ಅಪರಾಧ
ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವು
ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್‌ಪೋಸ್ಟ್ ಬಳಿ ಶನಿವಾರ ರಾತ್ರಿ ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ನಂದನ್ ಹಾಗೂ ಜೀವನ್ ಎಂದು ಗುರುತಿಸಲಾಗಿದೆ. ಸುನೀಲ್, ಧನುಷ್ ಮತ್ತು ಶಶಾಂಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಚೆಕ್‌ಪೋಸ್ಟ್ ಸಮೀಪ ಕಾರು ಮರಕ್ಕೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲರೂ ವಿದ್ಯಾರ್ಥಿಗಳಾಗಿದ್ದು, ಮದುವೆಗೆ ಬಂದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿಯ ರಭಸಕ್ಕೆ ಕಾರು
ಮಂಡ್ಯದ ವಿದ್ಯಾಸಂಸ್ಥೆಯಲ್ಲಿ ಪುಡ್ ಪಾಯಿಸನ್‌ಗೆ ವಿದ್ಯಾರ್ಥಿ ಬಲಿ
ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದ ವಸತಿ ಶಾಲೆಯಲ್ಲಿ ಫುಡ್ ಪಾಯಿಸನ್‌ಗೆ ವಿದ್ಯಾರ್ಥಿಯೊಬ್ಬ ಬಲಿಯಾಗಿದ್ದು, 29 ವಿದ್ಯಾರ್ಥಿಗಳು ಅಸ್ವಸ್ಥರಾಗಿ ದ್ದಾರೆ. ಅರುಣಾಚಲ ಪ್ರದೇಶ ಮೂಲದ ಕೆರ್ಲಾಂಗ್ (13) ಮೃತ ವಿದ್ಯಾರ್ಥಿ. ಶುಕ್ರವಾರ ರಾತ್ರಿ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಹೋಳಿ ಹಬ್ಬಕ್ಕೆ ಊಟ ಮಾಡಿಸಿದ್ದು,
ತಪ್ಪಿಸಲೆತ್ನಿಸಿದ ದರೋಡೆಕೋರರಿಗೆ ಫೈರಿಂಗ್ ಮಾಡಿ ಬಂಧಿಸಿದ ಹೊನ್ನಾಳಿ ಪೊಲೀಸರು
ದಾವಣಗೆರೆಯ ಹೊನ್ನಾಳಿ ತಾಲೂಕಿನ ಅರಬಘಟ್ಟದಲ್ಲಿ ಬ್ಯಾಂಕ್ ದರೋಡೆಗೆ ಬಂದಿದ್ದ ಉತ್ತರ ಪ್ರದೇಶದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ಬ್ಯಾಂಕ್ ದರೋಡೆಗೆ ಆಗಮಿಸಿದೆ ಎಂಬ ಖಚಿತ ಪಡೆದ ಪೊಲೀಸರು ಹೊನ್ನಾಳಿ ಬಳಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ 7 ಮಂದಿ
ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ಕಳವು: ದರೋಡೆಕೋರರಿಗೆ ಗುಂಡಿಕ್ಕಿ ಬಂಧನ
ಹುಬ್ಬಳ್ಳಿ:ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸದ ಬಳಿಯ ಮನೆಯೊಂದಕ್ಕೆ ನುಗ್ಗಿ ಲೂಟಿ ಮಾಡಿದ್ದ ಇಬ್ಬರು ದರೋಡೆಕೋರರಿಗೆ ಗುಂಡು ಹೊಡೆದು ಬಂಧಿಸಿರುವ ನಗರ ಪೊಲೀಸರು ಮತ್ತೋರ್ವನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಇರ್ಷಾದ್, ಅಕ್ಬರ್, ಶಂಷಾದ್ ಖುರೇಷಿ ಗುಂಡೇಟು ತಿಂದು ನಗರ ಪೊಲೀಸರಿಗೆ
ಪತ್ನಿ ತೊರೆದು ಪ್ರೇಯಸಿ ಜೊತೆ ಹೋಗಿದ್ದ ರೌಡಿ ಭೀಕರ ಕೊಲೆ
ಮೈಸೂರು : 9 ವರ್ಷಗಳ ಹಿಂದೆ ಮದುವೆಯಾಗಿದ್ದ ಪತ್ನಿಯನ್ನು ತೊರೆದು, ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವತಿಯ ಜತೆ ಹೋಗಿದ್ದ ರೌಡಿಯನ್ನು ಅವರ ತೋಟದ ಮನೆಯಲ್ಲೇ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಜಯಪುರ ಹೋಬಳಿಯ ಅನುಗನಹಳ್ಳಿಯಲ್ಲಿ ನಡೆದಿದೆ. ದೊರೆಸ್ವಾಮಿ ಅಲಿಯಾಸ್ ಸೂರ್ಯ
ಬಕೆಟ್ ನಲ್ಲಿ ಮುಳುಗಿಸಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ
ಸ್ಪರ್ಧತ್ಮಕ ಜಗತ್ತಿನಲ್ಲಿ ಓದುವುದರಲ್ಲಿ ಹಿಂದುಳಿದಿದ್ದ ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡ ತಂದೆ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕಾಕಿನಾಡ ಜಿಲ್ಲೆಯ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ ಈ ಘಟನೆ ನಡೆದಿದೆ.
8 ಲಕ್ಷ ಕೋಟಿ ರೂ. ಕ್ರಿಪ್ಟೋಕರೆನ್ಸಿ ವಂಚಕ ಕೇರಳದಲ್ಲಿ ಸೆರೆ
ನವದೆಹಲಿ: ಬೃಹತ್ ಪ್ರಮಾಣದ ಕ್ರಿಪ್ಟೋಕರೆನ್ಸಿ ವಂಚನೆಗಾಗಿ ಅಮೆರಿಕದಲ್ಲಿ ಬೇಕಾಗಿದ್ದ ಲಿಥುವೇನಿಯಾದ ವ್ಯಕ್ತಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಅಲೆಕ್ಸೆಜ್ ಬೆಸಿಯೊಕೊವ್, ರಾನ್ಸಮ್ವೇರ್, ಕಂಪ್ಯೂಟರ್ ಹ್ಯಾಕಿಂಗ್ ಮತ್ತು ಮಾದಕವಸ್ತು ವಹಿವಾಟುಗಳಂತಹ ಅಪರಾಧ ಚಟುವಟಿಕೆಗಳ ಆದಾಯವನ್ನು ಅಕ್ರಮವಾಗಿ ವರ್ಗಾಯಿಸಲು ’ಗ್ಯಾರಂಟೆಕ್ಸ್’ ಎಂಬ
ರನ್ಯಾ ರಾವ್ ಜಾಮೀನು ಅರ್ಜಿ ವಜಾ, ನಾಳೆ ಪತಿಯ ಅರ್ಜಿ ವಿಚಾರಣೆ
ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ತರುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ
ಮದುವೆ ನಿರಾಕರಿಸಿದ ಪ್ರಿಯಕರ: ಪ್ರೇಯಸಿ ಆತ್ಮಹತ್ಯೆ, ನೊಂದ ತಾಯಿ ಕೂಡ ಆತ್ಮಹತ್ಯೆ!
ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡರೆ, ಮಗಳ ಸಾವಿನ ದುಃಖ ಭರಿಸಲಾಗದೆ 20 ದಿನದ ಬಳಿಕ ತಾಯಿಯೂ ನೇಣಿಗೆ ಶರಣಾಗಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಹೆಬ್ಬಕವಾಡಿ ಗ್ರಾಮದ ವಿಜಯಲಕ್ಷ್ಮಿ (21) ಹಾಗೂ ತಾಯಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ
ಸುಳ್ಳು ಸುದ್ದಿಗಳ ಹರಡುವಿಕೆ ವಿರುದ್ಧ 150 ಪ್ರಕರಣ ದಾಖಲು: ಸಚಿವ ಡಾ.ಪರಮೇಶ್ವರ
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸಾಮರಸ್ಯ ಹಾಳು ಮಾಡುವವರ ವಿರುದ್ದ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸುವ ಜೊತೆಗೆ ಸುಳ್ಳು ಸುದ್ದಿಗಳ ಮೇಲೆ ನಿಗಾ ವಹಿಸಿ ಈ ವರ್ಷ ರಾಜ್ಯದಲ್ಲಿ 85 ಪ್ರಕರಣಗಳನ್ನು ಹಾಗೂ 65 ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ




