ಅಪರಾಧ
ಪ್ರೀತಿಸಿ ಮದುವೆ: ಪತ್ನಿ ತೊರೆದಳೆಂದು ಯುವಕ ಆತ್ಮಹತ್ಯೆ
ಪ್ರೀತಿಸಿ ಮದುವೆಯಾಗಿದ್ದ ಯುವತಿ ಪೋಷಕರ ಒತ್ತಾಯಕ್ಕೆ ಮಣಿದು ತನ್ನನ್ನು ತೊರೆದುಹೋದಳೆಂದು ನೊಂದ ಯುವಕ ಹಾವೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 24 ವರ್ಷದ ಮಂಜುನಾಥ್ ಅಗಡಿ ಆತ್ಮಹತ್ಯೆ ಮಾಡಿಕೊಂಡ ಯುವಕ, ಎರಡು ವರ್ಷಗಳಿಂದ ಹಾವೇರಿಯ ಯುವತಿಯನ್ನು ಪ್ರೀತಿಸುತ್ತಿದ್ದ ಮಂಜುನಾಥ, ಇತ್ತೀಚೆಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದ ಎನ್ನಲಾಗಿದೆ. ಯುವತಿಯ ಪೋಷಕರಿಗೆ ಈ ಮದುವೆ ಇಷ್ಟವಿರಲಿಲ್ಲ. ಮಗಳು ಕಾಣೆಯಾಗಿದ್ದಾಳೆ ಎಂದು ಹಾವೇರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿ ಠಾಣೆಗೆ
ವಿದ್ಯಾರ್ಥಿಗಳಿಗೆ ಕಳಪೆ ಶೂ: ಲೋಕಾಯುಕ್ತ ತನಿಖೆ
ರಾಜ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ ಪೂರೈಕೆ ಬಗ್ಗೆ ಮಾಧ್ಯಮ ವರದಿ ಪರಿಗಣಿಸಿದ ಲೋಕಾಯುಕ್ತ ಸ್ವಯ ಪ್ರೇರಿತ ದೂರು ದಾಖಲಿಸಿಕೊಂಡಿದೆ. ವಿದ್ಯಾ ವಿಕಾಸ ಯೋಜನೆಯಡಿ ರಾಜ್ಯದ 36.56 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಸಾಕ್ಸ್ ವಿತರಿಸಲು 72
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ವಿವಾಹಿತೆ ಮತ್ತು ಯುವಕ
ಕಲಬುರಗಿಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರ ವಲಯದಲ್ಲಿ ಮಹಿಳೆ ಮತ್ತು ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ, ಇವರಿಬ್ಬರು ಪ್ರೇಮಿಗಳೆಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್: ಸತೀಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ಆರೋಪ
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದ್ದು, ಎಡಿಜಿಪಿ ಕಂಪನಿಯಿಂದ ಕಿಕ್‌ಬ್ಯಾಕ್ ಪಡೆದಿರುವ ಆರೋಪವೂ ಕೇಳಿಬಂದಿದೆ. ಜಾರಕಿಹೊಳಿ ನಿವಾಸದಲ್ಲಿ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಆ ದಾಖಲೆಗಳನ್ನು ಪರಿಶೀಲಿಸಲು ಇಡಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಮದುವೆಯಾಗೆಂದು ಒತ್ತಾಯಿಸಿದ ಪ್ರೇಯಸಿಯ ಕೊಲೆ
ಮದುವೆಯಾಗುವಂತೆ ಒತ್ತಾಯಿಸಿದ ಪ್ರೇಯಸಿಯನ್ನು ವ್ಯಕ್ತಿ ಕೊಲೆ ಮಾಡಿರುವ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದ್ದು, ಮೂರು ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಪ್ರೇಯಸಿಯನ್ನು ಕೊಲೆ ಮಾಡಿರುವ ಆರೋಪಿಯು ಆಕೆಯ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣ
ಪಾರ್ಶ್ವವಾಯು ಪೀಡಿತ ವ್ಯಕ್ತಿಯ ಕೊಲೆಗೈದ ಪತ್ನಿ, ಪ್ರಿಯಕರ, ಅತ್ತೆ
ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದದಿದ ವ್ಯಕ್ತಿಯನ್ನು ಪತ್ನಿ, ಆಕೆಯ ಪ್ರಿಯಕರ ಮತ್ತು ಅತ್ತೆ ಸೇರಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಿತ್ತಗನೂರಿನ ಯಲ್ಲಪ್ಪ ಗಾರ್ಡನ್‌ನಲ್ಲಿ ನಡೆದಿದೆ. ಮೂವರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಬಾರಕ್ (40) ಕೊಲೆಯಾದ ವ್ಯಕ್ತಿ, ಎರಡು ವರ್ಷದಿಂದ ಪಾರ್ಶ್ವವಾಯುಪೀಡಿತರಾಗಿ
ಸುಂಟಿಕೊಪ್ಪದದಲ್ಲಿ ಬಸ್ ಡಿಕ್ಕಿ ಹೊಡೆದು ಬಾಲಕಿ ಸಾವು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಚೆಸ್ಕಾಂ ಕಚೇರಿ ಸಮೀಪ ನಡೆದಿದೆ. ಅಸ್ಸಾಂನ ಸಿರಾಜು ರೆಹಮಾನ್ ಮತ್ತು ಜಹನಾರ್ ದಂಪತಿ ಕೂಲಿ ಕೆಲಸಕ್ಕಾಗಿ ಸುಂಟಿಕೊಪ್ಪಕ್ಕೆ ಬಂದು ಹೊಸ ಬಡಾವಣೆಯಲ್ಲಿ ನೆಲೆಸಿದ್ದರು.
ಜೈಲಿನಲ್ಲಿ ಪ್ರಜ್ವಲ್‌ಗೆ ಮೊಬೈಲ್: ಏಳು ಮಂದಿ ವಿರುದ್ಧ ಪ್ರಕರಣ
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಬೆಂಗಳೂರು ಕೇಂದ್ರ ಕಾರಾಗೃಹ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸುವುದಕ್ಕೆ ಎಲ್ಲ ರೀತಿಯ ನೆರವು ನೀಡಿದ್ದ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದ
ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಸಿದ್ದ ಯುವಕರಿಬ್ಬರ ಬಂಧನ
ಪ್ರಕರಣವೊಂದರ ಆರೋಪಿಗೆ ಜಾಮೀನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಸಿರುವ ಆರೋಪದಡಿ ಉಡುಪಿ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ. ಬಂಟ್ವಾಳದ ಉಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉಡುಪಿ
ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತಕ್ಕೆ ಎಂಟು ಮಂದಿ ಬಲಿ
ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ನಾಗಪುರ- ರಾಯ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. ಪಿಂಪಲ್‌ಗಾಂವ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರನ್ನು ತಕ್ಷಣವೇ ಸಕೋಲಿಯ ಆಸ್ಪತ್ರೆಗೆ




