ಅಪರಾಧ
ಪತ್ನಿಯ ಶೀಲದ ಬಗ್ಗೆ ಶಂಕೆ: ಯಾದಗಿರಿಯಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದ ತಂದೆ
ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೊಬ್ಬ ತನ್ನ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಭಯಾನಕ ಕೃತ್ಯ ನಡೆದಿದೆ. ಪತಿ-ಪತ್ನಿಯ ಜಗಳದಿಂದ ಅಮಾಯಕ ಮುದ್ದು ಮಕ್ಕಳ ಪ್ರಾಣ ಬಲಿಯಾಗಿದೆ. ಮಲಗಿದ್ದ ಮಕ್ಕಳ ಮೇಲೆ ತಂದೆಯಾದವ ರಾಕ್ಷಸನಂತೆ ಕ್ರೌರ್ಯ ಎಸಗಿದ್ದಾನೆ.ಈ ರಾಕ್ಷಸ ಕೃತ್ಯಕ್ಕೆ 5 ವರ್ಷದ ಮಗಳು ಸಾನ್ವಿ ಮತ್ತು 3 ವರ್ಷದ ಮಗ ಭರತ್ ಬಲಿಯಾಗಿ ಹೋಗಿದ್ದಾರೆ. ಗಂಡ ಹೆಂಡತಿ ನಡುವೆ ಜಗಳ ಆಗಿ
ಪ್ರೀತಿಗೆ ಮನೆಯವರ ವಿರೋಧ: ಕೋಲಾರದ ಯುವಜೋಡಿ ಆತ್ಮಹತ್ಯೆ
ಕೋಲಾರದ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದಲ್ಲಿ ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ. ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಹಾಗೂ ಅಪ್ರಾಪ್ತ ವಯಸ್ಕ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಇವರಿಬ್ಬರ ಪ್ರೀತಿಗೆ ಎರಡೂ
ಪ್ರಚೋದನಕಾರಿ ಹೇಳಿಕೆ ಆರೋಪ: ರೇಣುಕಾಚಾರ್ಯ ವಿರುದ್ಧ ಬಲವಂತದ ಕ್ರಮ ಬೇಡವೆಂದ ಹೈಕೋರ್ಟ್
ಹಬ್ಬಗಳನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ, ಸರ್ಕಾರ ಸಹ ಇದನ್ನೇ ಮಾಡುತ್ತಿದೆ ಎಂದು ಮೌಖಿಕವಾಗಿ ಆಕ್ಷೇಪಿಸಿರುವ ಕರ್ನಾಟಕ ಹೈಕೋರ್ಟ್, ಗಣೇಶೋತ್ಸವದ ವೇಳೆ ಡಿಜೆ ಬಳಕೆ ನಿಷೇಧಿಸಿದ್ದ ದಾವಣಗೆರೆ ಜಿಲ್ಲಾಡಳಿತದ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಎಂ
ತಾಳಿಕೋಟಿ ಡೋಣಿ ಸೇತುವೆ ಜಲಾವೃತ: ಬೈಕ್ ಸವಾರ ನೀರುಪಾಲು
ತಾಳಿಕೋಟಿ ಪಟ್ಟಣದಲ್ಲಿ ಡೋಣಿ ನದಿಗೆ ನಿರ್ಮಿಸಿದ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಈ ಮುಳುಗಡೆಯಾದ ಸೇತುವೆ ದಾಟಲು ಯತ್ನಿಸಿದ ಬೈಕ್ ಸವಾರ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿದ್ದಾರೆ. ಡೋಣಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಸೇತುವೆ ಮುಳುಗಡೆಯಾಗಿದೆ. ಹೀಗಿದ್ದರೂ ಸೇತುವೆಯಲ್ಲಿ ಬೈಕ್ ಚಲಾಯಿಸಿದ ಯುವಕ
ತುಮಕೂರಿನಲ್ಲೂ ಕಾಡಿಯಾ ಗ್ಯಾಂಗ್ ಕಳ್ಳರ ಕಾಟ: ಆರು ಮಂದಿ ಅರೆಸ್ಟ್
ಬ್ಯಾಂಕ್‌ಗಳನ್ನೇ ಹಾಟ್ ಸ್ಪಾಟ್ ಆಗಿಸಿಕೊಂಡು ವೃದ್ಧರನ್ನೇ ಟಾರ್ಗೆಟ್ ಮಾಡಿಕೊಂಡು ಹಣ ದೋಚುವ ಮಹಿಳೆಯರ ಗುಂಪು ತುಮಕೂರಿನಲ್ಲೂ ಕಾರ್ಯಾಚರಿಸುತ್ತಿದ್ದು, ಪೊಲೀಸರು ಗ್ಯಾಂಗ್‌ನ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಕಾಡಿಯೂ ಎಂಬ ಊರಿನ ಈ ಮಹಿಳಾ ಕಳವು ಗ್ಯಾಂಗ್ ಎಷ್ಟೇ ಜಾಗರೂಕರಾಗಿದ್ದರೂ ಜನರನ್ನು
ಮುಕಳೆಪ್ಪನ ಮದುವೆ ಕಥೆಲಿ ವಿಲನ್ಗಳ್ಯಾರು! ಮಗಳಿಗೆ ಬ್ರೈನ್ ವಾಶ್ ಆಗಿದೆ ಎಂದ ತಾಯಿ! ನಮ್ದು ಲವ್ ಜಿಹಾದ್ ಅಲ್ಲವೆಂದ ಗಾಯತ್ರಿ
ಬಹಳ ಕುತೂಹಲ ಮೂಡಿಸಿರುವ ಕನ್ನಡದ ಖ್ಯಾತ ಯೂಟ್ಯೂಬರ್ ಕ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ ಮದುವೆ ಸುದ್ದಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ನನ್ನ ವಿವಾಹ ಪ್ರೇಮದಿಂದಾಗಿದೆ, ಯಾರ ಒತ್ತಡವೂ ಇಲ್ಲ ಎಂದು ಮುಕಳೆಪ್ಪ ಪತ್ನಿ ಗಾಯತ್ರಿ ಸ್ಪಷ್ಟಪಡಿಸಿದ ಕೆಲವೇ ಕ್ಷಣಗಳಲ್ಲಿ, ಆಕೆಯ ಪೋಷಕರು
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಾಮೀಜಿ ವಿರುದ್ಧ ಪ್ರಕರಣ
ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಆಶ್ರಮದ ನಿರ್ದೇಶಕ, ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿಯ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಚೈತನ್ಯಾನಂದ ಸರಸ್ವತಿಯ ಬೇಡಿಕೆಗಳನ್ನು ಈಡೇರಿಸುವಂತೆ ಅಲ್ಲಿ ಅಧ್ಯಾಪಕರು/ನಿರ್ವಾಹಕರಾಗಿ ಕೆಲಸ ಮಾಡುವ ಮಹಿಳೆಯರು ಒತ್ತಡ ಹೇರಿದ್ದಾರೆ
ಅಂಗವಿಕಲ ಕೋಟಾದಡಿ ಮೆಡಿಕಲ್ ಸೀಟ್‌ಗಾಗಿ ನಕಲಿ ದಾಖಲೆ ಸೃಷ್ಟಿಸಿ ಮಾರಿದ ಇಬ್ಬರು ವೈದ್ಯರು ಅರೆಸ್ಟ್
ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ, ಅಂಗವಿಕಲ ಮೀಸಲು ಕೋಟಾದಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು 21 ವಿದ್ಯಾರ್ಥಿಗಳಿಗೆ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿದ ಆರೋಪ ಮೇಲೆ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಂದಿನಿ
ಪ್ರೀತಿಸುತ್ತಿದ್ದ ಜೋಡಿ ಮನೆಯವರ ವಿರೋಧಕ್ಕೆ ನೊಂದು ಆತ್ಮಹತ್ಯೆ ಯತ್ನ: ಯುವತಿ ಸಾವು
ಭದ್ರಾವತಿ ತಾಲೂಕಿನ ಅಂತರಗಂಗೆಯಲ್ಲಿ ಪ್ರೀತಿಗೆ ಕುಟುಂಬದವರು ವಿರೋಧಿಸುತ್ತಿದ್ದಾರೆಂದು ಮನನೊಂದ ಯುವಜೋಡಿ ಸಾಯಲೆಂದು ಕಾಲುವೆಗೆ ಹಾರಿದ್ದು, ಯುವತಿ ಮೃತಪಟ್ಟರೆ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸ್ವಾತಿ (19) ಮೃತಪಟ್ಟ ಯುವತಿ. ಈಕೆಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿ ಸೂರ್ಯ (20) ಬದುಕುಳಿದಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪೊನ್ನಂಪೇಟೆಯಲ್ಲಿ ಪತ್ನಿಗೆ ಗುಂಡು ಹಾರಿಸಿದ ಯೋಧ
ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೊಣಗೇರಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಯೋಧನೊಬ್ಬ ಪತ್ನಿಯ ಮೇಲೆ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನು ಕಾರ್ಯಪ್ಪ ಗುಂಡಿಕ್ಕಿದ ಆರೋಪಿ, ಆತನ ಪತ್ನಿ ದೀಪಿಕಾ ದೇಚಮ್ಮ (32) ಗುಂಡೇಟಿನಿಂದ



