Menu

ಹಿರಿಯೂರಿನಲ್ಲಿ ಶೀಲ ಶಂಕಿಸಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಣಜನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಆಕೆಗೆ ಪೆಟ್ರೋಲ್‌ ಸುರಿದು ಬೆಂಕ ಹಚ್ಚಿ ಕೊಂದಿದ್ದಾನೆ. ಸುನೀತಾ (25) ಕೊಲೆಯಾದ ಮಹಿಳೆ, ಆಕೆಯ ಪತಿ ಲಿಂಗರಾಜ್ ಕೊಲೆಗಾರ. ನಾಲ್ಕು ವರ್ಷಗಳ ಹಿಂದೆ ಲಿಂಗರಾಜ್ ಹಾಗೂ ಸುನೀತಾ ಮದುವೆ ಆಗಿದ್ದರು. ದಂಪತಿಗೆ ಮಕ್ಕಳಾಗಿರಲಿಲ್ಲ.  ಯಾವಾಗಲೂ ಲಿಂಗರಾಜ್‌ ಪತ್ನಿಯ ಶೀಲ ಶಂಕಿಸಿ ಜಗಳ ಮಾಡುತ್ತಿದ್ದ. ಸೋಮವಾರ ಪತ್ನಿಯನ್ನು ಜಮೀನಿಗೆ ಕರೆದೊಯ್ದು ಕೊಲೆ ಮಾಡಿ ಸುಟ್ಟು ಹಾಕಿದ್ದಾನೆ. ಕೃತ್ಯ

ಸುಪ್ರೀಂ ಸಿಜೆಐ ಮೇಲೆ ಷೂ ಎಸೆದ ವಕೀಲನ ಬಂಧನ

ಸುಪ್ರೀಂಕೋರ್ಟ್‌ನಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮೇಲೆ ಶೂ ಎಸೆದಿದ್ದು, ಆರೋಪಿಯನ್ನು ರಾಕೇಶ್ ಕಿಶೋರ್ ಎಂದು ಗುರುತಿಸಲಾಗಿದೆ.  ಆರೋಪಿಯನ್ನು ತಕ್ಷಣವೇ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸುವ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ

ಮ್ಯಾಟ್ರಿಮೊನಿಯಲ್ಲಿ ಸಿಕ್ಕ ಯುವ ಪ್ರಿಯಕರ: ನಿವೃತ್ತ ಶಾಲಾ ಶಿಕ್ಷಕಿಗೆ 2.3 ಕೋಟಿ ರೂ. ವಂಚನೆ

ಬೆಂಗಳೂರಿನ ನಿವೃತ್ತ ಶಾಲಾ ಶಿಕ್ಷಕಿಯೊಬ್ಬರು ಮ್ಯಾಟ್ರಿಮೊನಿಯಲ್ಲಿ ಪರಿಚಯವಾಗಿ ಸ್ನೇಹಿತನಾದ ಯುವಕನ ಮಾತು ನಂಬಿ 2.3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. 4 ವರ್ಷಗಳಲ್ಲಿ ಈ ಪ್ರಮಾಣದ ಹಣ ಕಳೆದುಕೊಂಡಿರುವ ಶಿಕ್ಷಕಿ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು ಮೂಲದ 59 ವರ್ಷದ ಮಹಿಳೆ ಹಲವು

ಕಾಮಾಕ್ಷಿಪಾಳ್ಯದಲ್ಲಿ ರಿವರ್ಸ್‌ ತೆಗೆಯುತ್ತಿದ್ದ ಕಾರಿಗೆ ಮಗು ಬಲಿ

ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಿವರ್ಸ್‌ ತೆಗೆಯುತ್ತಿದ್ದ ಕಾರು ಹರಿದು ಹನ್ನೊಂದು ತಿಂಗಳ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಗುವನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ವಾಸಿಸುತ್ತಿರುವ ಸ್ವಾಮಿ ಎಂಬವರ ಮನೆಯಲ್ಲಿ ಕುಣಿಗಲ್‌ನಿಂದ ಬಂದಿದ್ದ

ಪತಿ, ಮಕ್ಕಳಿದ್ದರೂ ಅಕ್ರಮ ಸಂಬಂಧ: ಪ್ರಿಯಕರನ ಜೊತೆ ತನ್ನ ಸ್ನೇಹಿತೆಯ ನೋಡಿ ಬಸವೇಶ್ವರ ನಗರದಲ್ಲಿ ಮಹಿಳೆ ಆತ್ಮಹತ್ಯೆ

ತನ್ನ ಆಪ್ತ ಸ್ನೇಹಿತೆಯೇ ತನ್ನ ಪ್ರಿಯಕರನ ಜೊತೆ ಸಂಬಂಧದಲ್ಲಿ ಇರುವುದನ್ನು ಕಂಡ ವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಬಸವೇಶ್ವರ ನಗರದ ಕೆ ಹೆಚ್ ಬಿ ಕಾಲೊನಿಯಲ್ಲಿರುವ ಓಯೋ ಚಾಂಪಿನಿಯನ್ ಕಂಫರ್ಟ್ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿರುವ ಯಶೋಧಾ (38)

ಜೈಪುರ ಆಸ್ಪತ್ರೆಯಲ್ಲಿ ಬೆಂಕಿ: ಎಂಟು ರೋಗಿಗಳು ಸಜೀವ ದಹನ

ಜೈಪುರದ ಸವಾಯಿ ಮಾನ್ ಸಿಂಗ್ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಬೆಂಕಿ ಹೊತ್ತಿಕೊಂಡು ಎಂಟು ರೋಗಿಗಳು ಸಜೀವ ದಹನವಾಗಿ ಹೋಗಿರುವ ದಾರುಣ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಐವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ

ಪತಿ ಹಲ್ಲೆ: ಪೀಣ್ಯದಲ್ಲಿ ಕೋಮಾದಲ್ಲಿದ್ದ ಮಹಿಳೆ ಸಾವು

ಪೀಣ್ಯ ಬಳಿಯ ಚೊಕ್ಕಸಂದ್ರದಲ್ಲಿ ನೆಲೆಸಿದ್ದ ವ್ಯಕ್ತಿಯೊಬ್ಬ ಇತ್ತೀಚೆಗೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದು, ಕೋಮಾದಲ್ಲಿದ್ದ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರೀತಿ ಸಿಂಗ್​ (26) ಮೃತ ಮಹಿಳೆ, ಆರೋಪಿ ಛೋಟೆಲಾಲ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ದಂಪತಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು.

ಮತ್ತೆ ಪತಿಯೊಂದಿಗೆ ಜೀವಿಸಬೇಕೆಂದು ವಿಚ್ಛೇದಿತೆ ಮನವಿ: ನಿರಾಕರಿಸಿದ ಹೈಕೋರ್ಟ್‌

ಮದುವೆಯಾದ ಮಹಿಳೆ ಪತಿಯೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪದೆ ಆತನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ ಮತ್ತೆ ಆತನೊಂದಿಗೆ ಜೀವನ ನಡೆಸಲು ಬಯಸಿದ್ದು, ಆತ ಒಪ್ಪದಿದ್ದಾಗ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಆದರೆ ಕೋರ್ಟ್‌ ಆಕೆಯ ಮನವಿಯನ್ನು ನಿರಾಕರಿಸಿದೆ. ಇದು ಪತಿಗೆ ಪತ್ನಿಯಿಂದ

ಚಿಕ್ಕಮಗಳೂರಿನಲ್ಲಿ ಹಸು ಬಾಲಕ್ಕೆ ಬೆಂಕಿ ಹಚ್ಚಿದ ಬಾಲಕನ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಬಾಲಕನೊಬ್ಬ ಹಸುವಿನ ಬಾಲಕ್ಕೆ ಸೆಂಟ್‌ ಸ್ಪ್ರೇ ಮಾಡಿ ಲೈಟರ್‌ನಿಂದ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಬಾಲಕ ನಡೆಸಿರುವ ಈ ದುಷ್ಕೃತ್ಯವು ಸಾರ್ವಜನಿಕರಲ್ಲಿ ಆಕ್ರೋಶವುಂಟು ಮಾಡಿದೆ. ಸಂಜೆ ರಸ್ತೆಯಲ್ಲಿ ನಿಂತಿದ್ದ ಹಸುವಿನ ಬಾಲಕ್ಕೆ ಬಾಲಕ ಕೈಯಲ್ಲಿದ್ದ ಸೆಂಟ್

ಬೆಂಗಳೂರಿನಲ್ಲಿ ಮರ ಬಿದ್ದು ಯುವತಿ ಸಾವು

ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ಬೃಹತ್ ಮರ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಆರ್‌ಟಿ ನಗರದ ಕೀರ್ತನಾ (23) ಮೃತ ಯುವತಿ. ಕೀರ್ತನಾ ಅವರು ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಲೀಗ್‌