Friday, September 25, 2026
Menu

ಗಣೇಶ ಮೂರ್ತಿ ಒಯ್ಯುವಾಗ ವಿದ್ಯುತ್‌ ತಂತಿ ತಗುಲಿ ಯುವಕ ಸಾವು

ರಾಯಚೂರಿನ ಸಿರವಾರ ತಾಲೂಕಿನಲ್ಲಿರುವ ಅತ್ತನೂರು ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಪ್ರತಿಷ್ಠಾಪನೆಗಾಗಿ ತರುತ್ತಿದ್ದ ಗಣೇಶ ಮೂರ್ತಿ ಉರುಳಿ ಬಿದ್ದು, ಯುವಕ ಮೃತಪಟ್ಟಿದ್ದಾನೆ. ೨೭ ವರ್ಷದ ಪ್ರೇಮ್‌ ಕುಮಾರ್‌ ಮೃತಪಟ್ಟ ಯುವಕ. ಪ್ರತಿಷ್ಠಪನೆಗಾಗಿ ಗಣೇಶ ಮೂರ್ತಿ ಕೊಂಡೊಯ್ಯುತ್ತಿದ್ದಾಗ ವಿದ್ಯುತ್ ತಂತಿ ತಾಗಿ ಮೂರ್ತಿ ಉರುಳಿಬಿದ್ದಿದೆ. ಮೂರ್ತಿ ಬಿದ್ದ ರಭಸಕ್ಕೆ ತಂತಿ ಕಟ್‌ ಆಗಿ ಲಾರಿಯಲ್ಲಿ ಮಲಗಿದ್ದ ಯುವಕನ ಮೇಲೆ ಬಿದ್ದಿದೆ. ವಿದ್ಯುತ್‌ ಸ್ಪರ್ಶಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಉಳಿದ ಯುವಕರು ಲಾರಿಯಿಂದ ಹೊರಗೆ

ತಿರುಪತಿ ದೇಗುಲದಿಂದ ವಾಪಸಾಗುತ್ತಿದ್ದ ನಾಲ್ವರು ಕೋಲಾರದಲ್ಲಿ ಅಪಘಾತಕ್ಕೆ ಬಲಿ

ಕೋಲಾರ ತಾಲೂಕಿನ ದೊಡ್ಡಕಾರಿ ಬಳಿ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದ ಶಾರದಮ್ಮ(70), ದೀಕ್ಷಿತಾ (25), ದೇವೇಂದ್ರ ಕುಮಾರ್ (41), ಜಿಷ್ಣು (13) ಮೃತಪಟ್ಟವರು. ಚಾಲಕ ವಿಕಾಸ್, ನೀತು,

ರಾಜ್ಯದಲ್ಲಿ 582ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ

ರಾಜ್ಯದಲ್ಲಿ 582ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆ ಹಚ್ಚಿ ಆರೋಗ್ಯ ಇಲಾಖೆಯು ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಹೈಕೋರ್ಟ್ ಆದೇಶದ ಬಳಿಕ 2025 ರಲ್ಲಿ ನಕಲಿ ವೈದ್ಯರ ಪತ್ತೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ನಕಲಿ ಔಷಧ ಜಾಲ ಹಾಗೂ ನಕಲಿ ವೈದ್ಯರ

ದೆಹಲಿಯಲ್ಲಿ ಪಿಜಿ ಕುಸಿದು ಆರು ವಿದ್ಯಾರ್ಥಿಗಳ ಸಾವು

ದೆಹಲಿಯ ಸತ್ಯನಿಕೇತನ್‌ ಪ್ರದೇಶದಲ್ಲಿ ಭಾನುವಾರ ಯುವಕರ ಪಿಜಿ ಕಟ್ಟವೊಂದು ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ಹನ್ನೊಂದು ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಬಾಲಕರ ಪಿಜಿ ವಸತಿ ಕಟ್ಟಡ ಕುಸಿದು ಈ ದುರಂತ

ಗದಗ ಮೀಟರ್‌ ಬಡ್ಡಿ ದಂಧೆ: 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ, ಕುಟುಂಬ ಬೀದಿಗೆ

ಗದಗ ಜಿಲ್ಲೆಯಲ್ಲಿ ಮೀಟರ್‌ ಬಡ್ಡಿ ದಂಧೆ ಮಿತಿ ಮೀರಿದ್ದು, ಸಾಲ ಪಡೆದವರ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳನ್ನು ಸಾಲ ನೀಡಿದವರು ದರೋಡೆ ಮಾಡುತ್ತಿದ್ದಾರೆ. ಬಡ್ಡಿ ರಾಕ್ಷಸರು 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ ಮಾಡಿದ್ದು, ಕಟುಂಬ ಮನೆ

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: 8 ವಿದ್ಯಾರ್ಥಿಗಳ ಸಾವು

ತಿರುವನಂತಪುರದಲ್ಲಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಎಂಟು ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ತಮಿಳುನಾಡಿನ ಸೇಲಂನ ವಿಶ್ವ (20), ದಿಂಡಿಗಲ್‌ನ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈನ ಸಂತೋಷ್ (20) ಮತ್ತು ಪ್ರಸನ್ನ ಮೃತಪಟ್ಟವರು

ಬೇಲೂರಿನಲ್ಲಿ ದೂರು ನೀಡಲು ಹೋದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ

ಹಣಕಾಸಿಗೆ ಸಂಬಂಧಿಸಿದಂತೆ ಗಲಾಟೆ ನಡೆದ ಬಗ್ಗೆ ದೂರು ನೀಡಲೆಂದು ಬೇಲೂರು ಪೊಲೀಸ್‌ ಠಾಣೆಗೆ ಹೋಗಿದ್ದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೇಲೂರು ಕಬ್ಬಿನಮನೆ ಗ್ರಾಮದ ಪ್ರಕಾಶ್‌ ಎಂಬವರ ಮೇಲೆ ಮಹಿಳಾ ಕಾನ್ಸ್‌ಟೇಬಲ್ ಲಾವಣ್ಯ ಲಾಠಿಯಿಂದ ಹಲ್ಲೆ

ಮಾನಸಿಕ ಅಸ್ವಸ್ಥೆ ಮೇಲೆ ದೌರ್ಜನ್ಯ ಯತ್ನ: ಕಚ್ಚಿ ಬಾಲಕನ ಓಡಿಸಿದ ಬೀದಿ ನಾಯಿ

ತಮಿಳುನಾಡಿನ ಕೊಯಂಬತ್ತೂರಿನ ರಸ್ತೆಬದಿಯಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಬಾಲಕನನ್ನು ಬೀದಿನಾಯಿ ಕಚ್ಚಿ ಓಡಿಸಿದ ಘಟನೆ ನಡೆದಿದೆ. ರಸ್ತೆಬದಿಯಲ್ಲಿದ್ದ ಅಸಹಾಯಕ ಹಾಗೂ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಬಾಲಕ ದೌರ್ಜನ್ಯ ಎಸಗಲು ಮುಂದಾದಾಗ ಬೀದಿ ನಾಯಿ ಆತನ

ಬಾಗಲಕೋಟೆ ಶಾಲೆ ಛಾವಣಿ ಕುಸಿತ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ತರಗತಿ ನಡೆಯುತ್ತಿರುವಾಗ ಛಾವಣಿ ಕುಸಿದು ಮಕ್ಕಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿ ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲಾಖೆಯ ಆಯುಕ್ತ, ಹೆಚುವರಿ ಆಯುಕ್ತ, ಬಾಗಲಕೋಟೆ ಜಿಲ್ಲಾಧಿಕಾರಿ,

ಐಪಿಎಸ್‌ ಅಧಿಕಾರಿ ಹೆಸರಿನಲ್ಲಿ ಫೇಸ್ಬುಕ್‌ ಮೂಲಕ ಜನರಿಗೆ ವಂಚನೆ: ರಾಜಸ್ಥಾನದ ಬಾಲಕ ಅರೆಸ್ಟ್‌

ಬೆಂಗಳೂರಿನಲ್ಲಿರುವ ಐಪಿಎಸ್‌ ಅಧಿಕಾರಿಯ ಹೆಸರಿನಲ್ಲಿ ನಕಲಿ ಫೇಸ್ಬುಕ್‌ ಖಾತೆ ಸೃಷ್ಟಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದ ೧೭ ವರ್ಷದ ರಾಜಸ್ಥಾನದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಐಪಿಎಸ್ ಅಧಿಕಾರಿ ನಾರಾಯಣ ಎಂ ಅವರ ಹೆಸರಿನಲ್ಲಿ ಆರೋಪಿ ನಕಲಿ