ಅಪರಾಧ
ಹೆಚ್ಚು ಲಾಭದ ಆಮಿಷವೊಡ್ಡಿ ಕೋಟ್ಯಾಂತರ ರೂ. ವಂಚಿಸಿ ವ್ಯಕ್ತಿ ಪರಾರಿ
ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ಆಮಿಷವೊಡ್ಡಿ ಬಡವರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿ ಪರಾರಿಯಾದ್ದು, ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಚೀಟಿ ವ್ಯವಹಾರ ಹೆಸರಿನಲ್ಲಿ 800ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹಿಸಿದ್ದಾನೆ. ಒಬ್ಬರಿಂದ 10 ಸಾವಿರ ರೂಪಾಯಿಯಿಂದ ಹಿಡಿದು 1 ಕೋಟಿ ರೂಪಾಯಿವರೆಗೆ ಹಣ ಪಡೆದುಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಆತ ಸಂಗ್ರಹಿಸಿದ ಒಟ್ಟು ಮೊತ್ತ
ಬೆಂಗಳೂರಿನಲ್ಲಿ ಶಂಕಿತ ಉಗ್ರನ ಸೆರೆ ಹಿಡಿದ ಎನ್‌ಐಎ
2023ರ ಗ್ರನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಸ್ಟ್ ವಾಂಟೆಡ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ತಂಡದ ಪೊಲೀಸರು ಬಂಧಿಸಿದ್ದಾರೆ. ಅರ್ಷದ್ ಖಾನ್ ಬಂಧಿತ ಉಗ್ರ, ಈ ಹಿಂದೆ ಆತ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ. ಈಗ ಆರ್.ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಜಮಖಂಡಿಯಲ್ಲಿ ಅಪಘಾತಕ್ಕೆ ಮಗು ಸೇರಿ ನಾಲ್ವರು ಬಲಿ
ಬಾಗಲಕೋಟೆಯ ಜಮಖಂಡಿ ತಾಲೂಕಿನ ಕಟ್ಟೆ ಕೆರೆ ಸಮೀಪ ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ತುಂಡಾಗಿ ಉರುಳಿಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ಮನೀಷ್
ಕೊಳ್ಳೇಗಾಲದಲ್ಲಿ ಹುಲಿ ಶವ ಪತ್ತೆ: ಉರುಳಿಟ್ಟ ಆರೋಪಿ ಅರೆಸ್ಟ್
ಚಾಮರಾಜನಗರದ ಕೊಳ್ಳೇಗಾಲ ಗುಂಡಾಲ್ ಡ್ಯಾಂನಲ್ಲಿ ಗಂಡು ಹುಲಿಯ ಶವ ಪತ್ತೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡಿದ್ದು, ಉರುಳು ಹಾಕಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ. ಆರೋಪಿಯು ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಫೆಬ್ರವರಿ 15ರಂದು ಗಂಡು
ಅಂಗನವಾಡಿ ಸಹಾಯಕಿಯ ಕೊಲೆ ಆರೋಪಿ ಬಂಧನ
ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಬಿಳಕಿ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ಪ್ರೇಮಾ (52)ಎಂಬವರ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಆರೋಪಿಯನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ತೊಗರ್ಸಿ ಸಮೀಪದ ಕೋಡಿಹಳ್ಳಿ ಗ್ರಾಮದ ರಾಘವೇಂದ್ರ (26) ಎಂದು ಗುರುತಿಸಲಾಗಿದೆ. ಫೆಬ್ರವರಿ
ಸಿಎಸ್‌ಗೆ ಒಂದೂವರೆ ಕೋಟಿ ರೂ. ಲಂಚ ಆರೋಪ: ಸ್ನೇಹಮಯಿ ಕೃಷ್ಣ ಅರೆಸ್ಟ್
ಆರ್‌ಟಿಐ ಕಾರ್ಯಕರ್ತ, ಮುಡಾ ಪ್ರಕರಣದ ರೂವಾರಿ ಆಗಿರುವ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್ ನೀಡಿದ ದೂರು ಆಧರಿಸಿ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಸ್ನೇಹಮಯಿ ಕೃಷ್ಣ ನಟೇಶ್ ವಿರುದ್ಧ ಗಂಭೀರ ಆರೋಪ
ಬಾಗಲಕೋಟೆ ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಎಂಟು ಆರೋಪಿಗಳ ಬಂಧನ
ಬಾಗಲಕೋಟೆಯಲ್ಲಿ ಗುರುವಾರ ಸಂಜೆ ಶಿವಾಜಿ ಜಯಂತಿ ವೇಳೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ್ ಗೋಯೆಲ್ ಮಾಹಿತಿ ನೀಡಿದ್ದಾರೆ. ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿ ಎಂಟು
ತಂಗಿ ಮಗನಿಗೆ ಆಸ್ತಿ ಬರೆದಿಟ್ಟರೂ ಅವರಿಬ್ಬರಿಂದಲೇ ಮಹಿಳೆಯ ಕೊಲೆ
ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಶಿಕ್ಷಣ ಇಲಾಖೆಯ ಎಫ್‌ಡಿಎ ಅಧಿಕಾರಿ ಜಯಲಕ್ಷ್ಮಿ ಎಂಬವರನ್ನು ಆಸ್ತಿ, ಹಣಕ್ಕಾಗಿ ಸ್ವಂತ ತಂಗಿ ಮತ್ತು ಸಾಕುಮಗನೇ ಉಸಿರುಗಟ್ಟಿಸಿ ಕೊಲೆ ಮಾಡಿರು ವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ತುರುವೇಕೆರೆ ಕಂಟಲಗೆರೆ ಗ್ರಾಮದ ಜಯಲಕ್ಷ್ಮಿ (58) ಬಿಇಒ ಕಚೇರಿಯಲ್ಲಿ ಎಫ್‌ಡಿಎ ಆಗಿ
ಪ್ರವಾಸ ವಿಚಾರದಲ್ಲಿ ಪತಿಯೊಂದಿಗೆ ಜಗಳ: ಮೈಸೂರಿನಲ್ಲಿ ಮಹಿಳೆ ಆತ್ಮಹತ್ಯೆ
ಮೈಸೂರಿನ ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ್ದಕ್ಕೆ ನೊಂದುಕೊಂಡ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಸಂಧ್ಯಾ ಆತ್ಮಹತ್ಯೆ ಮಾಡಿಕೊಂಡವರು. ಮಹಿಳೆಯ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು
ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲವೆಂದು ಜಗಳ: ಮದುವೆ ಮನೆಯಲ್ಲೇ ಮೂವರ ಕೊಲೆ
ಮಹಾರಾಷ್ಟ್ರದ ಧುಲೆ ಜಿಲ್ಲೆಯ ಸಾಕ್ರಿ ತಾಲೂಕಿನ ಪಿಂಪಳ್ನರ್ ಗ್ರಾಮದಲ್ಲಿ ಮದುವೆ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿಸಿಲ್ಲ ಎಂಬ ಕಾರಣಕ್ಕೆ ಮದುವೆ ಮನೆಯಲ್ಲಿ ಶುರುವಾದ ಜಗಳ ಮೂವರ ಕೊಲೆಯಲ್ಲಿ ಅಂತ್ಯ ಕಂಡಿದೆ. ದೇವೇಂದ್ರ ಜ್ಞಾನೇಶ್ವರ ಪವಾರ್ (35), ಸುರೇಶಗೀರ್ ಮೋಜಗೀರ್ ಗೋಸಾವಿ (55)




