Saturday, September 26, 2026
Menu

ಬೈಕ್‌ಗೆ ಲಾರಿ ಡಿಕ್ಕಿ: ಇಬ್ಬರ ಸಾವು

ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಮಹಿಳೆ, ಪುರುಷ ಮೃತಪಟ್ಟಿದ್ದು, ಸ್ಥಳಕ್ಕೆ ಯಶವಂತಪುರ ಸಂಚಾರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಾಜ್ಯದಿಂದ ಕೊಟ್ಟಿಯೂರಿಗೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ ೨೦ ಮಂದಿಗೆ ಗಾಯ ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ಕೊಟ್ಟಿಯೂರಿಗೆ ತೆರಳುತ್ತಿದ್ದ ಕರ್ನಾಟಕದ ಪ್ರವಾಸಿಗರ

ಮಾವನೊಂದಿಗೆ ಜೇನು ತೆಗೆಯಲು ಹೋದ ಮಗು ಶವವಾಗಿ ಪತ್ತೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಮಾವನ ಜೊತೆ ಜೇನು ತೆಗೆಯಲು ಹೋಗಿದ್ದ ಏಳು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಶಶಿನಾಯ್ಕ್ ಎಂಬವರ ಪುತ್ರ ಆದಿತ್ಯ (7) ಅನುಮಾನಸ್ಪದವಾಗಿ ಮೃತಪಟ್ಟ ಬಾಲಕ. ಬುಧವಾರ ಬೆಳಗ್ಗೆ ಮಾವ ತಾವರೆನಾಯ್ಕ್ ಜೊತೆ

ನಕಲಿ ಪದವಿ ಅಂಕಪಟ್ಟಿ ಮಾರಾಟ ದಂಧೆ ಆರೋಪಿ ಅರೆಸ್ಟ್‌

ನಕಲಿ ಪದವಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೋರಮಂಗಲದಲ್ಲಿ ಕಚೇರಿ ತೆರೆದು ನಕಲಿ ಅಂಕಪಟ್ಟಿಗಳನ್ನು ಮಾರುತ್ತಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದಂಧೆಯ ಪ್ರಮುಖ ಸೂತ್ರಧಾರಿಗಳಾದ ಕಾರ್ತಿಕ್ ಹಾಗೂ ಆರ್ಯನ್

ಸ್ವ ಉದ್ಯೋಗದ ಆಮಿಷ: ಮಹಿಳೆಯರಿಂದ 10 ಕೋಟಿ ರೂಪಾಯಿ ಪಡೆದು ಪರಾರಿ

ಮನೆಯಲ್ಲೇ ಕುಳಿತು  ಸ್ವ ಉದ್ಯೋಗದ  ಮೂಲಕ ಕೈತುಂಬಾ ಸಂಪಾದಿಸಿ ಎಂಬ ಜಾಹೀರಾತು ಇದ್ದ ಬದ್ದ ಸ್ವಲ್ಪ ಹಣವನ್ನು ಹೂಡಿಕೆ ಮಾಡಿದ್ದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿ

ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಶಿಕ್ಷಕರ ಕಿರುಕುಳವೆಂದು ಆರೋಪ

ಬೀದರ್‌ನ ಪ್ರತಾಪ್ ನಗರದ ಬಳಿಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲೆಯ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ

ಕೆಲಸಕ್ಕಿದ್ದ ಮನೆಯಿಂದ 25 ಲಕ್ಷ ರೂ.ಕಳವುಗೈದು ಪರಾರಿಯಾಗುತ್ತಿದ್ದ ದಂಪತಿ ಅರೆಸ್ಟ್‌

ಬೆಂಗಳೂರಿನ ಕಾಂಟ್ರಾಕ್ಟರ್ ಮನೆಯಲ್ಲಿ ಕೆಲಸಕ್ಕೆ ಸೇರಿದ್ದ ನೇಪಾಳಿ ದಂಪತಿ, 25 ಲಕ್ಷ ರೂಪಾಯಿ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಅಮೃತಹಳ್ಳಿ ಪೊಲೀಸರು ದಾಳಿ ನಡೆಸಿ ಬಂಧಿಸಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ನೇಪಾಳದ ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಬಂಧಿತರು. ದಂಪತಿ

ಮಂಗಳೂರಿನಲ್ಲಿ ಉದ್ಯಮಿಯ ಹನಿಟ್ರ್ಯಾಪ್‌, ವೀಡಿಯೊ ಮುಂದಿಟ್ಟು ಎರಡುವರೆ ಕೋಟಿ ದೋಚಿದ್ದ ಕೈ ಮುಖಂಡ ಅರೆಸ್ಟ್‌

ಮಂಗಳೂರಿನ ಉದ್ಯಮಿಯನ್ನು ಹನಿಟ್ರ್ಯಾಪ್‌ ಮಾಡಿ ಅಶ್ಲೀಲ ವೀಡಿಯೊ ಮುಂದಿಟ್ಟು ಬ್ಲ್ಯಾಕ್‌ಮೇಲ್‌ ಮಾಡಿ 2 ಕೋಟಿ 77 ಲಕ್ಷ ರೂಪಾಯಿ ದೋಚಿರುವ ಪ್ರಕರಣ ಸಂಬಂಧ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಮತ್ತು ಜಿತೇಶ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಉದ್ಯಮಿಯನ್ನು

ಪಂಕ್ಚರ್‌ ಆಗಿ ನಿಂತಿದ್ದ ಟ್ಯಾಂಕರ್‌ಗೆ ಲಾರಿ ಡಿಕ್ಕಿ: ಚಾಲಕ ಸಜೀವ ದಹನ

ಪಂಕ್ಚರ್‌ ಆಗಿ ನಿಂತಿದ್ದ ಟ್ಯಾಂಕರ್‌ಗೆ  ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ತಕ್ಷಣ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ. ಹಿರೇಹಾಳ ಬಳಿ ನಡೆದಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌

ಬಳ್ಳಾರಿ ಪಿಜಿಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು: ಕೊಲೆಯೆಂದು ಪೋಷಕರ ಆರೋಪ

ಬಳ್ಳಾರಿಯ ಅಶೋಕ್ ನಗರದ ಚೌದ್ರಿ ರೆಸಿಡೆನ್ಸ್ ಪಿಜಿ ಕೊಠಡಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಶ್ವಾಸ್ (24) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತನ ತಲೆಗೆ ಹಾಗೂ ಎದೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ

ಮಂಡ್ಯದಲ್ಲಿ ತಂದೆ, ತಾಯಿ, ಮಗನ ಸಾವು

ಮಂಡ್ಯದ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ನಿಗೂಢವಾಗಿ ಮೃತಪಟ್ಟಿದ್ದು, ತಂದೆ ನೇಣಿ ಬಿಗಿದುಕೊಂಡಿದ್ದರೆ, ತಾಯಿ ಮತ್ತು ಮಗ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಪ್ರಭಾಕರ್ (ತಂದೆ), ಜ್ಯೋತಿ (ತಾಯಿ) ಮತ್ತು ಸಂತೋಷ್ (ಪುತ್ರ) ಎಂದು ಗುರುತಿಸಲಾಗಿದೆ. ಜ್ಯೋತಿ ಮತ್ತು ಅವರ ಪುತ್ರ