Thursday, January 01, 2026
Menu

ಬೆಳಗಾವಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ವಾಪಸ್‌

ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಕಂಡಕ್ಟರ್ ಕನ್ನಡದಲ್ಲಿ ಹೇಳಿ ಎಂದ ಕಾರಣ ಮುಂದಿಟ್ಟುಕೊಂಡು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ್ದ ದೂರುದಾರೆ ಕೇಸ್‌ ವಾಪಸ್‌ ಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ತೆಯ ತಾಯಿ ಈ ಕುರಿತು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಾವೂ ಸಹ ಕನ್ನಡಿಗರೇ ಆಗಿದ್ದೇವೆ. ಈ ಜಗಳವನ್ನು ಕನ್ನಡ, ಮರಾಠಿ ಜಗಳ ಮಾಡಲಾಗುತ್ತಿದೆ. ನಾವೂ ಸಹ ಕನ್ನಡಿಗರು. ಇದನ್ನು ಬೆಳೆಸಬೇಡಿ ಎಂದು ಮನವಿ ಮಾಡಿದ್ದಾರೆ. ಕರ್ನಾಟಕದ ಬಸ್

ವಿಜಯಪುರದಿಂದ ಕುಂಭಮೇಳಕ್ಕೆ ಹೊರಟಿದ್ದ ಇಬ್ಬರು ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್ ಗೆ ಪ್ರಯಾಣಿಸುತ್ತಿದ್ದಾಗ ಗುಜರಾತ್‌ನ ಪೋರ್‌ಬಂದರ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟವರು. ಚಡಚಣ ಪಟ್ಟಣದಿಂದ

ಗೆಳತಿ ಸೇರಿ ಕುಟುಂಬದ ಐವರನ್ನು ಕೊಲೆಗೈದು ವಿಷ ಸೇವಿಸಿದ ಯುವಕ

ಕೇರಳದ ತಿರುವನಂತಪುರದಲ್ಲಿ ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿ ಸೇರಿದಂತೆ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 23 ವರ್ಷದ ಆರೋಪಿ ಪೆರುಮಾಳದ ನಿವಾಸಿ ಅಫಾನ್ ಪೊಲೀಸರಿಗೆ ಶರಣಾಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಐದು ಜನರನ್ನು

ಐಎಂಎ ಹಗರಣ ಸಂತ್ರಸ್ತರಿಗೆ ನಿಗದಿತ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಭೈರೇಗೌಡ

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ  ಹಣ ಕಳೆದುಕೊಂಡಿರುವ ಎಲ್ಲ ಸಂತ್ರಸ್ತರಿಗೂ ರಂಜಾನ್ ಹಬ್ಬಕ್ಕೂ ಮೊದಲು ನಿಗದಿತ ಪರಿಹಾರ ಹಣ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧ ಕಚೇರಿಯಲ್ಲಿ ಸಭೆ

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು. ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು

ಕೆಎಸ್ಸಾರ್ಟಿಸಿ ಕಂಡಕ್ಟರ್‌ ಮೇಲೆ ಹಲ್ಲೆಕೋರರ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ ತಾಕೀತು

ಬೆಳಗಾವಿಯಲ್ಲಿ ಕರ್ನಾಟಕದ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭೇಟಿ

ಸ್ನೇಹಿತರ ಜತೆಗೂಡಿ ಮಾಜಿ ಗೆಳತಿ ಮೇಲೆ ಗ್ಯಾಂಗ್‌ ರೇಪ್‌

ಸ್ನೇಹಿತರೊಂದಿಗೆ ಸೇರಿ ವ್ಯಕ್ತಿಯೊಬ್ಬ ತನ್ನ ಮಾಜಿ ಗೆಳತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರ ಭಿವಂಡಿಯಲ್ಲಿ ನಡೆದಿದೆ. ಈಗ ಗೆಳತಿ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ಮಾಜಿ ಪ್ರಿಯಕರ ಮೃಗೀಯವಾಗಿ ವರ್ತಿಸಿದ್ದು, ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ರೂರಿಗಳು ಬೆಳಗ್ಗೆ

ಮಹೇಶ್ ಜೋಷಿ ಕ್ಷಮೆ ಯಾಚನೆ ಜೊತೆ ಒಂದು ಲಕ್ಷ ರೂಪಾಯಿ ದಂಡ ಪಾವತಿಸಿ: ಕೋರ್ಟ್‌

ಬೆಂಗಳೂರು ದೂರದರ್ಶನ ಕೇಂದ್ರದ ನಿವೃತ್ತ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಜೋಷಿಗೆ ಒಂದು ಲಕ್ಷ ರೂಪಾಯಿಗಳ ದಂಡ ಹಾಗೂ ಕೇಸು ದಾಖಲಿಸಿದ ದಿನದಿಂದ ದಂಡ ಪಾವತಿಯ ದಿನದವರೆಗೆ ಶೇ.೨೪ರಷ್ಟು ಬಡ್ಡಿಯನ್ನು ಅರ್ಜಿದಾರ ಎನ್.ಕೆ.ಮೋಹನ್ ರಾಂ ಅವರಿಗೆ ತೀರ್ಪು ಪ್ರಕಟಿಸಿದ ಏಳು ದಿನಗಳೊಳಗೆ ನೀಡಬೇಕು

ಕುಂಭಮೇಳಕ್ಕೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಪಾಲ್ಗೊಳ್ಳಲು ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ಗೋಕಾಕ್‌ನ ಏಳು ಮಂದಿ ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಈ ದುರಂತ ಸಂಭವಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ,

ಲೋಕಾಯುಕ್ತ ಹೆಸರಲ್ಲಿ ಬೆದರಿಸಿ ಹಣ ಸುಲಿಗೆ ಮಾಡುತ್ತಿದ್ದಾತ ಅರೆಸ್ಟ್‌

ಲೋಕಾಯುಕ್ತ ಡಿವೈಎಸ್​ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸರ್ವಿಸ್‌ನಿಂದ ವಜಾಗೊಂಡ ರಿಸರ್ವ್ ಪೊಲೀಸ್ ಕಾನ್ಸ್​ಟೇಬಲ್ ಮುರುಗಪ್ಪ ಬಂಧಿತ ಆರೋಪಿ. ಬಂಧಿತ ಮುರುಗೆಪ್ಪ ವಿರುದ್ಧ ರಾಜ್ಯದ ನಾನಾ ಠಾಣೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆರೋಪಿಯು