಕಲಹದಿಂದ ನೊಂದು ಟೆಕ್ಕಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ, ಅತ್ತೆಯ ಕಾಟದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಿವಾಸಿ ಸುಶ್ಮಾ




