Saturday, February 14, 2026
Menu

ಅನಿಲ್ ಅಂಬಾನಿಯ 3,000 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆಯಡಿ  ನಡೆಯುತ್ತಿರುವ ತನಿಖೆಯ ಹಿನ್ನೆಲೆಯಲ್ಲಿ ಇಡಿ 3,000 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳು ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಶನ್, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮತ್ತು ಸಂಬಂಧಿತ ಘಟಕಗಳ ಹೆಸರಲ್ಲಿ ಇವೆ. ಮುಂಬೈ, ದೆಹಲಿ, ನೋಯ್ಡಾ, ಗೋವಾ, ಪುಣೆ, ಹೈದರಾಬಾದ್ ಮತ್ತು ಚೆನ್ನೈ ನಗರಗಳಲ್ಲಿರುವ ಫ್ಲಾಟ್‌ಗಳು, ಕಚೇರಿಗಳು ಮತ್ತು ಪ್ಲಾಟ್‌ಗಳು ಇದರಲ್ಲಿ

ದಿನೇಶ್ ಬೀಡಿ ಮಾಲೀಕನ ಕೊಲೆಗೈದು ಮಗ ಆತ್ಮಹತ್ಯೆ

ಮಥುರಾದ ವೃಂದಾವನ ಸಮೀಪದ ಕಾಲೊನಿಯಲ್ಲಿ ಭಾರತದ ಪ್ರಮುಖ ಬ್ರ್ಯಾಂಡ್ ದಿನೇಶ್ 555 ಬೀಡಿಯ ಮಾಲೀಕ ಹಾಗೂ ತಂದೆ ಸುರೇಶ್ ಚಂದ್ ಅವರನ್ನು ಮಗ ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಡಿತದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ.

ವಿದ್ಯಾರ್ಥಿನಿ ಗರ್ಭಿಣಿಯಾಗಲು ನಾನು ಕಾರಣನಲ್ಲ: ವಾಯ್ಸ್‌ ನೋಟ್‌ ಮಾಡಿಟ್ಟು ಪಿರಿಯಾಪಟ್ಟಣದಲ್ಲಿ ಯುವಕ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನೆಂಬ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆತ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪ ಸುಳ್ಳು.

ವೈದ್ಯೆ ಕೃತಿಕಾ ರೆಡ್ಡಿ ಕೊಲೆ: ಮಹೇಂದ್ರ ರೆಡ್ಡಿಗಿತ್ತು ಹಲವು ಯುವತಿಯರ ಸಂಪರ್ಕ

ಇತ್ತೀಚೆಗೆ ಗಂಡ ಮಹೇಂದ್ರ ರೆಡ್ಡಿಯಿಂದಲೇ ಕೊಲೆಯಾಗಿರುವ ವೈದ್ಯೆ ಕೃತಿಕಾ ರೆಡ್ಡಿ ಪ್ರಕರಣದ ವಿಚಾರಣೆಯಲ್ಲಿ ಮಾರತ್ತಹಳ್ಳಿ ಪೊಲೀಸರು ಮಹತ್ವದ ವಿಚಾರವನ್ನು ಬಯಲಿಗೆಳೆದಿದ್ದಾರೆ.  ಆರೋಪಿಗೆ ಹಲವು ಯುವತಿಯರ ಜೊತೆ ಸಂಪರ್ಕ ಇರುವುದು ಪತ್ತೆಯಾಗಿದೆ. 2023 ರಲ್ಲಿ ಮುಂಬೈ ಮೂಲದ ಯುವತಿಯ ಹಿಂದೆ ಬಿದ್ದದ್ದ ಮಹೇಂದ್ರ

ರಾಯಚೂರಿನಲ್ಲಿ ವ್ಯಾಪಾರಿ ಯುವಕನ ಬರ್ಬರ ಹತ್ಯೆ

ರಾಯಚೂರಿನ ಸಿಂಧನೂರು ನಗರದ ಇಂದಿರಾನಗರದಲ್ಲಿ ಪ್ರಾವಿಷನಲ್‌ ಸ್ಟೋರ್ ಹೋಲ್ ಸೇಲ್ ವ್ಯಾಪಾರಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.  ನಾಪತ್ತೆಯಾಗಿದ್ದ ವ್ಯಾಪಾರಿ ಹೆಣವಾಗಿ ಪತ್ತೆಯಾಗಿದ್ದು, ವ್ಯಾಪಾರಿ ಕೈಗಳಿಗೆ ಬೈಡಿಂಗ್ ವೈರ್ ನಿಂದ ಕಟ್ಟಿ ಕಲ್ಲುಗಳಿಂದ ಮುಖ, ಬೆನ್ನಿಗೆ ಜಜ್ಜಿ ಕೊಲೆಗೈಯಲಾಗಿದೆ. ಪ್ರವೀರ್ ಸರ್ದಾರ್(32)

ತೆಲಂಗಾಣದಲ್ಲಿ ಬಸ್​ಗೆ ಲಾರಿ ಡಿಕ್ಕಿ: 20 ಮಂದಿ ಬಲಿ

ಬಸ್​ಗೆ ಲಾರಿ ಡಿಕ್ಕಿ ಹೊಡೆದು ಕನಿಷ್ಠ 20 ಜನರು ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಅಪಘಾತದಲ್ಲಿ 24 ಜನ ಗಾಯಗೊಂಡಿದ್ದಾರೆ. ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ

ಬೈಕ್‌ಗೆ ಆಂಬುಲೆನ್ಸ್‌ ಡಿಕ್ಕಿ ಹೊಡೆದು ಬೆಂಗಳೂರಿನಲ್ಲಿ ದಂಪತಿ ಸಾವು

ಬೆಂಗಳೂರಿನ ಶಾಂತಿನಗರದ ಡಬಲ್ ರೋಡ್‌ನ ಸಂಗೀತ ಸಿಗ್ನಲ್ ಬಳಿ ರೆಡ್‌ ಸಿಗ್ನಲ್‌ ಇದ್ದ ಕಾರಣ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದು ಅಂಬುಲೆನ್ಸ್‌ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಸ್ಮಾಯಿಲ್ (40) ಮತ್ತು ಪತ್ನಿ ಸಮೀನ್

ಶ್ರೀರಂಗಪಟ್ಟಣದಲ್ಲಿ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲು

ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿ ನಡೆದಿದೆ.  ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಬಾಲಕಿಯನ್ನು ರಕ್ಷಣೆ ಮಾಡಿದ್ದರೂ

ಹೊಸಕೋಟೆ ರಸ್ತೆ ಬದಿ ಪೊದೆಯಲ್ಲಿ ನವಜಾತ ಶಿಶು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನವಜಾತ ಹೆಣ್ಣು ಶಿಶುವನ್ನು ಪಾಪಿಗಳು ರಸ್ತೆ ಬದಿ ಎಸೆದು ಹೋಗಿರುವುದು ಪತ್ತೆಯಾಗಿದೆ. ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶು ಬೀದಿಪಾಲಾಗಿದೆ. ದುರುಳರು ಕಪ್ಪು ಬಣ್ಣದ ಬಟ್ಟೆಯಲ್ಲಿ ಕಟ್ಟಿ ಮಗುವನ್ನು ಪೊದೆಗೆ ಎಸೆದು ಹೋಗಿರುವುದು ಹೊಸಕೋಟೆ ನಗರದ

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಬೆಂಗಳೂರಿನಲ್ಲಿ ಮಹಿಳೆಯ ಕೊಲೆ

ಬೆಂಗಳೂರಿನ ಕೆ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ಆಗು ಎಂದು ಒತ್ತಾಯಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ರೇಣುಕಾ ಕೊಲೆಯಾಗಿರುವ ಮಹಿಳೆ, ಅ. 31ರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.