ಅಪರಾಧ
ನಟಿಗೆ ಲೈಂಗಿಕ ಕಿರುಕುಳ ಆರೋಪ: ನಿರ್ಮಾಪಕ ಹೇಮಂತ್ ಕುಮಾರ್ ಅರೆಸ್ಟ್
ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನಿರ್ಮಾಪಕ ಹೇಮಂತ್ ಕುಮಾರ್ ಲೈಂಗಿಕ ಕಿರುಕುಳ ನೀಡಿರುವುದಾಗಿ ನಟಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೇಮಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. 2022 ರಲ್ಲಿ ರಿಚ್ಚಿ ಹೆಸರಿನಲ್ಲಿ ಸಿನಿಮಾ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಂಡು, ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಎರಡು ಲಕ್ಷ ರೂ. ಒಪ್ಪಂದವಾಗಿತ್ತು. ಮುಂಗಡ ಹಣವಾಗಿ
ಕೊಪ್ಪಳದಲ್ಲಿ ಹುಲಿಗೆಮ್ಮ ದೇಗುಲ ಪಾದಯಾತ್ರೆ: ಬಸ್ ಹರಿದು ಮೂವರು ಭಕ್ತರ ಸಾವು
ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ. ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19)
ಬೆಂಗಳೂರಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ
ಬೆಂಗಳೂರಿನ ವೀರಣ್ಣಪಾಳ್ಯ ಲೇಬರ್ ಶೆಡ್ ನಲ್ಲಿ ಸ್ನೇಹಿತ ನಡುವೆ ಶುರುವಾಗಿದ್ದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯಗೊಂಡಿದೆ. ಜಾರ್ಖಂಡ್ ಮೂಲದ ರಾಜು ಕೊಲೆಯಾದವ, ಸ್ನೇಹಿತ ರಾಘು ಕೊಲೆಗಾರ. ಒಂದೇ ಶೆಡ್ ನಲ್ಲಿ ನಾಲ್ವರು ಸ್ನೇಹಿತರು ವಾಸ್ತವ್ಯವಿದ್ದರು. ಎರಡು ದಿನದ ಹಿಂದೆ ರಾಜು ಮತ್ತು
ಬಂಗಾರಪೇಟೆ: ಎಕ್ಸ್‌ಪ್ರೆಸ್ ಹೈವೇನಲ್ಲಿ ಅಪಘಾತಕ್ಕೆ ಮೂವರು ಬಲಿ
ಕೋಲಾರದ ಬಂಗಾರಪೇಟೆ ತಾಲೂಕಿನ ಕಲ್ಕೆರೆ ಬಳಿ ಸೋಮವಾರ ರಾತ್ರಿ ಬೆಂಗಳೂರು- ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಶಿವರಾಜ್ , ಅಶೋಕ, ವಿಕ್ರಂಪಾಲ್ ಮೃತಪಟ್ಟವರು. ಅಡುಗೆ ಕ್ಯಾಟರಿಂಗ್ ಗೆ ತೆರಳುತ್ತಿದ್ದ ಟೆಂಪೋ ಹಾಗೂ ಈಚರ್ ವಾಹನ ಡಿಕ್ಕಿಯಾಗಿ
ಹಿರಿಯೂರಿನಲ್ಲಿ ಶೀಲ ಶಂಕಿಸಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕಣಜನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಶೀಲ ಶಂಕಿಸಿ ಆಕೆಗೆ ಪೆಟ್ರೋಲ್ ಸುರಿದು ಬೆಂಕ ಹಚ್ಚಿ ಕೊಂದಿದ್ದಾನೆ. ಸುನೀತಾ (25) ಕೊಲೆಯಾದ ಮಹಿಳೆ, ಆಕೆಯ ಪತಿ ಲಿಂಗರಾಜ್ ಕೊಲೆಗಾರ. ನಾಲ್ಕು ವರ್ಷಗಳ ಹಿಂದೆ ಲಿಂಗರಾಜ್ ಹಾಗೂ ಸುನೀತಾ
ಸುಪ್ರೀಂ ಸಿಜೆಐ ಮೇಲೆ ಷೂ ಎಸೆದ ವಕೀಲನ ಬಂಧನ
ಸುಪ್ರೀಂಕೋರ್ಟ್‌ನಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮೇಲೆ ಶೂ ಎಸೆದಿದ್ದು, ಆರೋಪಿಯನ್ನು ರಾಕೇಶ್ ಕಿಶೋರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ತಕ್ಷಣವೇ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸುವ ಕುರಿತಾದ ವಿಚಾರಣೆಯ ಸಂದರ್ಭದಲ್ಲಿ
ಮ್ಯಾಟ್ರಿಮೊನಿಯಲ್ಲಿ ಸಿಕ್ಕ ಯುವ ಪ್ರಿಯಕರ: ನಿವೃತ್ತ ಶಾಲಾ ಶಿಕ್ಷಕಿಗೆ 2.3 ಕೋಟಿ ರೂ. ವಂಚನೆ
ಬೆಂಗಳೂರಿನ ನಿವೃತ್ತ ಶಾಲಾ ಶಿಕ್ಷಕಿಯೊಬ್ಬರು ಮ್ಯಾಟ್ರಿಮೊನಿಯಲ್ಲಿ ಪರಿಚಯವಾಗಿ ಸ್ನೇಹಿತನಾದ ಯುವಕನ ಮಾತು ನಂಬಿ 2.3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. 4 ವರ್ಷಗಳಲ್ಲಿ ಈ ಪ್ರಮಾಣದ ಹಣ ಕಳೆದುಕೊಂಡಿರುವ ಶಿಕ್ಷಕಿ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಬೆಂಗಳೂರು ಮೂಲದ 59 ವರ್ಷದ ಮಹಿಳೆ ಹಲವು
ಕಾಮಾಕ್ಷಿಪಾಳ್ಯದಲ್ಲಿ ರಿವರ್ಸ್ ತೆಗೆಯುತ್ತಿದ್ದ ಕಾರಿಗೆ ಮಗು ಬಲಿ
ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಿವರ್ಸ್ ತೆಗೆಯುತ್ತಿದ್ದ ಕಾರು ಹರಿದು ಹನ್ನೊಂದು ತಿಂಗಳ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಮಗುವನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ವಾಸಿಸುತ್ತಿರುವ ಸ್ವಾಮಿ ಎಂಬವರ ಮನೆಯಲ್ಲಿ ಕುಣಿಗಲ್‌ನಿಂದ ಬಂದಿದ್ದ
ಪತಿ, ಮಕ್ಕಳಿದ್ದರೂ ಅಕ್ರಮ ಸಂಬಂಧ: ಪ್ರಿಯಕರನ ಜೊತೆ ತನ್ನ ಸ್ನೇಹಿತೆಯ ನೋಡಿ ಬಸವೇಶ್ವರ ನಗರದಲ್ಲಿ ಮಹಿಳೆ ಆತ್ಮಹತ್ಯೆ
ತನ್ನ ಆಪ್ತ ಸ್ನೇಹಿತೆಯೇ ತನ್ನ ಪ್ರಿಯಕರನ ಜೊತೆ ಸಂಬಂಧದಲ್ಲಿ ಇರುವುದನ್ನು ಕಂಡ ವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಬಸವೇಶ್ವರ ನಗರದ ಕೆ ಹೆಚ್ ಬಿ ಕಾಲೊನಿಯಲ್ಲಿರುವ ಓಯೋ ಚಾಂಪಿನಿಯನ್ ಕಂಫರ್ಟ್ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ ಇಬ್ಬರು ಮಕ್ಕಳಿರುವ ಯಶೋಧಾ (38)
ಜೈಪುರ ಆಸ್ಪತ್ರೆಯಲ್ಲಿ ಬೆಂಕಿ: ಎಂಟು ರೋಗಿಗಳು ಸಜೀವ ದಹನ
ಜೈಪುರದ ಸವಾಯಿ ಮಾನ್ ಸಿಂಗ್ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಬೆಂಕಿ ಹೊತ್ತಿಕೊಂಡು ಎಂಟು ರೋಗಿಗಳು ಸಜೀವ ದಹನವಾಗಿ ಹೋಗಿರುವ ದಾರುಣ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಐವರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳನ್ನು ಸ್ಥಳೀಯ




