Monday, September 28, 2026
Menu

ಬೆಂಗಳೂರಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಮನೆಗೆಲಸದ ದಂಪತಿ ಅರೆಸ್ಟ್‌

ಬೆಂಗಳೂರಿನ ಸದಾಶಿವನಗರದ ನಿವಾಸಿಯೊಬ್ಬರ ಮನೆಯಲ್ಲಿ ನಾಲ್ಕು ವರ್ಷಗಳಿಂದ ಕೆಲಸಕ್ಕಿದ್ದ ಮಹಿಳೆ ಮತ್ತು ಆಕೆಯ ಪತಿ ಸೇರಿ 1.37 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಸದಾಶಿವನಗರದ ನಿವಾಸಿ ಅಭಿಷೇಕ್ ಅವರ ಮನೆಯಲ್ಲಿ ಪಶ್ಚಿಮ ಬಂಗಾಳದ ಹಾಜೀರಾ ಬೇಗಂ ಎಂಬಾಕೆ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದಳು. 2024 ರಲ್ಲಿ ಕೆಲಸ ಬಿಟ್ಟಿದ್ದಳು. ಕಳೆದ ಡಿಸೆಂಬರ್ 27 ರಂದು ಮತ್ತೆ ಕೆಲಸಕ್ಕೆ ಬಂದಿದ್ದಳು. ಮೂರು ತಿಂಗಳ ಹಿಂದಷ್ಟೇ

ದಾವಣಗೆರೆಯಲ್ಲಿ ಬೈಕ್‌ಗೆ ಗುದ್ದಿದ ಅಪರಿಚಿತ ವಾಹನ: ಸವಾರ ಸಾವು

ದಾವಣಗೆರೆಯ ಶಿರಮಗೊಂಡನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಸವಾರ ಮಂಜುನಾಥ (27) ಮೃತಪಟ್ಟ ಯುವಕ. ಗದಗ ಶಿಂಗ್ಲಿ ಗ್ರಾಮದ ಮಂಜುನಾಥ ಬೈಕ್‌ನಲ್ಲಿ ಬೆಂಗಳೂರಿಗೆ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ

ಕೆಎಸ್‌ಆರ್‌ಟಿಸಿ ಬಸ್‌ಗೆ ಟಿಪ್ಪರ್ ಡಿಕ್ಕಿ: 9 ಮಂದಿಗೆ ಗಾಯ

ಟಿಪ್ಪರ್ ಲಾರಿ, ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ವಿದ್ಯಾರ್ಥಿಗಳು ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಡುಪಿಯ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನ ಹಾಜರಿ ಬಳಿ ನಡೆದಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಬರುತ್ತಿದ್ದ ಕೇರಳ

ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ಇರಾನ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ, 35 ಮಂದಿ ಬಲಿ

ಇರಾನ್‌ನಲ್ಲಿ ಆರ್ಥಿಕ ಬಕ್ಕಟ್ಟು ತೀವ್ರಗೊಂಡಿದ್ದು, ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನ ಪ್ರತಿಭಟನೆ ಆರಂಭಿಸಿದ್ದು, 35ಕ್ಕೂ ಹೆಚ್ಚು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಇರಾನ್‌ನಲ್ಲಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ಸಾರ್ವಜನಿಕರು ಬಂಡೆದಿದ್ದಾರೆ. 1,200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಸರ್ಕಾರ,

ಬಾಂಗ್ಲಾದಲ್ಲಿ ಹಿಂದೂ ಪತ್ರಕರ್ತನ ಹತ್ಯೆ, ಹಿಂದೂ ಮಹಿಳೆಯ ಅತ್ಯಾಚಾರ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, 40 ವರ್ಷದ ಹಿಂದೂ ಮಹಿಳೆ ಮೇಲೆ  ಇಬ್ಬರು ಅತ್ಯಾಚಾರ ಎಸಗಿ ಮರಕ್ಕೆ ಕಟ್ಟಿಹಾಕಿ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಜೆನಿಹಾದಾಹ್ ವಿಭಾಗೀಯ ಜಿಲ್ಲೆಯಾದ ಕಾಲಿಂಗಜ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು

ಬಳ್ಳಾರಿ ಗಲಭೆ: 26 ಆರೋಪಿಗಳು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ

ಬೆಂಗಳೂರು: ಬಳ್ಳಾರಿಯ ಬ್ಯಾನರ್​​ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣದ ಸಂಬಂಧ ಕೊಲೆ ಆರೋಪಿ ಗುರುಚರಣ್‌ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ

ದರೋಡೆಗೆ ಸಂಚು ಹಾಕ್ತಿದ್ದ ಐವರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ: ಭದ್ರಾವತಿಯ ಗೋಂದಿ ಕೈಮರದಲ್ಲಿ ದರೋಡೆಗೆ ಸಂಚು ಹಾಕುತ್ತಿದ್ದ ಐವರು ಆರೋಪಿಗಳಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಭದ್ರಾವತಿಯ ಘನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮದುವೆ ಸಮಾರಂಭದಲ್ಲಿ ಎಎಪಿ ನಾಯಕ ಜರ್ನೈಲ್ ಸಿಂಗ್ ಹತ್ಯೆ

ಅಮೃತ್‌ಸರ ಎಎಪಿ ನಾಯಕ ಜರ್ನೈಲ್ ಸಿಂಗ್‌ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಅತಿಥಿಗಳ ಸಮ್ಮುಖವೇ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜರ್ನೈಲ್ ಸಿಂಗ್ ತರಣ್ ತರಣ್ ಜಿಲ್ಲೆಯ ವಲ್ಥೋವಾ ಗ್ರಾಮದ ನಿವಾಸಿ. ಅಮೃತಸರದಲ್ಲಿ ಮದುವೆಯೊಂದರಲ್ಲಿ ಭಾಗಿಯಾಗಿದ್ದಾಗ ದುಷ್ಕರ್ಮಿಗಳು ಸಮೀಪದಿಂದಲೇ ಗುಂಡು ಹಾರಿಸಿ

ಸುಳ್ಯದ ತಾಯಿ ಮಗು ಶವ ಕೆರೆಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮನೆಯೊಂದರಲ್ಲಿ ರಾತ್ರಿ ಮಲಗಿದ್ದ ತಾಯಿ ಮತ್ತು ಮೂರು ವರ್ಷದ ಮಗುವಿನ ಶವ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮಗು ಧನ್ವಿ (3) ಮೃತಪಟ್ಟವರು. ಹರೀಶ್ ಅವರು

ಬೆಂಗಳೂರಿನಲ್ಲಿ ಓಂ ಶಕ್ತಿ ಭಕ್ತರ ಮೇಲೆ ಕಲ್ಲೆಸೆತ: ನಾಲ್ವರು ಬಾಲಕರ ಬಂಧನ

ಚಾಮರಾಜಪೇಟೆ ಬಳಿಯ ಜೆಜೆ ನಗರ ಠಾಣೆ ವ್ಯಾಪ್ತಿಯಲ್ಲಿ ದೇವಿಯ ತೇರು ಎಳೆಯುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪ್ರಕರಣ ಸಂಬಂಧ ನಾಲ್ಕು ಬಾಲಕರನ್ನು ಬಂಧಿಸಲಾಗಿದೆ. ವಿ.ಎಸ್ ಗಾರ್ಡಡ್‌ನ ಓಂ