Thursday, November 06, 2025
Menu

ಮದುವೆಯಾಗುವುದಾಗಿ ನಂಬಿಸಿ ಸೆಕ್ಸ್‌, ಮೋಸ: ಯುವಕನ ವಿರುದ್ಧ ಯುವತಿ ದೂರು

ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿದ್ದಾನೆಂದು ಯುವತಿ ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮೊಹಮ್ಮದ್ ಇಶಾಕ್ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇಶಾಕ್ ಯುವತಿಗೆ ಮೋಸ ಮಾಡಿ ಮತ್ತೊಬ್ಬಳು ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾನೆ. ಮತಾಂತರ ಆಗಲು ಒಪ್ಪದೆ ಇದ್ದ ಕಾರಣಕ್ಕೆ ಮೋಸ ಮಾಡಿದ್ದಾನೆಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. 2024 ರ ಅಕ್ಟೋಬರ್‌ನಲ್ಲಿ ಇನ್‌ಸ್ಟಾಗ್ರಾಂನಲ್ಲಿ ಇವರಿಬ್ಬರು ಪರಿಚಯಗೊಂಡು ಸ್ನೇಹ, ಪ್ರೀತಿಯಾಗಿದೆ.

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಮೂವರ ಸಾವು

ಹಾವೇರಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಬಳಿಕ ದೀಪಾವಳಿ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ, ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75)

ಹೀಗೆಲ್ಲ ತನಿಖೆಯಾಗುವುದು ಗೊತ್ತಿದ್ದರೆ ಕೃತಿಕಾಳ ಕೊಲೆ ಮಾಡುತ್ತಿರಲಿಲ್ಲವೆಂದ ಪತಿ ಡಾ. ಮಹೇಂದ್ರ ರೆಡ್ಡಿ

ಅನಸ್ತೇಷಿಯಾ ಕೊಟ್ಟು ಸಾಯಿಸಿದರೆ ಸಾವಿನ ನಿಖರ ಕಾರಣ ಪೊಲೀಸರ ತನಿಖೆಯಲ್ಲಿ ಗೊತ್ತಾಗುವುದಿಲ್ಲ ಎಂದು ಭಾವಿಸಿದ್ದೆ. ಪೊಲೀಸರು ಇಷ್ಟು ಟೆಕ್ನಿಕಲ್ ಆಗಿ ಮತ್ತು ಆಳವಾಗಿ ತನಿಖೆ ನಡೆಸುತ್ತಾರೆ ಎಂದು ಗೊತ್ತಿರಲಿಲ್ಲ. ಹೀಗೆ ತನಿಖೆಯಾಗುತ್ತದೆ ಎಂದು ತಿಳಿದಿದ್ದರೆ ಕೊಲೆಯೇ ಮಾಡುತ್ತಿರಲಿಲ್ಲ ಎಂದು ವೈದ್ಯೆ ಕೃತಿಕಾ

ಮೈಸೂರು ರೈಲು ನಿಲ್ದಾಣದಲ್ಲಿ ಮಗು ಅಪಹರಣ: ರಕ್ಷಿಸಿದ ಪೊಲೀಸ್‌

ಮೈಸೂರು ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಅಪಹರಣ ಮಾಡಲು ವೃದ್ಧ ಮಹಿಳೆಯೊಬ್ಬರು ಯತ್ನಿಸಿ ಪೊಲೀಸ್‌ ಕೈಗೆ ಸಿಕ್ಕಿ ಬಿದ್ದಿದ್ದಾರೆ, ಮಗುವನ್ನು ಕೂಡ ಪೊಲೀಸರು ಸುರಕ್ಷಿತವಾಗಿ ಕುಟುಂಬಕ್ಕೆ ಒಪ್ಪಿಸಿದ್ದಾರೆ. 50 ವರ್ಷದ ಆರೋಪಿ ವೃದ್ಧೆಯನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪೊಲೀಸರು

ಸರ್ಕಾರಿ ಆಸ್ಪತ್ರೆ ವಿರುದ್ಧ ದೂರಿತ್ತ ಕೆಆರ್‌ಎಸ್‌ ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ, ಕೇಸ್ ದಾಖಲು

ಬೀದರ್‌ನ ಸರ್ಕಾರಿ ಆಸ್ಪತ್ರೆಯೊಂದರ ಬಗ್ಗೆ ದೂರು ನೀಡಿದ KRS ಪಕ್ಷದ ಸದಸ್ಯನಿಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ. ಧನ್ನೂರ (ಕೆ) ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಅಶ್ವಿನಿ ವಿರುದ್ಧ ದೂರು ನೀಡಿದ್ದಕ್ಕೆ ಅವರ ತಾಯಿಯಿಂದ ಬೆದರಿಕೆ ಬಂದಿರುವುದಾಗಿ ಸಂಗಮೇಶ್ ಬಿರದಾರ

ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ, ಹತ್ಯೆ ಗ್ಯಾಂಗ್‌: ಮೂವರು ಪೊಲೀಸ್‌ ವಶ

ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಗ್ಯಾಂಗ್‌ವೊಂದನ್ನು ಬಯಲಿಗೆಳೆದಿರುವ ಆರೋಗ್ಯ ಇಲಾಖೆ‌ ಅಧಿಕಾರಿಗಳು ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಈ ಗ್ಯಾಂಗ್‌ ಜೊತೆ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ

ಪುತ್ತೂರಿನ ಯುವಕ ಬೆಂಗಳೂರಲ್ಲಿ ಸಾವು: ಸಿಗರೇಟ್‌, ಪುಡ್‌ ಪಾಯಿಸನ್‌, ಅಸ್ತಮಾ ಕಾರಣವೇ?

ಪುತ್ತೂರಿನ ಯುವಕನೊಬ್ಬ ಕೊಡಗಿನ ಯುವತಿ ಜೊತೆ ಬೆಂಗಳೂರಿನ ಮಡಿವಾಳ ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ. ಈ ಸಾವಿಗೆ ಫುಡ್ ಪಾಯ್ಸನ್ ಅಥವಾ ಅತಿಯಾದ ಸಿಗರೇಟ್ ಸೇವನೆ ಕಾರಣವೇ ಅಥವಾ ಅವರ ಕುಟುಂಬವನ್ನು ಬಾಧಿಸುತ್ತಿದ್ದ ಅಸ್ತಮಾ ಕಾರಣ ಇರಬಹುದೇ

ಡಾ. ಕೃತಿಕಾ ಕೊಲೆ ಪ್ರಕರಣ: ಮಹೇಂದ್ರ ರೆಡ್ಡಿ ಖುದ್ದು ಡ್ರಗ್ಸ್ ಖರೀದಿ

ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ವೈದ್ಯ ಮಹೇಂದ್ರ ರೆಡ್ಡಿ ಪೊಲೀಸ್‌ ವಿಚಾರಣೆಯಲ್ಲಿ ತಾನು ಆಕೆಗೆ ಅನಸ್ತೇಷಿಯಾ ನೀಡಿ ಕೊಲೆ ಮಾಡಿರುವುದಾಗಿ ಈಗಾಗಲೇ ಒಪ್ಪಿಕೊಂಡಿದ್ದಾನೆ. ತಾನೇ ಖುದ್ದಾಗಿ ಮೆಡಿಕಲ್‌ ಶಾಪ್‌ಗೆ ತೆರಳಿ ಡ್ರಗ್ಸ್‌ ಖರೀದಿಸಿರುವುದಾಗಿಯೂ ಪೊಲೀಸರಿಗೆ

ಯಲ್ಲಾಪುರದಲ್ಲಿ ಬಸ್ ಮರಕ್ಕೆ ಡಿಕ್ಕಿ: ಬಸ್ಸಲ್ಲೇ ಸಿಲುಕಿತು ಚಾಲಕನ ಮುರಿದ ಕಾಲು

ಮುಂಬೈಯಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ಕಾಲು ಮುರಿದು ಬಸ್‌ನಲ್ಲೇ ಸಿಕ್ಕಿಕೊಂಡ ಘಟನೆ ಯಲ್ಲಾಪುರದ ಹಳಿಯಾಳ ಕ್ರಾಸ್ ಬಳಿ ನಡೆದಿದೆ. ಸ್ಥಳೀಯರು ಮತ್ತು ಪೊಲೀಸರು ಧಾವಿಸಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಲ್ಲಿ

ದರ್ಶನ್‌ಗೆ ಮತ್ತೆ ಬೆನ್ನು ನೋವು: ಹೀಟಿಂಗ್ ಬೆಲ್ಟ್ ಗೆ ಜೈಲು ವೈದ್ಯರ ಮನವಿ

ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ಹೀಟಿಂಗ್ ಬೆಲ್ಟ್ ಒದಗಿಸಲು ಜೈಲಿನ ವೈದ್ಯಾಧಿಕಾರಿಗಳು ಪತ್ರ ಬರೆದಿದ್ದಾರೆ. ಕಾರಾಗೃಹ ಆಸ್ಪತ್ರೆಯ ಮುಖ್ಯ ವೈದ್ಯರು, ಸಿ.ವಿ.ರಾಮನ್ ನಗರ ಆಸ್ಪತ್ರೆ ವೈದ್ಯಕೀಯ