ಅಪರಾಧ
ಸರ್ಕಾರಿ ಜಮೀನಿನಿಂದ ಮನೆ ತೆರವು: ತಹಸೀಲ್ದಾರ್ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಯತ್ನ
ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿ ತಹಸೀಲ್ದಾರ್ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, .ರಾಧಕೃಷ್ಣ ಜಿ ಎಂಬವರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ರಾಧಾಕೃಷ್ಣ ಅವರು ಡೆತ್ ನೋಟ್ ಬರೆದಿಟ್ಟು, ತನ್ನ ಸಾವಿಗೆ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾಡಳಿತ ಕಾರಣ ಎಂದಿದ್ದಾರೆ.
ಮದುವೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಮಹಿಳೆ ಕಣ್ಮರೆ, ರೇಪ್ ಅಂಡ್ ಮರ್ಡರ್ ಶಂಕೆ
ಹಾಸನದಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲೆಂದು ಬಂದಿದ್ದ ಮಹಿಳೆ ಕಣ್ಮರೆಯಾಗಿರುವ ಪ್ರಕರಣ ಬೇಲೂರು ತಾಲೂಕಿನ ಕಲ್ಕೆರೆ ಬಳಿ ನಡೆದಿದೆ. ಸ್ಥಳದಲ್ಲಿ ಆಕೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿರುವುದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನ ಸೃಷ್ಟಿಸಿದೆ. ಈ ಪ್ರಕರಣದಲ್ಲಿ
ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಚಿನ್ನ ಎಗರಿಸುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಅರೆಸ್ಟ್
ಆನ್ಲೈನ್ ಜೂಜಾಟಕ್ಕೆ ವ್ಯಸನಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನೇ ಎಗರಿಸಿರುವ ಪ್ರಕರಣ ಬಹಿರಂಗಗೊಂಡಿದೆ. ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಘಟನೆ ನಡೆದಿದ್ದು, ಆರೋಪಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್
ಬಿಕ್ಲು ಶಿವ ಕೊಲೆ ಕೇಸ್: ಬಂಧಿತ ಬೈರತಿ ಬಸವರಾಜ್ ಕಸ್ಟಡಿ ಬದಲು ಆಸ್ಪತ್ರೆಗೆ ದಾಖಲು
ರೌಡಿಶೀಟರ್ ಬಿಕ್ಲು ಶಿವ ಕೊಲೆ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಸಿಐಡಿ ಬಂಧಿಸಿದ್ದರೂ ಅವರು ವಿಚಾರಣೆಗಾಗಿ ಕಸ್ಟಡಿಯಲ್ಲಿ ಇರುವ ಬದಲು ಜಯದೇವ ಆಸ್ಪತ್ರೆಯಲ್ಲಿ ಇದ್ದಾರೆ. ಆರೋಗ್ಯ ತಪಾಸಣೆ ವೇಳೆ ಇಸಿಜಿಯಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದು, ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಂ ನಡೆಸಲು
ಬಿಕ್ಲು ಶಿವ ಕೊಲೆ ಕೇಸ್: ಬೈರತಿ ಬಸವರಾಜ್ ಸಿಐಡಿಗೆ ಸರೆಂಡರ್ ಆಗಿ ಎಂದ ಸುಪ್ರೀಂಕೋರ್ಟ್
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಸಿಐಡಿ ಮುಂದೆ ಸರೆಂಡರ್ ಆಗಿ ತನಿಖೆಗೆ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸಪ್ಷ್ಟವಾಗಿ ನಿರ್ದೇಶನ ನೀಡಿದೆ. ಸಿಐಡಿ ವಿಚಾರಣೆಯನ್ನು ಯಾವುದೇ ಕಾರಣಕ್ಕೂ ಮುಂದೂಡಲು ಸಾಧ್ಯವಿಲ್ಲ ಎಂದು
ಪೂಜೆ, ಚಿಕಿತ್ಸೆ ಹೆಸರಲ್ಲಿ ವಿಷ ಲಡ್ಡು ತಿನ್ನಿಸಿ ಆರು ಮಂದಿಯ ಕೊಲೆಗೈದ ಫಕೀರ್ ಬಾಬಾ ಅರೆಸ್ಟ್
ಇತ್ತೀಚೆಗೆ ದೆಹಲಿಯ ಪೀರಾಗಢಿಯಲ್ಲಿ ಪಾರ್ಕ್ ಮಾಡಿದ್ದ ಕಾರಿನೊಳಗೆ ಮೂರು ಶವಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಫಕೀರ್ ಬಾಬಾ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲೂ ಇದೇ ರೀತಿ ಕನಿಷ್ಠ ಐದು ಕೊಲೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಬ್ಯಾಂಕಾಕ್‌ನಿಂದ ಕ್ಯಾಂಡಿಗಳಲ್ಲಿ ಬೆಂಗಳೂರಿಗೆ ಬಂತು ಡ್ರಗ್ಸ್
ಬೆಂಗಳೂರು ದೇವನಹಳ್ಳಿಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳುಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಕ್ಯಾಂಡಿ ಪ್ಯಾಕೆಟ್‌ಗಳಲಿ ಅಡಗಿಸಿಟ್ಟಿದ್ದ ಒಟ್ಟು 3.43 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದ
ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರಗ ಜ್ಞಾನೇಂದ್ರ ಆಪ್ತ ಸಹಾಯಕನ ಬಂಧನ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಹೊಸನಗರ ಭಾಗದ ಆಪ್ತ ಸಹಾಯಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಹೊಸನಗರ ಜೆ.ಎಂ.ಎಫ್.ಸಿ ನ್ಯಾಯಾಲಯ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆಗಳ ಹಲವು ಕಡೆ ಭ್ರಷ್ಟ ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳಿಗೆ ಲೋಕಾಯುಕ್ತ ಏಕಕಾಲಕ್ಕೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಪಿಡಬ್ಲ್ಯುಡಿ ಮುಖ್ಯ ಇಂಜಿನಿಯರ್ ಪುರುಷೋತ್ತಮ ದಾಸ್ ಎಂಬವರಿಗೆ ಸೇರಿದ ಮೈಸೂರಿನ ಐದು ಸ್ಥಳ, ಬೆಂಗಳೂರಿನ ಆರು ಕಡೆ ದಾಳಿ
ಹಣಕಾಸು ಕಲಹ: ತಂದೆ, ತಾಯಿಯ ಕೊಲೆಗೈದ ಟೆಕ್ಕಿ ರೋಹನ್ ಭಟ್
ಹಣಕಾಸು ವಿಚಾರದಲ್ಲಿ ನಡೆದ ಜಗಳ ತೀವ್ರಗೊಂಡು ಯುವಕನೊಬ್ಬ ತಂದೆ, ತಾಯಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ನೌಕಾಪಡೆಯ ಆರ್ಮಿ ಕ್ಯಾಪ್ಟನ್ ಆಗಿದ್ದ ತಂದೆ ನವೀನ್ ಚಂದ್ರ ಭಟ್, ದಂತ ವೈದ್ಯೆಯಾಗಿದ್ದ




