Menu

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು 1 ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು.‌ ಇದಕ್ಕೆ ತಡೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ತಿಮರೋಡಿಗೆ ಈಗ

ಜೈಲು ಅಧಿಕಾರಿಗಳ ವಿರುದ್ಧ ದರ್ಶನ್‌ ಅರ್ಜಿ ವಿಚಾರಣೆ: ಆದೇಶ ಅ. 9ಕ್ಕೆ ಕಾಯ್ದಿರಿಸಿದ ಕೋರ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದ ದೋಷಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಹೆಚ್ಚುವರಿ ಹಾಸಿಗೆ ದಿಂಬು ನೀಡದ ವಿಚಾರಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ನಡೆದಿದ್ದು, ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಲಾಗಿದೆ. ಜೈಲಿನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ

ಅಕ್ರಮ ಆಸ್ತಿ ಗಳಿಕೆ: ಶಾಸಕ ಟಿ‌‌.ಡಿ.ರಾಜೇಗೌಡ ಮನೆ ಮೇಲೆ‌ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಶಾಸಕ ಟಿ‌‌.ಡಿ.ರಾಜೇಗೌಡ ಅವರ ಚಿಕ್ಕಮಗಳೂರು ತಾಲೂಕಿನ‌ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದ ಮನೆ ಮೇಲೆ‌ ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು, ಎಫ್‌ಐಆರ್‌ ದಾಖಲಾದ ಬಳಿಕ

ಹಾಸನದಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ ಗಾಯ

ಹಾಸನದ ಆಲೂರು ತಾಲೂಕಿನ ಹಳೇಆಲೂರು ಗ್ರಾಮದ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಸ್ಫೋಟದಿಂದ ಗಾಯಗೊಂಡ ದಂಪತಿ. ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‍ನಲ್ಲಿ

ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಅಕ್ರಮ ಶ್ರೀಲಂಕಾ ವಲಸಿಗರು ಅರೆಸ್ಟ್‌

ಶ್ರೀಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ

ಬೆಂಗಳೂರಿನಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರಿನಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್ , 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482

ಶಿರಾದಲ್ಲಿ ರಸ್ತೆ ಅಪಘಾತ: ಮೂವರು ಬಲಿ

ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಭಾನುವಾರ ರಾತ್ರಿ ಎರಡು ಬೈಕ್‌ಗಳು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್ (36) ಮತ್ತು ವೆಂಕಟಧನಶೆಟ್ಟಿ (64), ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24) ಮೃತಪಟ್ಟವರು.

ಬೀಳಗಿಯಲ್ಲಿ ಕಾರು ಟಂಟಂ ಡಿಕ್ಕಿ: ಇಬ್ಬರ ಸಾವು

ಬಾಗಲಕೋಟೆ ಜಿಲ್ಲೆಯ ಬೀಳಗಿ ಅನಗವಾಡಿ ಬ್ರಿಡ್ಜ್ ಬಳಿ ಕಾರು ಮತ್ತು ಟಂಟಂ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್‌ (30) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸರು

ವರ್ಕ್‌ಫ್ರಮ್‌ ಹೋಂ ಜಾಹೀರಾತು ನಂಬಿ: ಹಣ ಕಳೆದುಕೊಂಡ ಮಹಿಳೆ

ಆನ್‌ಲೈನ್‌ನಲ್ಲಿ ವರ್ಕ್‌ಫ್ರಮ್‌ ಹೋಂ ಕುರಿತಾದ ಜಾಹೀರಾತು ನಂಬಿ ಚಿಕ್ಕಮಗಳೂರಿನ ಮಹಿಳೆಯೊಬ್ಬರು 2,57,600 ರೂ. ಕಳೆದುಕೊಂಡಿದ್ದಾರೆ. ಸೈಬರ್‌ ವಂಚಕರು ಟೆಲಿಗ್ರಾಂ ಆ್ಯಪ್‌ ಮೂಲಕ ‘ವರ್ಕ್‌ಫ್ರಮ್‌ ಹೋಂ ಮಾಡಲು ಇಚ್ಛಿಸುವವರು ಈ ಲಿಂಕ್‌ ಕ್ಲಿಕ್‌ ಮಾಡಿ’ ಎಂದು ಜಾಹೀರಾತು ಕಳುಹಿಸಿದ್ದರು. ಮಹಿಳೆ ಲಿಂಕ್‌ ಕ್ಲಿಕ್‌

ವೇಶ್ಯವಾಟಿಕೆಗೆ ಅಪ್ರಾಪ್ತ ವಯಸ್ಕ ಬಾಲಕಿಯರು: ಆರೋಪಿಗಳಿಬ್ಬರು ಅರೆಸ್ಟ್‌

ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಷ್ಟೇ ಋತುಮತಿಯಾದ ಬಾಲಕಿಯರನ್ನು ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್  ಬಂಧಿತ ಆರೋಪಿಗಳು. ಆರೋಪಿಗಳು ವಾಟ್ಸಾಪ್‌ ಮೂಲಕ ಬಾಲಕಿಯರ ವೀಡಿಯೊವನ್ನು ಗ್ರಾಹಕರಿಗೆ ತೋರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.