Saturday, February 14, 2026
Menu

ಅತ್ತಿಬೆಲೆ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದಲ್ಲಿ ಆಟವಾಡುತ್ತ ಕೆರೆ ಬಳಿ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಅನಿಕೇತ್ ಕುಮಾರ್(12), ರೆಹಮಾತ್ ಬಾಬಾ(11) ಮೃತಪಟ್ಟ ಬಾಲಕರು. ಬಾಲಕ ಅನಿಕೇತ್ ಕುಮಾರ್ ಬಿಹಾರ ಮೂಲದವ, ರೆಹಮಾತ್ ಬಾಬಾ ಆಂಧ್ರ ಕದಿರಿ ಮೂಲದ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಪೋಷಕರ ಈ ಮಕ್ಕಳು ಸಂಜೆ ಮನೆಯ ಬಳಿಯೇ ಆಟವಾಡುತ್ತಿದ್ದರು. ಆಟವಾಡುತ್ತಾ ಕೆರೆಯ ಬಳಿ ಹೋಗಿದ್ದಾರೆ.

ದಾವಣಗೆರೆಯಲ್ಲಿ ಕಾರು ಕಾಲುವೆಗೆ ಉರುಳಿ ಇಬ್ಬರ ಸಾವು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಭದ್ರಾ ಕಾಲುವೆಗೆ ಕಾರು ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಲ್ಲಿಕಾರ್ಜುನ(29) ಹಾಗೂ ಸಿದ್ದೇಶ್(38) ಮೃತಪಟ್ಟವರು. ದಾವಣಗೆರೆಯ ಆರು ಜನ ಮಂಗಳೂರು ಪ್ರವಾಸಕ್ಕೆ ಹೋಗಿ ವಾಪಸ್ ಬರುವಾಗ ಈ ದುರಂತ ನಡೆದಿದೆ. ನಿದ್ದೆ ಮಂಪರಿನಲ್ಲಿ

ಆಕಸ್ಮಿಕ ಸಾವಲ್ಲ, ಕೊಲೆಯೆಂದು ಆರು ಗಂಟೆಯೊಳಗೆ ದೃಢಪಡಿಸಿದ ಯಮಕನಮರಡಿ ಪೊಲೀಸ್‌

ಕಬ್ಬು ಕಡಿಯುವಾಗ ಕುಡುಗೋಲು ತಾಗಿ ಸಾವು ಎಂದು ಬಿಂಬಿತವಾಗಿದ್ದ  ಪ್ರಕರಣವನ್ನು ಆರು ಗಂಟೆಯೊಳಗೆ ಬೇಧಿಸಿದ ಪೊಲೀಸರು ಅದೊಂದು ಕೊಲೆ ಎಂಬುದನ್ನು ದೃಢಪಡಿಸಿ ಆರೋಪಿಗಳಾದ  ಸಹೋದರ ಮತ್ತು ಸಂಬಂಧಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಳಗಾವಿಯ  ಯಮಕನಮರಡಿಯ ಲ್ಲಿ ನಡೆದಿದೆ. ಯಮಕನಮರಡಿ ಪೊಲೀಸ್ ಇನ್ಸ್‌ಪೆಕ್ಟರ್

ಪೊಲೀಸ್‌ ಮೇಲೆ ದಾಳಿ: ಕೊಲೆ ಆರೋಪಿ ಮೇಲೆ ಫೈರಿಂಗ್‌

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಕಿಡ್ನಾಪ್ ಅಂಡ್ ಮರ್ಡರ್ ಕೇಸ್ ಆರೋಪಿಯ ಮೇಲೆ ಪೊಲೀಸರು ಫೈರಿಂಗ್‌ ನಡೆಸಿ ಬಂಧಿಸಿದ್ದಾರೆ. ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಆರೋಪಿಯಾಗಿರುವ ಆಂದ್ರಪ್ರದೇಶ ಮೂಲದ ರವಿಪ್ರಸಾದ್ ರೆಡ್ಡಿಯ ಎರಡು ಕಾಲಿಗೆ ಗುಂಡು ಹೊಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೊಮ್ಮಸಂದ್ರ

ವಿದ್ಯುತ್‌ ಕಂಬಕ್ಕೆ ಲಾರಿ ಗುದ್ದಿ ಗೋಡೆ ಬಿದ್ದು ಮಗು ಸಾವು

ಬೆಂಗಳೂರಿನ ಎಚ್‌ಎಎಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಕಾಲೊನಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ವಿದ್ಯುತ್‌ ಕಂಬಕ್ಕೆ ತಗುಲಿ ಗೋಡೆ ಬಿದ್ದು ಪರಿಣಾಮ ಮಗುವೊಂದು ಮೃತಪಟ್ಟಿದೆ. ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (1.8) ಮೃತಪಟ್ಟ ಮಗು. ಲಾರಿ ಚಾಲಕನ ನಿರ್ಲಕ್ಷ್ಯದಿಂದ

ಉಗ್ರ, ವಿಕೃತ ಕಾಮಿ, ಕ್ರಿಮಿನಲ್ ಗಳಿಗೆ ಬೆಂಗಳೂರು ಜೈಲಲ್ಲಿ ರಾಜಾತಿಥ್ಯ!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ಶಂಕಿತ ಉಗ್ರ, ವಿಕೃತ ಕಾಮಿ ಉಮೇಶ್ ರೆಡ್ಡಿ ಚಿನ್ನದ ಸ್ಮಗ್ಲರ್ ಮುಂತಾದ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡುತ್ತಿರುವುದು ಮತ್ತೆ ಸುದ್ದಿಯಾಗಿದೆ. ಹೌದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡುತ್ತಿರುವ ವೀಡಿಯೋ ಹಾಗೂ

ರನ್ಯಾ ರಾವ್ ವಿರುದ್ಧ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123 ಕೋಟಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವ ಪ್ರಕರಣ ಇದಾಗಿದೆ. ಪ್ರಕರಣದ ಐದು ಆರೋಪಿಗಳಿಗೂ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್‌ಐ ರನ್ಯಾ

ಮುರ್ಡೇಶ್ವರದಲ್ಲಿ ಲಿಫ್ಟ್‌ ಕುಸಿದು ಕಟ್ಟಡ ಕಾರ್ಮಿಕರಿಬ್ಬರ ಸಾವು

ಕಟ್ಟಡ ಕಾಮಗಾರಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆ ಲಿಫ್ಟ್‌ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮುರ್ಡೇಶ್ವರದಲ್ಲಿ ನಡೆದಿದೆ. ಪ್ರಭಾಕರ್‌ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್‌ ಕುಸಿದು ಈ

ಮೊಬೈಲ್ ಗೇಮ್ ಬಿಟ್ಟು ಓದು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ರಾಜಸ್ಥಾನದ ಧೋಲ್ಪುರ್ ಜಿಲ್ಲೆಯ ಕುರ್ರೆಂಡಾ ಗ್ರಾಮದಲ್ಲಿ ಮೊಬೈಲ್ ಗೇಮ್ ಬಿಟ್ಟು ಓದಿನೆಡೆಗೆ ಹೆಚ್ಚು ಗಮನಕೊಡು ಎಂದು ತಂದೆ ಗದರಿದ್ದಕ್ಕೆ 15 ವರ್ಷದ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಜವೀರ್ ಬಘೇಲ್ ಆತ್ಮಹತ್ಯೆ ಮಾಡಿಕೊಂಡ ಬಾಲಕ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಬಾಲಕ ಫ್ರೀ

ಭುಜನೋವೆಂದು ಕ್ಲಿನಿಕ್‌ನಲ್ಲಿ ಇಂಜೆಕ್ಷನ್‌: ಕೊಡಗಿನಲ್ಲಿ ಯುವಕ ಸಾವು

ಕೊಡಗಿನ ಸುಂಟಿಕೊಪ್ಪದಲ್ಲಿ ಭುಜ ನೋವು ಎಂದು ಖಾಸಗಿ ಕ್ಲಿನಿಕ್‌ಗೆ ಹೋಗಿ ಇಂಜೆಕ್ಷನ್‌ ಪಡೆದುಕೊಂಡ ಯುವಕ ಮೃತಪಟ್ಟಿದ್ದಾನೆ. ವಿನೋದ್ (34) ಮೃತಪಟ್ಟ ಯುವಕ. ವಿನೋದ್ ಭುಜ ನೋವು ಬಾಧಿಸುತ್ತಿದೆಯೆಂದು ಸಂಜೆ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್‌ಗೆ ಹೋಗಿದ್ದರು. ಈ ವೇಳೆ ಅಲ್ಲಿ ವೈದ್ಯರು ಅವರಿಗೆ