Monday, September 28, 2026
Menu

ರಾತ್ರಿ ತಿರುಪತಿಯ ದೇಗುಲವೊಂದರ ಗೋಪುರ ಏರಿ ಆತಂಕ ಸೃಷ್ಟಿಸಿದ ಕುಡುಕ

ತಿರುಪತಿಯಲ್ಲಿರುವ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾದ ರಾತ್ರಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ದೇಗುಲದ ರಾಜಗೋಪುರವನ್ನು ಏರಿ ಆತಂಕ ಸೃಷ್ಟಿಸಿದ್ದಾನೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಒಳನುಗ್ಗಿದ್ದ ವ್ಯಕ್ತಿ ಗೋಪುರದ ಮೇಲಿದ್ದ ಕಳಶಗಳಿಗೆ ಹಾನಿ ಮಾಡಿದ್ದಲ್ಲದೆ, ತನಗೆ ಮದ್ಯ ತಂದುಕೊಟ್ಟರೆ ಮಾತ್ರ ಕೆಳಗೆ ಇಳಿಯುವುದಾಗಿ ಪಟ್ಟು ಹಿಡಿದಿದ್ದ. ​ವಿಷಯ ತಿಳಿದು ಸ್ಥಳಕ್ಕೆ ಬಂದ ತಿರುಪತಿ ಪೂರ್ವ ವಿಭಾಗದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ವ್ಯಕ್ತಿಯನ್ನು ಕೆಳಗೆ ಇಳಿಯುವಂತೆ ಮನವೊಲಿಸಲು ಯತ್ನಿಸಿದಾಗ, ಕುಡಿಯಲು

ಬಳ್ಳಾರಿ ಬ್ಯಾನರ್‌ ಗಲಾಟೆಯಲ್ಲಿ ಫೈರಿಂಗ್‌: ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಎದುರು ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಫೈರಿಂಗ್‌ಗೆ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ ಎಂಬವರು ಬಲಿಯಾದ ಬಳಿಕ ಶಾಸಕ ಭರತ್‌ ರೆಡ್ಡಿ ಆಪ್ತ ಸತೀಶ್‌ ರೆಡ್ಡಿಯ ಖಾಸಗಿ

ಆನ್‌ಲೈನ್‌ನಲ್ಲಿ ಪಾರ್ಟ್​​ ಟೈಂ ಕೆಲಸ ಹುಡುಕಾಡಿ 12 ಲಕ್ಷ ರೂ.ಕಳಕೊಂಡ ಚಿಕ್ಕಬಳ್ಳಾಪುರ ನರ್ಸ್‌

ಅಂತರ್ಜಾಲದಲ್ಲಿ ಪಾರ್ಟ್​​ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಚಿಕ್ಕಬಳ್ಳಾಪುರದ ನರ್ಸ್‌ವೊಬ್ಬರು ಆನ್​​ಲೈನ್​​ ವಂಚನೆಗೆ ಒಳಗಾಗಿ 12 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೋಸ ಹೋಗಿದ್ದು ತಿಳಿದುಕೊಂಡ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ

ನಿವೃತ್ತ ಶಿಕ್ಷಕನಿಗೆ ಡಿಜಿಟಲ್ ಅರೆಸ್ಟ್: 1.61 ಕೋಟಿ ದೋಚಿದ ಖದೀಮ

ಕಾರವಾರ: ಮುಂಬೈ ಪೊಲೀಸ್ ಇನ್ಸ್‌ಪೆಕ್ಟರ್ ಸೋಗಿನಲ್ಲಿ ವಿಡಿಯೋ ಕಾಲ್ ಮೂಲಕ ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ‘ಡಿಜಿಟಲ್ ಅರೆಸ್ಟ್ ಮಾಡಿರುವ ಸೈಬರ್ ವಂಚಕರು 1.61 ಕೋಟಿ ರೂ ವಂಚಿಸಿರುವ ಘಟನೆ ನಡೆದಿದೆ. ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ಪಾಲ್ಡೆನ್ (72)ಅವರಿಗೆ ವಾಟ್ಸ್​

ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್‌ ಮಾಡಿರುವ ಇಬ್ಬರ ಬಂಧನ

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಬರುತ್ತಿದ್ದ ಅಶ್ಲೀಲ ಕಮೆಂಟ್‌ ಕುರಿತಂತೆ ದಾಖಲಿಸಿದ್ದ ದೂರಿನ ತನಿಖೆ ನಡೆಸಿದ ಸೈಬರ್‌ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್​​ಗಳು ಬಂದಿದ್ದವು.

ಬಳ್ಳಾರಿ ಬ್ಯಾನರ್‌ ಗಲಾಟೆಯಲ್ಲಿ ಕೈ ಕಾರ್ಯಕರ್ತ ಖಾಸಗಿ ವ್ಯಕ್ತಿಯ ಗುಂಡಿಗೆ ಬಲಿ: ಎಸ್ಪಿ ಸ್ಪೋಟಕ ಮಾಹಿತಿ

ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಗುಂಪುಗಳ ಮಧ್ಯೆ ನಡೆದ ಗಲಾಟೆ ತೀವ್ರಗೊಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ (28) ಖಾಸಗಿ ವ್ಯಕ್ತಿಯ ರಿವಾಲ್ವಾರ್‌ನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಜಿಲ್ಲಾ ಪೊಲೀಸ್

ಆಸ್ತಿಗಾಗಿ ಐಎಎಫ್ ನಿವೃತ್ತ ಉದ್ಯೋಗಿಯನ್ನು ಕೊಲೆ ಮಾಡಿಸಿದ ಪುತ್ರರು

ಉತ್ತರ ಪ್ರದೇಶದ ಘಾಜಿಯಾಬಾದ್​​ನ ಬಾಗ್‌ಪತ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ನಿವೃತ್ತ ಸಿಬ್ಬಂದಿಯೊಬ್ಬರನ್ನು ಅವರ ಮಕ್ಕಳೇ ಗುಂಡಿಕ್ಕಿ ಕೊಲೆ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ನಡೆದು ಐದು ದಿನಗಳ ನಂತರ ಹೊರ ಬಂದಿದೆ. ಆಸ್ತಿಗಾಗಿ ಮಕ್ಕಳು ಈ ಕೊಲೆ ಮಾಡಿಸಿರುವುದಾಗಿ ಪೊಲೀಸರು

ಉಗ್ರ ನಸೀರ್‌ಗೆ ಜೈಲಿನಲ್ಲಿ ನೆರವು: ಮೂವರ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್

ಉಗ್ರ ನಸೀರ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಎಆರ್ ಕಾನ್ಸ್ಟೇಬಲ್‌ ಚಾಂದ್ ಪಾಷಾ, ಅನಿಸಾ ಫಾತಿಮಾ, ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ ನಾಗರಾಜ್ ವಿರುದ್ಧ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪರಾರಿಯಾಗಿದ್ದ

ಮಗಳಿಗೆ ಹಿಂಸಿಸುತ್ತಿದ್ದನೆಂದು ಶಿವಮೊಗ್ಗದಲ್ಲಿ ಅಳಿಯನ ಕೊಲೆಗೈದ ಮಾವ

ಶಿವಮೊಗ್ಗ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಎದುರು ಮಾವನೊಬ್ಬ ಅಳಿಯನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ರಾಡ್​​ನಿಂದ ದಾಳಿ ಮಾಡಿದ್ದಾರೆ, ಆತ

ಮದುವೆ ಭರವಸೆಯಿತ್ತು ವೈದ್ಯನಿಂದ ಅತ್ಯಾಚಾರ: ಮದುವೆಯಾಗೆಂದರೆ ಖಾಸಗಿ ಪೋಟೊ ತೋರಿಸಿ ವಿದ್ಯಾರ್ಥಿನಿಗೆ ಬೆದರಿಕೆ

ಲಕ್ನೋದ KGMU ಸರ್ಕಾರಿ ವೈದ್ಯಕೀಯ ಸಂಸ್ಥೆಯ ವೈದ್ಯ ಮದುವೆಯಾಗುವುದಾಗಿ ನಂಬಿಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಳಿಕ ಆಕೆಯೊಂದಿಗಿನ ಖಾಸಗಿ ಫೋಟೊಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿರುವುದಾಗಿ ಪ್ರಕರಣ ದಾಖಲಾಗಿದೆ. ವೈದ್ಯನ ಹಿನ್ನೆಲೆ ಮತ್ತು ವಿಳಾಸಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿ ಮೊಹ್ಮದ್‌ ಅದಿಲ್‌ನನ್ನು ಪತ್ತೆಹಚ್ಚಲು ಪ್ರಯತ್ನಗಳು