ಅಪರಾಧ
ಶಾಸಕ ವಿನಯ್ ಕುಲಕರ್ಣಿ- ಐಶ್ವರ್ಯ ಗೌಡ ಕೋಟ್ಯಂತರ ರೂ. ವ್ಯವಹಾರ: ಇಡಿ ತನಿಖೆಯಲ್ಲಿ ಬಯಲು
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh) ಹೆಸರು ಬಳಸಿ ವಂಚಿಸಿದ್ದ ಐಶ್ವರ್ಯಾ ಗೌಡ ಪ್ರಕರಣದ ತನಿಖೆಯನ್ನು ಇಡಿ ಚುರುಕುಗೊಳಿಸಿದ್ದು, ತನಿಖೆ ವೇಳೆ ಹಲವು ಸ್ಫೋಟಕ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಇಡಿ ಅಧಿಕಾರಿಗಳು ಐಶ್ವರ್ಯಾ ಗೌಡ, ಶಾಸಕ ವಿನಯ್ ಕುಲಕರ್ಣಿ ಹಾಗೂ ಶಿಲ್ಪಾಗೌಡ ನಿವಾಸ ಸೇರಿ 14 ಕಡೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದಾರೆ. ಶಾಸಕ ವಿನಯ್ ಕುಲಕರ್ಣಿ ಮತ್ತು ಐಶ್ವರ್ಯ ಗೌಡ ಇಬ್ಬರೂ ಸೇರಿ ಕೋಟ್ಯಂತರ ರೂ. ವ್ಯವಹಾರ
ಸಹಕಾರ ಬ್ಯಾಂಕ್‌ಗಳಿಗೆ ವಂಚನೆ: ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ದೋಷಾರೋಪ ಪಟ್ಟಿ
ಸಹಕಾರ ಬ್ಯಾಂಕ್‌ಗಳಿಗೆ 439.12 ಕೋಟಿ ರೂ. ವಂಚನೆ ಪ್ರಕರಣ ಸಂಬಂಧ ಶಾಸಕ ರಮೇಶ್ ಜಾರಕಿಹೊಳಿ ಮತ್ತವರ ಇಬ್ಬರು ಆಪ್ತರ ವಿರುದ್ಧ ಸಿಐಡಿ ನ್ಯಾಯಾಲಯಕ್ಕೆ ನಾಲ್ಕು ಸಾವಿರಕ್ಕೂ ಹೆಚ್ಚಿನ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಹಾಗೂ ಅದರ ಸಮೂಹದ
ಡಿಪೋ ವ್ಯವಸ್ಥಾಪಕನ ಕಿರುಕುಳಕ್ಕೆ ಬೇಸತ್ತು ಚಾಲಕ ಆತ್ಮಹತ್ಯೆಗೆ ಯತ್ನ
ಲಿಂಗಸುಗೂರು ಪಟ್ಟಣದ ಬಸ್ ಡಿಪೋ ವ್ಯವಸ್ಥಾಪಕ ರಾಹುಲ್ ಅವರ ಕಾರ್ಯವೈಖರಿಗೆ ಬಸ್ ಚಾಲಕ ಅಬ್ದುಲ್ ಸಾಬ ಬೇಸತ್ತು ಬಸ್ ಡಿಪೋದಲ್ಲೇ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪತ್ರಕರ್ತರ ಜೊತೆ ಚಾಲಕ ಮಾತನಾಡಿ, ನಾನು 18ವರ್ಷದಿಂದ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ವ್ಯವಸ್ಥಾಪಕ
ಭಾರತದಿಂದ ಪ್ರತೀಕಾರದ ಭೀತಿ: ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ತನ್ನ ಮೇಲೆ ದಾಳಿ ನಡೆಸಬಹುದು ಎಂಬ ಭೀತಿಯಲ್ಲಿರುವ ಪಾಕಿಸ್ತಾನ ತನ್ನ ಕ್ಷಿಪಣಿ ಪರೀಕ್ಷೆಗೆ ಮುಂದಾಗಿದೆ. ವಿಶೇಷ ಆರ್ಥಿಕ ವಲಯದೊಳಗಿನ ಕರಾಚಿ ಕರಾವಳಿಯಲ್ಲಿ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆಯನ್ನು ನಡೆಸಲು ಕ್ರಮ ಕೈಗೊಂಡಿರುವುದಾಗಿ ರಕ್ಷಣಾ
ಓಂ ಪ್ರಕಾಶ್ ಹತ್ಯೆ: ಮಗಳ ವಿಚಾರಣೆ, ಪ್ರಕರಣ ಸಿಸಿಬಿಗೆ
ಮಾಜಿ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪಲ್ಲವಿ ಮತ್ತು ಮಗಳು ಕೃತಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಅದೇ ದಿನ ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ಬಳಿಕ ಪಲ್ಲವಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಮಗಳು ಕೃತಿಯ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ: ಇಬ್ಬರ ಬಂಧನ
ಧಾರವಾಡದ ಗಾಂಧಿಚೌಕ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ನಾಲ್ವರು ಯುವಕರು ಆರ್‌ಎಸ್‌ಎಸ್ ಮುಖಂಡ ಶಿರೀಶ್ ಬಳ್ಳಾರಿ ಹಾಗೂ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಗರೇಟು ಸೇದುತ್ತಿದ್ದ ನಾಲ್ವರಿಗೆ ಶಿರೀಶ್ ಅವರು ಬುದ್ಧಿವಾದ ಹೇಳಿದ್ದಾರೆ. ಇದನ್ನೇ ಮುಂದಿಟ್ಟುಕೊಂಡು ನಾಲ್ವರು
ಕಾಶ್ಮೀರದಲ್ಲಿ ಉಗ್ರರ ದಾಳಿ, ಹತ್ಯೆಗೆ ನಟ ನಟಿಯರು ಖಂಡನೆ
ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದು ಮೂವತ್ತು ಮಂದಿಯನ್ನು ಹತ್ಯೆ ಮಾಡಿರುವ ಬಗ್ಗೆ ಸ್ಯಾಂಡಲ್‌ವುಡ್ ನಟ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿ ಈ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು
ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್: ಬೆಂಗಳೂರು ಐಎಎಸ್ ಅಧಿಕಾರಿಗೆ ವಂಚನೆ
ಯುಟ್ಯೂಬ್ ಚಾನಲ್ವೊಂದರಲ್ಲಿ ಬಂದ ಜಾಹೀರಾತು ನೋಡಿ ಆನ್ಲೈನ್ನಲ್ಲಿ ಸೀರೆ ಬುಕ್ ಮಾಡಿದ್ದ ಮಹಿಳಾ ಐಎಎಸ್ ಅಧಿಕಾರಿಯೊಬ್ಬರು ವಂಚನೆಗೊಳಗಾಗಿ ಪೊಲೀಸ್‌ಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರಾತು ನೋಡಿ ವಸ್ತುಗಳನ್ನು ಕೊಂಡುಕೊಳ್ಳುವ ಮುನ್ನ ಎಚ್ಚರ ವಹಿಸುವಂತೆ ಸಕಾಲ ಮಿಷನ್ ನಿರ್ದೇಶಕಿ ಪಲ್ಲವಿ
ರನ್ಯಾ ರಾವ್, ತರುಣ್ ರಾಜು ಜಾಮೀನು ಅರ್ಜಿಗಳ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾರಾವ್ ಹಾಗೂ ಉದ್ಯಮಿ ತರುಣ್ ರಾಜು ಅವರ ಜಾಮೀನು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಜಾಮೀನು ಅರ್ಜಿಗಳ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್
ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್ ಜೈಶಂಕರ್ ಜೊತೆ ಪ್ರಧಾನಿ ಸಭೆ
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ




