Menu

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್. ​ನಾರಾಯಣ್ ವಿರುದ್ಧ ಎಫ್‌ಐಆರ್‌

ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಚಿತ್ರ ನಿರ್ದೇಶಕ ಎಸ್‌. ನಾರಾಯಣ್‌ ಮತ್ತು ಅವರ ಮಗ ಪವನ್‌ ವಿರುದ್ಧ ಸೊಸೆ ಪವಿತ್ರಾ ದೂರು ದಾಖಲಿಸಿದ್ದಾರೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯಿಸುತ್ತಿರುವದಾಗಿ ಪವಿತ್ರಾ ಅವರು ಮಾವ ಮತ್ತು ಗಂಡನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. 2021ರಲ್ಲಿ ಎಸ್‌. ನಾರಾಯಣ್ ಪುತ್ರ ಪವನ್ ಮತ್ತು ಪವಿತ್ರಾ ಅವರ ಮದುವೆ ನಡೆದಿತ್ತು. ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ

ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡು ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂಬ ಪ್ರಮುಖ ಆರೋಪಿಯನ್ನು ರಾಂಚಿಯಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ಘಟಕವು

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಸದ್ಯಕ್ಕೆ ರಿಲೀಫ್‌

ನಿರ್ಮಾಪಕ ರಾಘವೇಂದ್ರ ಹೆಗಡೆ ಮುಂಬೈನಲ್ಲಿ ದಾಖಲಿಸಿದ್ದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ನ್ಯಾಯಾಲಯ ನೀಡಿರುವ ಆದೇಶದಿಂದ ನಟ ಧ್ರುವ ಸರ್ಜಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಧ್ರುವ ಸರ್ಜಾ ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಪಡೆದು ಸಿನಿಮಾ ಮಾಡಲು

ಕನ್ನಡಕ್ಕೆ ಅವಮಾನ: ವಿಚಾರಣೆಗೆ ಹಾಜರಾಗದ ಸೋನು ನಿಗಮ್‌ ವಿರುದ್ಧ ಪೊಲೀಸರು ಮತ್ತೆ ಕೋರ್ಟ್‌ಗೆ

ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಡಿ ಆವಲಹಳ್ಳಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣಕ್ಕೆ ಈಗ ಈಗ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ

ಬೀದರ್‌ ವಿವಿಯಲ್ಲಿ ಅವ್ಯವಹಾರ: 67 ಕಡೆ ಲೋಕಾಯುಕ್ತ ದಾಳಿ

ಬೀದರ್‌ನ ಪಶು ಮತ್ತು ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿದೆ. ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ತಂಡ ದಾಳಿ

ರಾಣೇಬೆನ್ನೂರಿನಲ್ಲಿ ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವನ್ನೇ ಸಾಯಿಸಿದ ತಾಯಿ

ರಾಣೇಬೆನ್ನೂರು ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನೊಂದಿಗೆ ಸೇರಿ ಹೆತ್ತ ಮಗುವಿನ ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ಮಗುವನ್ನು ಪ್ರಿಯಾಂಕಾ (4) ಎಂದು ಗುರುತಿಸಲಾಗಿದೆ. ರಾಣೇಬೆನ್ನೂರು ನಗರದ ಎಕೆಜಿ

ಭಾಲ್ಕಿಯಲ್ಲಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಭಾಲ್ಕಿ ತಾಲೂಕಿನ ಮರೂರು ಬಳಿ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ವರು ಮಕ್ಕಳ ಜೊತೆ ದಂಪತಿ ಸೇರಿ ಒಟ್ಟು 6 ಜನರು ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ವರು ಮೃತಪಟ್ಟಿದ್ದರೆ ಇಬ್ಬರನ್ನು ಸ್ಥಳೀಯರು

ದರ್ಶನ್‌ ಬಳ್ಳಾರಿ ಜೈಲಿಗೆ ವರ್ಗಾವಣೆ ಇಲ್ಲ, ಹಾಸಿಗೆ ದಿಂಬು ನೀಡಲು ಕೋರ್ಟ್‌ ಅಸ್ತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ದರ್ಶನ್​ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಅವರನ್ನು

ನನಗೆ ದಯವಿಟ್ಟು ವಿಷ ಕೊಡಿ: ನಟ ದರ್ಶನ್‌ ಜಡ್ಜ್‌ಗೆ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ  ನಟ ದರ್ಶನ್‌ ವೀಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯುವಾಗ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿ, ನನಗೆ ಜೈಲಿನಲ್ಲಿ ಬದುಕುವುದು ಕಷ್ಟವಾಗುತ್ತಿದೆ, ದಯವಿಟ್ಟು ನನಗೆ ವಿಷ ಕೊಡಿ, ನಾನು ಬಿಸಿಲು

ಮಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ವಾಹನ: ಲಾರಿ ಹರಿದು ಮಹಿಳೆ ಸಾವು

ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಮಹಿಳಾ ಸವಾರರೊಬ್ಬರ ಮೇಲೆ ಕ್ಯಾಂಟರ್‌ ಲಾರಿ ಹರಿದು ಮೃತಪಟ್ಟಿದ್ದಾರೆ. ಉಡುಪಿಯ ಪರ್ಕಳದ ಮಾಧವಿ ಮೃತ ಮಹಿಳೆ. ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಹಾಜರಾಗಲು