ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮನವಿಯ ವಿಚಾರಣೆ ಜನವರಿ 24ರಂದು ನಡೆಯಲಿದೆ.
ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಜನವರಿ 6ರಂದು ಹಿರಿಯ ವಕೀಲ ಅನಿಲ್ ನಿಶಾನಿ ಮೂಲಕ ಅರ್ಜಿ ಸಲ್ಲಿಸಿದ್ದರು.
ಕಳೆದ ಜೂನ್ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪದಡಿ ಜೂ.8ರಂದು ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದರು. ಎಲ್ಲಾ ಆರೋಪಿಗಳಿಗೂ ಜಾಮೀನು ದೊರೆತಿದೆ. ಕೆಳ ಹಂತದ ನ್ಯಾಯಾಲಯ ನೀಡಿರುವ ಜಾಮೀನು ಅರ್ಜಿಯನ್ನು ಸುಪ್ರಿಂಕೋರ್ಟ್ ರದ್ದುಗೊಳಿಸಿದರೆ ಆರೋಪಿಗಳನ್ನು ಮತ್ತೆ ಬಂಧಿಸಬಹುದಾಗಿದೆ.