Saturday, September 26, 2026
Menu

ನಾಗಮಂಗಲ ಕೆರೆಯಲ್ಲಿ ಈಜಲು ಹೋಗಿ ಯುವಕರಿಬ್ಬರ ಸಾವು

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಯರಗನಹಳ್ಳಿ ಬಳಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕರಿಬ್ಬರು ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಪ್ರಕಾಶ್ ಗೌಡ (24) ಮತ್ತು ಯಶಸ್ (23) ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಯರಗನಹಳ್ಳಿ ಕೆರೆಯಲ್ಲಿ ಈಜಲು ಹೋದಾಗ ಈ ದುರಂತ ನಡೆದಿದ್ದು, ಇಬ್ಬರೂ ಕೆರೆಯಲ್ಲಿ ಮುಳುಗಿ ಅಸು ನೀಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯ

ಪ್ರೀತಿಸಿದವನ ಮದುವೆಯಾಗಲು ಕುಟುಂಬ ವಿರೋಧ: ಕುಂದಗೋಳದಲ್ಲಿ ಯುವತಿ ಆತ್ಮಹತ್ಯೆ

ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಪ್ರೀತಿಸಿದವನ ಮದುವೆಯಾಗಲು ಕುಟುಂಬಸ್ಥರು ವಿರೋಧಿಸಿದ್ದಕ್ಕೆ ನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಆಕೆ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್

ಯುವತಿ ವಿಚಾರಕ್ಕೆ ಕಿರುಕುಳ: ಆಡಿಯೊ ರೆಕಾರ್ಡ್‌ ಮಾಡಿಟ್ಟು ಹಾಸನ ಯುವಕ ಸುಸೈಡ್‌

ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆಡಿಯೋ ರೆಕಾರ್ಡ್ ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ. ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಗ್ರಾಮದ ಶಂಕರ, ದರ್ಶನ್,

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ಪಲ್ಟಿಯಾಗಿ ತಂದೆ, ಮಗ ಸಾವು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಮಂಡ್ಯ ಕೋಣನಹಳ್ಳಿ ಬಳಿಯ ಸೇತುವೆಯ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿರಣ್(40) ಮತ್ತು ಮಗ

ಗಂಡ, ಮಕ್ಕಳ ತೊರೆದಿದ್ದ ಮಹಿಳೆ ಜೊತೆ ಲಿವ್-ಇನ್ ರಿಲೇಷನ್‌ಶಿಪ್‌: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನ ಶವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗದ ತಿಪ್ಪೇಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ದಾವಣಗೆರೆಯ

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧಿಸಿದ ಇಡಿ, ಮೊಹಮ್ಮದ್‌ ನಲಪಾಡ್‌ಗೆ ಭೀತಿ

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಭೀತಿಯುಂಟಾಗಿದೆ. ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ

ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕ್ರಿಮಿನಲ್ ಪ್ರಕರಣದ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನು ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಹುಡುಗಿ ದಪ್ಪಗಿದ್ದರೂ ಹಣಕ್ಕಾಗಿ ಮದುವೆಯಾಗಿದ್ದ, ಸಣ್ಣಗಾಗುತ್ತಿಲ್ಲವೆಂದು ಕೊಲೆಗೈದ

ಹಣ, ಆಸ್ತಿ ಮೇಲೆ ಕಣ್ಣಿಟ್ಟಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವಕನೊಬ್ಬ ಹುಡುಗಿ ದಪ್ಪಗಿದ್ದರೂ ಮದುವೆಯಾಗಿ ಮನೆ ಅಳಿಯನಾಗಿದ್ದ. ಇವರಿಗೆ ಹೆಣ್ಣು ಮಗುವೂ ಇದೆ.ಹೆಂಡತಿ ಸಣ್ಣಗಾಗುತ್ತಿಲ್ಲವೆಂದು ಕೊಂದೇ ಬಿಟ್ಟಿದ್ದಾನೆ. ಇತ್ತೀಚೆಗೆ ಗಂಡ ಕಿರಣ್ ಹೆಂಡತಿ ಪದ್ಮಜಾ ದಪ್ಪಗಿದ್ದು, ಸುಂದರವಾಗಿಲ್ಲ ಎಂದು ದ್ವೇಷಿಸುತ್ತಿದ್ದ, ಸಣ್ಣಗಾಗುವಂತೆ ಆಕೆಯ

ಮಧ್ಯರಾತ್ರಿ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ: ವ್ಯಕ್ತಿ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರಿನ ನಾಗರಬಾವಿಯ ಹೋಟೆಲ್‌ವೊಂದರಲ್ಲಿ ತಡರಾತ್ರಿ ಅಗ್ನಿ ಆಕಸ್ಮಿಕ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಹೋಟೆಲ್‌ನಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ

ಕುಟುಂಬದ ಸಾವಿಗೆ ಕಾರಣವಾದ ಕಲ್ಲಂಗಡಿಯಲ್ಲಿತ್ತು ಇಲಿ ಪಾಷಾಣ

ಮುಂಬೈನ ಅಬ್ದುಲ್ಲಾ ಡೊಕಾಡಿಯಾ, ಪತ್ನಿ ನಸ್ರೀನ್ ಮಕ್ಕಳಾದ ಆಯೇಷಾ ಮತ್ತು ಜೈನಾಬ್ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಹಣ್ಣು ತಿಂದು ಮಲಗಿದ್ದವರು ಅಸ್ವಸ್ಥಗೊಂಡು ಮೃತಪಟ್ಟ ಪ್ರಕರಣದ ತನಿಖೆಯಲ್ಲಿ ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣವಿತ್ತು ಎಂಬ ವಿಚಾರ ಬಯಲಾಗಿದೆ. ಕುಟುಂಬಸ್ಥರು ತಾವೇ ವಿಷ