Sunday, September 27, 2026
Menu

ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಹೋಗಿದ್ದ ಟೆಕ್ಕಿ ಭದ್ರಾ ನದಿ ಪಾಲು

ಚಿಕ್ಕಮಗಳೂರು ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ವ್ಯಕ್ತಿ ಅಭಿಷೇಕ್ (27)ಗದಗದವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಭಿಷೇಕ್ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಇತರ ಗೆಳೆಯರೊಂದಿಗೆ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು. ಸ್ನೇಹಿತರೊಂದಿಗೆ ಸ್ಥಳೀಯ ಹೋಂ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಸೋಮವಾರ ಬೆಳಿಗ್ಗೆ ಭದ್ರಾ ನದಿಗೆ ಈಜಲು ತೆರಳಿದ್ದರು. ನೀರಿನ

ಹಾವೇರಿಯಲ್ಲಿ ಟ್ರ್ಯಾಕ್ಟರ್‌ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು

ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ. ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಬಾಲಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಸ್ಥಳದಲ್ಲೇ ಅಸು ನೀಗಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ

ಬೆಂಗಳೂರಿನಿಂದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಬೆಂಗಳೂರು ನಗರದ ನಾನಾ ಕಡೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಕಾರ್ಯಾಚರಣೆ ತೀವ್ರಗೊಂಡಿದ್ದು, 272 ಅಕ್ರಮ ಬಾಂಗ್ಲಾ ವಲಸಿಗರನ್ನು  ಗಡಿಪಾರು ಮಾಡಲಾಗಿದೆ. ಗಹಡಿಪಾರುಗೊಂಡವರಲ್ಲಿ 178 ಪುರುಷರು, 94 ಮಹಿಳೆಯರು ಮತ್ತು 12 ಮಕ್ಕಳು ಸೇರಿದ್ದಾರೆ. ಸಿಸಿಬಿ ಪೊಲೀಸರು

ಮದುವೆಯಾಗುತ್ತಿಲ್ಲವೆಂದು ನೊಂದ ಕಡೂರು ಕುರಿಗಾಹಿ ಯುವಕ ಸುಸೈಡ್‌

ಮದುವೆ ವಯಸ್ಸು ಮೀರಿದರೂ ಹೆಣ್ಣು ಸಿಗುತ್ತಿಲ್ಲ ಎಂದು ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಕಡೂರು ತಾಲೂಕಿನ ಬೋರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಮೃತಪಟ್ಟವರು. ಕಡೂರು

ಕುಡಿಯಲು ನೀರು ಕೇಳಿ ಬಂದು ಮಹಿಳೆಯ ಕಟ್ಟಿ ಹಾಕಿ ಅತ್ಯಾಚಾರ

ಕುಡಿಯಲು ನೀರು ಬೇಕೆಂದು ಕೇಳಿಕೊಂಡು ಮನೆಗೆ ಬಂದಾತ ಮಹಿಳೆ ನೀರು ತರಲು ಒಳಗೆ ಹೋದಾಗ ನುಗ್ಗಿ ಕೈ ಕಟ್ಟಿ ಚಾಕು ತೋರಿಸಿ ಬೆದರಿಸಿ ಅತ್ಯಾಚಾರ ನಡೆಸಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆಯು ಮನೆಯಲ್ಲಿ ಒಬ್ಬರೇ

ನಾಸಿಕ್‌ನಲ್ಲಿ ರಾತ್ರಿ ಕಾರು ಬಾವಿಗೆ ಉರುಳಿ ಒಂದೇ ಕುಟಂಬದ 9 ಜನ ಸಾವು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಕಾರೊಂದು ಬಾವಿಗೆ ಉರುಳಿ ಬಿದ್ದು, ಮಕ್ಕಳು ಸೇರಿ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ತಡರಾತ್ರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ಮುಂದುವರಿದಿದೆ.

ಪೋಕ್ಸೋ: ಖಾಸಗಿ ಆಸ್ಪತ್ರೆಗಳಿಗೆ ಮಾರ್ಗಸೂಚಿ

ಪೋಕ್ಸೋ ಕಾಯ್ದೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣದ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟ ಮಾಡಿದೆ. ಕಡ್ಡಾಯವಾಗಿ ವರದಿ ಮತ್ತು ಕ್ರಮದ ಬಗ್ಗೆ ಮಾರ್ಗಸೂಚಿ ಪ್ರಕಟ ಮಾಡಿದ್ದು, ಎಲ್ಲಾ ಆಸ್ಪತ್ರೆಗಳು ಈ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಬಳ್ಳಾರಿಯ ನವ ವಿವಾಹಿತ ಜೋಡಿ ಅಪಘಾತಕ್ಕೆ ಬಲಿ

ಮದುವೆಯಾಗಿ ಒಂದು ತಿಂಗಳಷ್ಟೇ ಆಗಿದ್ದ ಬಳ್ಳಾರಿಯ ನವಜೋಡಿಯೊಂದು ದೊಡ್ಡಬಳ್ಳಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಕ್ಷಿತಾ (24) ಮತ್ತು ಬೆಂಗಳೂರಿನ ಪವನ್ (29) ಕಳೆದ ತಿಂಗಳು ಮದುವೆಯಾಗಿದ್ದರು.

ಕುಕ್‌ನ ಕೊಲೆಗೈದು ಶವ ಕಾರಲ್ಲಿಟ್ಟುಕೊಂಡು ಸುತ್ತಾಡಿದ ಕೆಫೆ ಮಾಲೀಕ ಅರೆಸ್ಟ್‌

ಶಿವಮೊಗ್ಗದ ಸಾಗರ ಪಟ್ಟಣದ ಕೆಫೆಯೊಂದರ ಮಾಲೀಕ ಇಮ್ರಾನ್‌ ಎಂಬಾತ ಕುಕ್‌ ಟಿಂಕೂ ಶರ್ಮಾ ಎಂಬ ಯುವಕನನ್ನು ಸ್ನೂಕರ್ ಸ್ಟಿಕ್‌ನಿಂದ ಕೊಲೆ ಮಾಡಿ ಶವವನ್ನುಕಾರಿನಲ್ಲಿ ಇಟ್ಟುಕೊಂಡು ಇಡೀ ದಿನ ಊರು ಸುತ್ತಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಹಣಕಾಸಿನ ಸಣ್ಣ ವಿವಾದದಿಂದ ಆರಂಭವಾದ