ಅಪರಾಧ
ಮಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದ ವಾಹನ: ಲಾರಿ ಹರಿದು ಮಹಿಳೆ ಸಾವು
ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಮಹಿಳಾ ಸವಾರರೊಬ್ಬರ ಮೇಲೆ ಕ್ಯಾಂಟರ್ ಲಾರಿ ಹರಿದು ಮೃತಪಟ್ಟಿದ್ದಾರೆ. ಉಡುಪಿಯ ಪರ್ಕಳದ ಮಾಧವಿ ಮೃತ ಮಹಿಳೆ. ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಿಬ್ಬಂದಿ ಮಾಧವಿ ಹಾಜರಾಗಲು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ದ್ವಿಚಕ್ರ ವಾಹನವು ರಸ್ತೆ ಹೊಂಡಕ್ಕೆ ಬಿದ್ದು, ಮಾಧವಿ ರಸ್ತೆಗೆ ಬಿದ್ದಿದ್ದಾಗ ಹಿಂದಿನಿಂದ ಬಂದ ಕ್ಯಾಂಟರ್ ಲಾರಿ ಹರಿದು
ರಾಜಾಜಿನಗರದಲ್ಲಿ ಪ್ರೀತಿಸಿದಾತ ಮದುವೆ ಮುಂದೂಡುತ್ತಿದ್ದನೆಂದು ನೊಂದ ಯುವತಿ ಆತ್ಮಹತ್ಯೆ
ರಾಜಾಜಿನಗರದ ಗಾಯತ್ರಿ ನಗರದಲ್ಲಿ ಪ್ರೀತಿಸುತ್ತಿದ್ದ ಯುವಕ ಮದುವೆಯನ್ನು ಮುಂದೂಡುತ್ತ ಬರುತ್ತಿದ್ದಾನೆಂದು ಜಗಳವಾಡಿದ ಯುವತಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದ ಲತಾ(25) ನೇಣುಬಿಗಿದುಕೊಂಡ ಯುವತಿ. ಆಕೆ ಮಂಡ್ಯ ಜಿಲ್ಲೆಯ ರಂಜಿತ್ ಎಂಬ ಯುವಕನನ್ನು ಐದು
ಗೃಹಸಚಿವರಿಗೆ ಕೋಟಿ ಕೊಡಲು ಪೆಡ್ಲರ್‌ಗಳಿಂದ ಗಾಂಜಾ ಮಾರಾಟ ಮಾಡಿಸ್ತಿದ್ರಾ ಇನ್ಸ್‌ಪೆಕ್ಟರ್ ?
ವರ್ಗಾವಣೆ ಆಗ್ತಿದೆ, ಅದಕ್ಕಾಗಿ ಗೃಹಸಚಿವರಿಗೆ ಒಂದು ಕೋಟಿ ರೂ. ಲಂಚ ಕೊಡಬೇಕು ಎಂದು ಇನ್ಸ್‌ಪೆಕ್ಟರ್‌ವೊಬ್ಬರು ಗಾಂಜಾ ಪೆಡ್ಲರ್‌ಗಳಿಂದ ಸುಲಿಗೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಅಮೃತಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಷ್ ಮೇಲೆ ಈ ಗಂಭೀರ ಆರೋಪ ಕೇಳಿ ಬಂದಿದೆ. ಹಣಕ್ಕಾಗಿ ಲಾಡ್ಜ್
ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೈದಿ ಪರಾರಿ
ಬಿಜಾಪುರದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಪ್ಟ್ ಆಗಿದ್ದ ಆರೋಪಿಯನ್ನು ಚಿಕಿತ್ಸೆಗಾಗಿ ಪೊಲೀಸರು ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಚೇತನ್ ಕಲ್ಯಾಣಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ, ಕಿದ್ವಾಯಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆ ತಂದಿದ್ದ ವೇಳೆ ಜೈಲು
ಡಿಜಿಟಲ್ ಅರೆಸ್ಟ್: ಔರಾದ್‌ನ ಮಾಜಿ ಶಾಸಕಗೆ 30 ಲಕ್ಷ ರೂ. ವಂಚನೆ
ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ ಅವರನ್ನು ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್ ಮಾಡಿರುವ ವಂಚಕರು 30 ಲಕ್ಷ ರೂ. ದೋಚಿದ್ದಾರೆ. ಈ ಸಂಬಂಧ ಬೆಂಗಳೂರು ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ದೂರು ಗಣೇಶ ವಿಸರ್ಜನೆ: ಗಲಭೆ ಕಿಂಗ್‌ಪಿನ್ ಚನ್ನಪಟ್ಟಣದ ಇರ್ಫಾನ್?
ಸ್ನೇಹಿತ ಜಾಫರ್ ಮಾತು ಕೇಳಿ ಚನ್ನಪಟ್ಟಣದ ಮೂಲದವನಾಗಿದ್ದು, ಮದ್ದೂರಿನಲ್ಲಿ ವಾಸವಿರುವ ಇರ್ಫಾನ್ ಎಂಬಾತ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟಕ್ಲೆ ಪ್ಲಾನ್ ಮಾಡಿದ್ದ ಎನ್ನಲಾಗಿದೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಗಣೇಶ
ಮೈಸೂರಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಮೈಸೂರಿನ ಬಿ.ಎಂ. ಹ್ಯಾಬಿಟೇಟ್ ಮಾಲ್‌ನಲ್ಲಿ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹುಣಸೂರು ತಾಲೂಕಿನ ಎಲೆಕ್ಟ್ರಿಷಿಯನ್ ಸುನೀಲ್ (35) ಸ್ಥಳದಲ್ಲೇ ಮೃತಪಟ್ಟವರು. ಅವರನ್ನು ರಕ್ಷಿಸಲು ಮುಂದಾದ ಗೋಕುಲಂನ ಚಂದ್ರು ಕೆಳಗೆ ಬಿದ್ದು ಗಂಭೀರವಾಗಿ
ನಾಳೆ ಇರ್ತಿನೋ ಇಲ್ವೋ… ರೀಲ್ಸ್ ಮಾಡಿದ್ದ ಸ್ವಾಮೀಜಿ ಗಂಗಾವತಿಯಲ್ಲಿ ನೀರಲ್ಲಿ ಮುಳುಗಿ ಸಾವು
ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ನಾಳೆ ಇರ್ತಿನೋ ಇಲ್ವೋ, ಏನ್ ಮಾಡ್ತಿನೋ ಗೊತ್ತಿಲ್ಲ ಎಂದು ರೀಲ್ಸ್ ಮಾಡಿದ್ದ ಆಂಧ್ರ ಮೂಲದ ಸ್ವಾಮೀಜಿ ಲಕ್ಷ್ಮಯ್ಯ ಮೃತಪಟ್ಟಿದ್ದಾರೆ. ಭಾನುವಾರ ರೀಲ್ಸ್ ಮಾಡಿದ್ದ ಸ್ವಾಮೀಜಿ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸ್ವಾಮೀಜಿ ಮುಳುಗಿ ಚೀರಾಡುತ್ತಿದ್ದಾಗ
ಚಿಂತಾಮಣಿಯಲ್ಲಿ ವಿವಾದ ಸೃಷ್ಟಿಸಿದ ಪ್ಯಾಲೆಸ್ತೀನ್ ಧ್ವಜ
ಕೇಂದ್ರ ಸರ್ಕಾರವೇ ಪ್ಯಾಲೆಸ್ತೀನ್ ಪರ ಎಂದು ಹೇಳಿದರೂ ಕಲಬುರಗಿ ಬಳಿಕ ಚಿಕ್ಕಬಳ್ಳಾಪುರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿವಾದ ಭುಗಿಲೆದ್ದಿದೆ. ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾ ಉರುಸ್ ವೇಳೆ ಸರ್ಕಾರಿ ಗಂಧೋತ್ಸವ ವೇಳೆ ಪ್ಯಾಲೆಸ್ತೀನ್ ಧ್ವಜ ಹಾರಾಟ ಮಾಡಿದ್ದ ಪುಂಡರು ಪ್ಯಾಲೆಸ್ಟೈನ್ ಧ್ವಜ
ಗಣೇಶ ವಿಸರ್ಜನೆ: ಮದ್ದೂರಲ್ಲಿ ಕಲ್ಲು ತೂರಾಟ, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ
ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆದಿದ್ದು, ಇಂದು ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ. ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದೆ. ರಾಮ್ ರಹೀಂ ನಗರ ಉದ್ವಿಗ್ನಗೊಂಡಿದು, ಮುನ್ನೆಚ್ಚರಿಕೆ ಕ್ರಮವಾಗಿ ಮದ್ದೂರು ಪಟ್ಟಣದಲ್ಲಿ ಬಿಗಿ




