Tuesday, December 30, 2025
Menu

ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದಾಳಿಯ ಮಾಸ್ಟರ್‌ ಮೈಂಡ್‌ ಪಾಕ್‌ ಸೇನೆಯ ಆಪ್ತ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳ ಹತ್ಯೆ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್ ಎನ್ನುವುದು ದೃಢಪಟ್ಟಿದೆ. ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ. ಲಷ್ಕರ್‌ ಸಂಘಟನೆಯ ಟಾಪ್‌ ಕಮಾಂಡರ್‌ ಆಗಿರುವ ಸೈಫುಲ್ಲಾ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಹಿಂದೆ ಇರುವುದಾಗಿ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ

ಕಾಶ್ಮೀರದಲ್ಲಿ ಉಗ್ರರ ದಾಳಿ: ಮುಂಬೈ, ದಿಲ್ಲಿಗಳಲ್ಲಿ ಪೊಲೀಸ್‌ ಅಲರ್ಟ್‌

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಬೆನ್ನಲ್ಲೇ ಮುಂಬೈ ಮತ್ತು ದೆಹಲಿ ಪೊಲೀಸರು ಅಲರ್ಟ್‌ ಆಗಿದ್ದಾರೆ. ಮುಂಬೈ ಮತ್ತು ದೆಹಲಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಪ್ರವಾಸಿ ತಾಣಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ನಿಗಾ ವಹಿಸುವಂತೆ ಉನ್ನತ ಅಧಿಕಾರಿಗಳು ಸೂಚನೆ

ಬೆಳಗಾವಿಯಲ್ಲಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಮಹಿಳೆಯ ಕೊಲೆಗೈದು ಚಿನ್ನಾಭರಣ ಕಳವು

ಬೆಳಗಾವಿ ಜಿಲ್ಲೆಯ ಗಣೇಶಪುರದ ಲಕ್ಷ್ಮಿ ನಗರದಲ್ಲಿ ಅಪಾರ್ಟ್​ಮೆಂಟ್​ಗೆ ನುಗ್ಗಿ ಮಂಗಳಸೂತ್ರ ಕಿತ್ತುಕೊಂಡು ಕತ್ತು ಹಿಸುಕಿ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಲಕ್ಷ್ಮಿ ನಗರದ ನಿವಾಸಿ ಅಂಜನಾ ಅಜೀತ ದಡ್ಡೀಕರ್(53) ಕೊಲೆಯಾದವರು. ಅಪಾರ್ಟ್​ಮೆಂಟ್ ಮನೆಯಲ್ಲಿ ಗಂಡ-ಹೆಂಡತಿ ಮಾತ್ರ ವಾಸವಾಗಿದ್ದರು. ಪತಿ ಅಜಿತ್ ಆಟೋ

ಕನ್ನಡಿಗನ ಮೇಲೆ ವಿಂಗ್ ಕಮಾಂಡರ್ ಹಲ್ಲೆ: ಸೂಕ್ತ ಕಾನೂನು ಕ್ರಮಕ್ಕೆ ಸಿಎಂ ಆದೇಶ

ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ

ನಾಪತ್ತೆಯಾಗಿದ್ದ ಪ್ರೇಮಿಗಳು ಹರಪನಹಳ್ಳಿಯಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ

ದಾವಣಗೆರೆ ಸಮೀಪ ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ಪ್ರೇಮಿಗಳಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಿಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇಬ್ಬರೂ ಒಂದೇ ಮರದ ಕೊಂಬೆಗೆ ನೇಣುಬಿಗಿದುಕೊಂಡಿದ್ದಾರೆ. ಮದ್ದನಸ್ವಾಮಿ ಹಾಗೂ

ರಸ್ತೆ ಅಪಘಾತದಲ್ಲಿ ಮೃತರ ವಯಸ್ಕ ಮಕ್ಕಳಿಗೆ ಪರಿಹಾರ ನಿರಾಕರಣೆ ಸಲ್ಲದು: ಹೈಕೋರ್ಟ್‌

ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ವಯಸ್ಕರೆಂಬ ಕಾರಣ ನೀಡಿ ಮೃತರ ಮಕ್ಕಳಿಗೆ ಪರಿಹಾರ ನೀಡುವುದಕ್ಕೆ ನಿರಾಕರಿಸಿದ್ದ ನ್ಯಾಯಾಧಿಕರಣದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ

ಐಎಎಫ್ ಅಧಿಕಾರಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಬೆಂಗಳೂರು: ಭಾರತೀಯ ಸಶಸ್ತ್ರ ಪಡೆ(ಐಎಎಫ್) ಅಧಿಕಾರಿಯೊಬ್ಬರಿಗೆ ನಗರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಐಎಎಫ್ ಅಧಿಕಾರಿ ಶಿಲಾಧಿತ್ಯ ಬೋಸ್ ಅವರ ಪತ್ನಿ ಮಧುಮಿತಾ ದತ್ತ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಮಾಜಿ ಐಜಿಪಿ ಓಂ ಪ್ರಕಾಶ್ ಹತ್ಯೆ: ಪುತ್ರ ಕಾರ್ತಿಕೇಶ್ ದೂರಿನಲ್ಲಿ ಏನಿದೆ?

ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯನ್ನೇ ದಂಗು ಬಡಿಸಿದ ನಿವೃತ್ತ ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿ ರುವ ಪೊಲೀಸರು ಓಂ ಪ್ರಕಾಶ್‌ ಪತ್ನಿ ಪಲ್ಲವಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..ತಾಯಿ ಪಲ್ಲವಿ ಹಾಗೂ ಸಹೋದರಿ ಕೃತಿ ವಿರುದ್ಧ

ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸದ ಆಮಿಷವೊಡ್ಡಿ ರಾಮನಗರ ಯುವತಿಗೆ 2.70 ಲಕ್ಷ ರೂ. ವಂಚನೆ

ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಮೂಲದ ಯುವತಿ ನೀಡಿದ ದೂರಿನ ಅನ್ವಯ ಪತ್ನೋಲ್‌ ಕಲಾಂದರ್‌ ಖಾನ್‌ ಮತ್ತು ವೀರೇಶ್‌

ಗದಗದಲ್ಲಿ ಮಾಜಿ ಪ್ರೇಮಿಯಿಂದ ವೀಡಿಯೊ ವೈರಲ್‌ ಬೆದರಿಕೆ: ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್‌

ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಾಜಿ ಪ್ರೇಮಿ ನಿನ್ನ ವೀಡಿಯೊ ವೈರಲ್‌ ಮಾಡುವುದಾಗಿ ಬ್ಲ್ಯಾಕ್​ ಮೇಲ್ ಮಾಡಿದ್ದಕ್ಕೆ ಹೆದರಿ ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾಯಿರಾಬಾನು ನದಾಫ್ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್​​ನೋಟ್​ ಬರೆದಿಟ್ಟಿದ್ದು, ಮೈಲಾರಿ