ಅಪರಾಧ
ನ್ಯಾಯಾಂಗ ಬಂಧನ ಮುಗಿದರೂ ಹಾಜರುಪಡಿಸದ ಪೊಲೀಸ್: ಆರೋಪಿಗೆ ಜಾಮೀನು ನೀಡಿದ ಹೈಕೋರ್ಟ್
ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಪೊಲೀಸರು ಕಸ್ಟಡಿ ವಿಸ್ತರಣೆಗೆ ಕೋರದ ಮತ್ತು ಬಂಧಿತನನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸದ ಕಾರಣ ಪ್ರಕರಣವೊಂದರಲ್ಲಿ ಯುವಕನಿಗೆ ಹೈಕೋರ್ಟ್ ಜಾಮೀನು ನೀಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಮಂಡ್ಯ ಹುಬ್ಬನಹಳ್ಳಿ ಗ್ರಾಮದ ಎಚ್.ವಿ.ಚರಣ್ ಜಾಮೀನು ಕೋರಿ ಸಲ್ಲಿಸಿದ್ದ ಮೇಲ್ಮನವಿ ಪರಿಗಣಿಸಿ ನ್ಯಾಯಮೂರ್ತಿ ಜಿ.ಬಸವರಾಜ ಅವರಿದ್ದ ಜಾಮೀನು ನೀಡಿದೆ. ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಬಂಧ ಬೆಳಸಿ ನಂತರ ಬೇರೆ ಜಾತಿಗೆ ಸೇರಿದ್ದಾರೆಂಬ ಕಾರಣಕ್ಕೆ ಮದುವೆಯನ್ನು ನಿರಾಕರಿಸಿದ
ಮಾಲೂರಿನಲ್ಲಿ ಬ್ರಿಡ್ಜ್‌ನಿಂದ ಉರುಳಿದ ಕಾರು: ಸ್ಥಳದಲ್ಲೇ ನಾಲ್ವರು ಯುವಕರ ಸಾವು
ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬ್ರಿಡ್ಜ್ ಮೇಲಿನಿಂದ ಉರುಳಿ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯುವಕರು ಚೆನ್ನೈನವರಾಗಿದ್ದು, ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27),
ಪೊಲೀಸ್ ಅಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್‌ಗಳ ಮದುವೆಯಾಗಿ ಕೋಟಿ ಕೋಟಿ ದೋಚುತ್ತಿದ್ದ ಮಹಿಳೆ ಪೊಲೀಸ್ ಬಲೆಗೆ
ಪೊಲೀಸರು ಸೇರಿದಂತೆ ಸರ್ಕಾರಿ ಅಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್‌ಗಳನ್ನು ಒಲಿಸಿ ಮದುವೆಯಾಗಿ ನಂಬಿಸುವುದು, ಮತ್ತೆ ಕೆಲವರನ್ನು ಸಂಬಂಧ ಬೆಳೆಸಿ ಬಲೆಗೆ ಬೀಳಿಸುವುದು, ಬಳಿಕ ಅವರಲ್ಲಿದ್ದ ಹಣವನ್ನೆಲ್ಲ ದೋಚುವುದನ್ನೇ ಜೀವನವನ್ನಾಗಿಸಿಕೊಂಡಿದ್ದ ಉತ್ತರ ಪ್ರದೇಶದ ಮಹಿಳೆಯೊಬ್ಬಳು ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಕೆಲವು ಬ್ಯಾಂಕ್ ಮ್ಯಾನೇಜರ್ ಮತ್ತು
ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಕೇರಳದ ವಿದ್ಯಾರ್ಥಿಗಳಿಬ್ಬರ ಸಾವು, ಆತ್ಮಹತ್ಯೆ ಶಂಕೆ
ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ, ಇದು ಆತ್ಮಹತ್ಯೆ ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಕೇರಳದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತಪಟ್ಟಿರುವ ವಿದ್ಯಾರ್ಥಿಗಳು.
ಕೋಲಾರದಲ್ಲಿ ಆಗಾಗ ತವರುಮನೆಗೆ ಹೋಗುತ್ತಿದ್ದಳೆಂದು ಪತ್ನಿಯ ಕೊಲೆಗೈದ ಪತಿ
ಕೋಲಾರದ ಜನ್ನಘಟ್ಟ ಗ್ರಾಮದಲ್ಲಿ ಆಗಾಗ ತವರು ಮನೆಗೆ ಹೋಗಿ ಬರುತ್ತಿದ್ದ ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಂದ ಗಂಡ ಸಹಜ ಸಾವೆಂದು ಬಿಂಬಿಸಲು ಹೊರಟಿದ್ದ. ಅನುಮಾನಗೊಂಡ ಮೃತಳ ಪೋಷಕರು
ಗಾಜಾ ಮೇಲೆ ಮತ್ತೆ ಇಸ್ರೇಲ್ ದಾಳಿ: 24 ಪ್ಯಾಲೆಸ್ತೀನಿಯರು ಬಲಿ
ಇಸ್ರೇಲ್ ಗಾಜಾದ ಮೇಲೆ ಮತ್ತೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಠ 24 ಪ್ಯಾಲೆಸ್ತೀನಿಯರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಎರಡು ವರ್ಷಗಳ ಯುದ್ಧದ ನಂತರ ಅಕ್ಟೋಬರ್ 10 ರಂದು ಇಸ್ರೇಲ್ ಮತ್ತು ಹಮಾಸ್ ನಡುವೆ ಅಮೆರಿಕ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ
ಕಾಲ್‌ಸೆಂಟರ್ ಉದ್ಯೋಗಿಗಳ ಅಪಹರಣ: 8 ಆರೋಪಿಗಳು ಸೆರೆ
ಬೆಂಗಳೂರಿನ ಕೋರಮಂಗಲದಲ್ಲಿರುವ ಕಾಲ್‌ಸೆಂಟರ್‌ನಿಂದ ಉದ್ಯೋಗಿಗಳನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂಟು ಆರೋಪಿಗಳನ್ನು 12 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬನಾಗಿರುವ ಚಲಪತಿ ಕೋಲಾರ ಜಿಲ್ಲೆಯ ಕಾನ್‌ಸ್ಟೇಬಲ್. ಈತನ ತಂಡ ಕೋರಮಂಗಲ ಕಾಲ್‌ಸೆಂಟರ್ ಗೆ ಹೋಗಿ ನಾಲ್ವರನ್ನು ಕರೆದು ನಾವು ಪೊಲೀಸರು
ಕೆಆರ್ ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಶವ ಬಾವಿಯಲ್ಲಿ ಪತ್ತೆ
ಮಂಡ್ಯದ ಕೆಆರ್ ಪೇಟೆ ತಾಲೂಕಿನ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ಬಾವಿಯೊಂದರಲ್ಲಿ 22 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಮೂಲದ ಕರಣ್.ಎಸ್ ಎಂದು ಗುರುತಿಸಲಾಗಿದೆ. ಕರಣ್ ಶ್ರವಣಬೆಳಗೊಳದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ಬಾವಿಯ ಸಮೀಪದಲ್ಲೇ
ನಕಲಿ ಗುರೂಜಿ ಬಳಿ ಚಿಕಿತ್ಸೆಗೆ ಹೋಗಿ 48 ಲಕ್ಷ ರೂ. ಜೊತೆ ಆರೋಗ್ಯ ಕಳಕೊಂಡ ಬೆಂಗಳೂರಿನ ಟೆಕ್ಕಿ
ನಕಲಿ ಗುರೂಜಿ ಬಳಿ ಬೆಂಗಳೂರಿನ ಟೆಕ್ಕಿಯೊಬ್ಬರು ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಹೋಗಿ 48 ಲಕ್ಷ ರೂಪಾಯಿ ಜೊತೆ ಆರೋಗ್ಯವನ್ನೂ ಕಳೆದುಕೊಂಡಿರುವ ಪ್ರಕರಣ ನಡೆದಿದೆ. ‘ದೇವರಾಜ್ ಬೂಟಿ’ ಎಂಬ ದುಬಾರಿ ಔಷಧಿಯನ್ನು ಖರೀದಿಸಿ ಸೇವಿಸಿದ್ದರಿಂದ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟು ಕಿಡ್ನಿ
ರಾಯಭಾಗದಲ್ಲಿ ಯುವತಿ ನಾಪತ್ತೆ: ಪಕ್ಕದ ಮನೆಯ ಮೂರು ಮಕ್ಕಳ ತಂದೆಯ ಕೈವಾಡ ಶಂಕೆ
ಬೆಳಗಾವಿ ರಾಯಭಾಗ ತಾಲೂಕಿನಲ್ಲಿ 19 ವರ್ಷದ ಯುವತಿ ನಾಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆ ಹಿಂದೆ ಮದುವೆಯಾಗಿ ಮೂವರು ಮಕ್ಕಳಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಆಕೆಯ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.




