Menu

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಶಿವಮೊಗ್ಗ ಕಾನ್‌ಸ್ಟೆಬಲ್‌

ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್‌ ಹೆಡ್‌  ಕಾನ್‌ಸ್ಟೆಬಲ್‌  ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೆಡ್‌ ಕಾನ್‌ಸ್ಟೇಬಲ್‌ ಮೊಹಮದ್‌ ಝಕ್ರಿಯ (55)  ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಕೆಲವು ದಿನದಿಂದ ಮೊಹಮದ್‌ ಝಕ್ರಿಯ  ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಡ್ಯೂಟಿಗೆ ಬಂದಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗ ಹಾಸ್ಟೆಲ್ ಕೊಠಡಿಯಲ್ಲಿಯೇ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ (ಸಿಮ್ಸ್) ಹಾಸ್ಟೆಲ್ ಕೊಠಡಿಯಲ್ಲಿ ನಡೆದಿದೆ. ಮೆಡಿಕಲ್ ಕಾಲೇಜ್ ನಲ್ಲಿ ಎಂಡಿ ರೇಡಿಯಾಲಜಿ ಅಭ್ಯಾಸ ಮಾಡುತ್ತಿದ್ದ  ಮಧುಗಿರಿ ಮೂಲದ ಸಂದೀಪ್ ರಾಜ್ (28) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ .

ಅಕ್ಕ-ಪಕ್ಕದ ಮನೆಯವರ ಜಗಳ 6 ವರ್ಷದ ಬಾಲಕಿ ಕೊಲೆಯಲ್ಲಿ ಅಂತ್ಯ

ಕ್ಷುಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತಾಯಿಗೆ ಬುದ್ದಿ ಕಲಿಸಲು ಆಕೆಯ 6 ವರ್ಷದ ಮಗಳನ್ನು ಬರ್ಬರವಾಗಿ ಕೊಂದು ಶವವನ್ನು ಚರಂಡಿಗೆ ಎಸೆದ ವಿಕೃತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್‌ಫೀಲ್ಡ್ ಸಮೀಪದ ನಲ್ಲೂರಳ್ಳಿಯಲ್ಲಿ ಮಂಗಳವಾರ ನೆರೆಹೊರೆಯವರ ನಡುವಿನ ದ್ವೇಷಕ್ಕೆ ಪಶ್ಚಿಮ ಬಂಗಾಳ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್

ಮೈಸೂರು ಕೋರ್ಟ್ ಗೆ ಬಾಂಬ್ ಬೆದರಿಕೆ ಕರೆ

ಸಾಂಸ್ಕೃತಿಕ ನಗರಿ ಮೈಸೂರಿನ ಹಳೆ ನ್ಯಾಯಾಲಯಕ್ಕೆ ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಬಹಿಷ್ಕರಿಸಿ ಎಲ್ಲರೂ ಹೊರ ಬಂದ ಘಟನೆ ನಡೆದಿದೆ. ಎಂದಿನಂತೆ ಹಳೆ ಕೋರ್ಟ್ ನಲ್ಲಿ ಕಲಾಪಗಳು ನಡೆಯುತ್ತಿದ್ದವು. ಈ ವೇಳೆ ಹುಸಿ ಬಾಂಬ್ ಬೆದರಿಕೆ ಕರೆ

ಬೆಂಗಳೂರಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಮನೆಗೆಲಸದ ದಂಪತಿ ಅರೆಸ್ಟ್‌

ಬೆಂಗಳೂರಿನ ಸದಾಶಿವನಗರದ ನಿವಾಸಿಯೊಬ್ಬರ ಮನೆಯಲ್ಲಿ ನಾಲ್ಕು ವರ್ಷಗಳಿಂದ ಕೆಲಸಕ್ಕಿದ್ದ ಮಹಿಳೆ ಮತ್ತು ಆಕೆಯ ಪತಿ ಸೇರಿ 1.37 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಸದಾಶಿವನಗರದ ನಿವಾಸಿ ಅಭಿಷೇಕ್ ಅವರ ಮನೆಯಲ್ಲಿ ಪಶ್ಚಿಮ ಬಂಗಾಳದ ಹಾಜೀರಾ

ದಾವಣಗೆರೆಯಲ್ಲಿ ಬೈಕ್‌ಗೆ ಗುದ್ದಿದ ಅಪರಿಚಿತ ವಾಹನ: ಸವಾರ ಸಾವು

ದಾವಣಗೆರೆಯ ಶಿರಮಗೊಂಡನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಸವಾರ ಮಂಜುನಾಥ (27) ಮೃತಪಟ್ಟ ಯುವಕ. ಗದಗ ಶಿಂಗ್ಲಿ ಗ್ರಾಮದ ಮಂಜುನಾಥ ಬೈಕ್‌ನಲ್ಲಿ ಬೆಂಗಳೂರಿಗೆ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ

ಕೆಎಸ್‌ಆರ್‌ಟಿಸಿ ಬಸ್‌ಗೆ ಟಿಪ್ಪರ್ ಡಿಕ್ಕಿ: 9 ಮಂದಿಗೆ ಗಾಯ

ಟಿಪ್ಪರ್ ಲಾರಿ, ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ವಿದ್ಯಾರ್ಥಿಗಳು ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಡುಪಿಯ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನ ಹಾಜರಿ ಬಳಿ ನಡೆದಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಬರುತ್ತಿದ್ದ ಕೇರಳ

ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, 35 ಮಂದಿ ಬಲಿ

ಇರಾನ್‌ನಲ್ಲಿ ಆರ್ಥಿಕ ಬಕ್ಕಟ್ಟು ತೀವ್ರಗೊಂಡಿದ್ದು, ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನ ಪ್ರತಿಭಟನೆ ಆರಂಭಿಸಿದ್ದು, 35ಕ್ಕೂ ಹೆಚ್ಚು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಇರಾನ್‌ನಲ್ಲಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ಸಾರ್ವಜನಿಕರು ಬಂಡೆದಿದ್ದಾರೆ. 1,200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಸರ್ಕಾರ,

ಬಾಂಗ್ಲಾದಲ್ಲಿ ಹಿಂದೂ ಪತ್ರಕರ್ತನ ಹತ್ಯೆ, ಹಿಂದೂ ಮಹಿಳೆಯ ಅತ್ಯಾಚಾರ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, 40 ವರ್ಷದ ಹಿಂದೂ ಮಹಿಳೆ ಮೇಲೆ  ಇಬ್ಬರು ಅತ್ಯಾಚಾರ ಎಸಗಿ ಮರಕ್ಕೆ ಕಟ್ಟಿಹಾಕಿ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಜೆನಿಹಾದಾಹ್ ವಿಭಾಗೀಯ ಜಿಲ್ಲೆಯಾದ ಕಾಲಿಂಗಜ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು