Menu

ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ನಕಲಿ ನರ್ಸ್‌: ಪ್ರತಿಕ್ರಿಯಿಸಲು ಆಸ್ಪತ್ರೆ ನಕಾರ

ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ನಕಲಿ ನರ್ಸ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ಆರೋಪ ಕೇಳಿ ಬಂದಿದೆ. ನರ್ಸಿಂಗ್ ವಿದ್ಯಾರ್ಥಿನಿ ಎಂದು ಹೇಳಿ ಕಳೆದ ಮೂರು ತಿಂಗಳಿನಿಂದ ರೋಗಿಗಳಿಗೆ ಕಾರವಾರ ಮೂಲದ ಸನಾ ಶೇಖ್ ಎಂಬಾಕೆ ಚಿಕಿತ್ಸೆ ನೀಡಿರುವುದು ಅಚ್ಚರಿ ಹುಟ್ಟಿಸಿದೆ. ಬೆಳಗಾವಿ ಕುಮಾರಸ್ವಾಮಿ ಲೇಔಟ್‌ನಲ್ಲಿ ನಕಲಿ ನರ್ಸ್‌ ಸನಾ ವಾಸ ಇರುವುದು ಎನ್ನಲಾಗಿದೆ. ಸರ್ಜಿಕಲ್ ವಾರ್ಡ್, ಒಪಿಡಿ ಹೀಗೆ ಆಸ್ಪತ್ರೆಯ ಎಲ್ಲ ವಿಭಾಗದಲ್ಲೂ ಓಡಾಡಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾಳೆ. ನಕಲಿ ನರ್ಸ್‌

ಪ್ರೀತಿಸಿ ಮದುವೆಯಾದ ಗಂಡ, ಮಕ್ಕಳನ್ನು ಬಿಟ್ಟು ಪ್ರಿಯಕರನೇ ಬೇಕೆಂದ ಮಹಿಳೆ

ಆನೇಕಲ್ ಬಸವನಪುರ ಗ್ರಾಮದಲ್ಲಿ ಲೀಲಾವತಿ ಎಂಬಾಕೆ ಪ್ರೀತಿಸಿ ಮದುವೆಯಾದ ಗಂಡ, ಮಕ್ಕಳನ್ನು ಬಿಟ್ಟು ಪ್ರಿಯಕರನೇ ಬೇಕೆಂದು ಪಟ್ಟು ಹಿಡಿದಿದ್ದು, ಮನವೊಲಿಸಲು ಪೊಲೀಸರು ಕೂಡ ವಿಫಲರಾಗಿದ್ದಾರೆ. ಮೂರು ಮಕ್ಕಳು ನಮ್ಮನ್ನು ಬಿಟ್ಟು ಹೋಗಬೇಡ ಎಂದು ಅಳುತ್ತಿದ್ದರೆ, ಮೋಸ ಮಾಡಬೇಡ ಎಂಬುದು ಗಂಡನ ಅಳಲು,

ಅನಿಲ್‌ ಅಂಬಾನಿಯ ಸಾಲ ಖಾತೆಗಳನ್ನು “ವಂಚನೆ” ವರ್ಗೀಕರಣಗೊಳಿಸಿದ ಬಿಒಬಿ

ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಮಾಜಿ ನಿರ್ದೇಶಕ ಅನಿಲ್ ಧೀರಜ್‌ಲಾಲ್ ಅಂಬಾನಿಯವರ ಸಾಲ ಖಾತೆಗಳನ್ನು ಬ್ಯಾಂಕ್ ಆಫ್ ಬರೋಡಾ ‘ವಂಚನೆ’ ಎಂದು ವರ್ಗೀಕರಿಸಿದೆ. ಇದರಿಂದ ಸಂಸ್ಥೆಯ ಆರ್ಥಿಕ ಸಂಕಷ್ಟ ಮತ್ತಷ್ಟು ಬಿಗಡಾಯಿಸುವುದರೊಂದಿಗೆ ಅನಿಲ್ ಅಂಬಾನಿ ಕಾನೂನು ಸವಾಲುಗಳನ್ನು ಎದುರಿಸಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ.

ಧರ್ಮಸ್ಥಳ ಪ್ರಕರಣ: ಕೇರಳ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​ ನೀಡಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ಈಗಾಗಲೇ ವಿಚಾರಣೆ ನಡೆಸಿದೆ. ಯೂಟ್ಯೂಬರ್ ಮನಾಫ್​, ಪ್ರಕರಣಕ್ಕೆ

ಚಾಮರಾಜನಗರದಲ್ಲಿ ಗ್ರಾಹಕಿಯಂತೆ ಹೋಗಿ ಚಿನ್ನ ಎಗರಿಸುತ್ತಿದ್ದ ಮಹಿಳೆ ಅರೆಸ್ಟ್‌

ಚಾಮರಾಜನಗರದಲ್ಲಿ ಚಿನ್ನದಂಗಡಿಗೆ ಗ್ರಾಹಕಿಯಂತೆ ಹೋಗಿ ಚಿನ್ನದ ಸರ ಎಗರಿಸುತ್ತಿದ್ದ ಮಹಿಳೆಯನ್ನು ಚಾಮರಾಜನಗರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಲೀಲಾ ಬಂಧಿತ ಮಹಿಳೆ, ಆಭರಣ ಖರೀದಿಸುವ ನೆಪದಲ್ಲಿ ಚಾಮರಾಜನಗರದ ಜ್ಯುವೆಲರಿ ಶಾಪ್‌ಗೆ ಹೋಗಿದ್ದ ಆಕೆ ಸಿಬ್ಬಂದಿಯನ್ನು ಯಾಮಾರಿಸಿ 9 ಗ್ರಾಂ ಚಿನ್ನದ ಸರ ಹಾಗೂ

ವೀರೇಂದ್ರ ಪಪ್ಪಿ ಮತ್ತೆ ನಾಲ್ಕು ದಿನ ಇಡಿ ವಶಕ್ಕೆ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಮತ್ತೆ ನಾಲ್ಕು ದಿನ ಇಡಿ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಬೆಟ್ಟಿಂಗ್‌ ಆರೋಪದಡಿ ವೀರೇಂದ್ರ ಪಪ್ಪಿ ಇಡಿ ವಶದಲ್ಲಿದ್ದರು, ಆದರೆ ಗುರುವಾರಕ್ಕೆ

Suicide Deaths- ಕಾಸರಗೋಡಿನಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಕೇರಳದ ಗಡಿಭಾಗ ಕಾಸರಗೋಡಿಲ್ಲಿ ಆ್ಯಸಿಡ್ ಕುಡಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ನಗರದ ಗೋಪಿ (58) ಪತ್ನಿ ಇಂದಿರಾ (55) ಮತ್ತು ಅಣ್ಣ ರಂಜೇಶ್ (37) ಹಾಗೂ ತಮ್ಮ ರಾಕೇಶ್ ಆತ್ಮಹತ್ಯೆ ಮಾಡಿಕೊಂಡವರು. ಆ್ಯಸಿಡ್ ಕುಡಿದ ತಕ್ಷಣವೇ ಮೂವರು

ವೀಸಾ ಅವಧಿ ಮುಗಿದರೂ ಅಕ್ರಮ ವಾಸ: ವಿದೇಶಿಗರ ವಿರುದ್ಧ ಬೆಂಗಳೂರು ಪೊಲೀಸ್‌ ಕ್ರಮ

ವೀಸಾ ಅವಧಿ ಮುಗಿದರೂ ಇಲ್ಲೇ ವಾಸವಾಗಿರುವ ವಿದೇಶಿ ಪ್ರಜೆಗಳ ಪತ್ತೆಗೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಹಣದಾಸೆಗೆ ಸಮರ್ಪಕ ದಾಖಲೆಗಳನ್ನು ಪಡೆದುಕೊಳ್ಳದೆ ಮನೆ ನೀಡಿದ ಮಾಲೀಕರ ವಿರುದ್ಧವೂ ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿಗೆ ಬರುವ ವಿದೇಶಿ ಪ್ರಜೆಗಳು ಪಾಸ್​​ ಪೋರ್ಟ್​, ವೀಸಾ ಅವಧಿ ಮುಗಿದಿದ್ದರು

ಮದ್ದೂರಿನಲ್ಲಿ ಅಶ್ಲೀಲವಾಗಿ ತಂದೆಯ ಪೋಟೊ ಎಡಿಟ್‌ ಮಾಡಿ ಪೋಸ್ಟ್‌ ಮಾಡಿದ ಮಗ ಪೊಲೀಸ್‌ ಅತಿಥಿ

ಮಂಡ್ಯದ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗನೊಬ್ಬ ಇನ್ನಷ್ಟು ಆಸ್ತಿ ಪಡೆದುಕೊಳ್ಳುವುದಕ್ಕಾಗಿ ತಂದೆಗೆ ಬ್ಲ್ಯಾಕ್​ಮೇಲ್​​ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಮಗನ ವಿರುದ್ಧ ತಂದೆ ದೂರು ನೀಡಿದ್ದು, ಬೆದರಿಕೆ ಹಾಕಿದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ್​​ ಎಂಬವರು ರಾಣಿ ಐಶ್ವರ್ಯ

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಆಗ್ರಹಿಸಿ ಸ್ವಾಮೀಜಿಗಳಿಂದ ಸಚಿವ ಅಮಿತ್‌ ಶಾಗೆ ಮನವಿ

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್​​ಐಎಗೆ ವಹಿಸಬೇಕೆಂದು ಸ್ವಾಮೀಜಿಗಳ ನಿಯೋಗ ಗೃಹಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ನಾನೇ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಈ ಬಗ್ಗೆ ಸಚಿವ ಸಂಪುಟ ನೇತೃತ್ವದಲ್ಲಿ ಸಭೆ ನಡೆಸುತ್ತೇವೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ