Menu

ಪತ್ನಿಯೊಂದಿಗೆ ಜಗಳ: ಮಕ್ಕಳ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿ ಸಿಟ್ಟಿನ ಭರದಲ್ಲಿ ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಕ್ಕಳಿಗೆ ವಿಷಕೊಟ್ಟು ಬಳಿಕ ಆತ ವಿಷ ಸೇವಿಸಿದ್ದಾನೆ. ಮೃತ ಬಾಬುರಾಮ್ ಕುಟುಂಬ ಕೆಲವು ಸಮಯದಿಂದ ವೈವಾಹಿಕ ಬಿಕ್ಕಟ್ಟಿನಲ್ಲಿದೆ. ಪತ್ನಿ ಹೆತ್ತವರ ಮನೆಯಲ್ಲಿ ವಾಸವಾಗಿದ್ದರು. ಸಹೋದರನ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಗಂಡನ ಗ್ರಾಮಕ್ಕೆ ಮರಳಿದ್ದರು. ಬಳಿಕ ದಂಪತಿ ನಡುವೆ ಜಗಳ ನಡೆದಿತ್ತು ಎಂದು ಹೇಳಲಾಗಿದೆ.

ಬಾಬುರಾಮ್ ಮಕ್ಕಳನ್ನು ಕ್ಷೌರ ಮಾಡಲು ಕರೆದುಕೊಂಡು ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ. ನಂತರ ಮಕ್ಕಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ. ಬಾಬುರಾಮ್ ಸ್ಥಿತಿ ಹದಗೆಟ್ಟಿದ್ದರಿಂದ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾರೆ.

ಬಾಬುರಾಮ್ ಪತ್ನಿ, ಮಕ್ಕಳು ಅವರಿಗೆ ವಿಷ ಸೇವಿಸುವಂತೆ ಒತ್ತಾಯಿಸಿರಬಹುದು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ, ಎಲ್ಲ ಸಾಧ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಬಾಬುರಾಮ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೌಟುಂಬಿಕ ಕಲಹದಿಂದ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಗ್ರಾಮೀಣ ಎಸ್ಪಿ ಡಾ. ಪ್ರಕಾಶ್ ಸಿಂಗ್ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದು, ಪೊಲೀಸರು ಬಾಬುರಾಮ್ ಪತ್ನಿಯನ್ನುವಿಚಾರಣೆ ನಡೆಸುತ್ತಿರುವುದಾಗಿ ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *