ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಮೂವರು ಪಾಕಸ್ತಾನಿ ಸೈನಿಕರು ಸೇರಿದಂತೆ 7 ಮಂದಿಯನ್ನು ಭಾರತೀಯ ಸೇನೆ ಹತ್ಯೆಗೈದಿದೆ.
ಫೆಬ್ರವರಿ 4 ಮತ್ತು 5 ರಂದು ಈ ಘಟನೆ ನಡೆದಿದ್ದು, ಪೂಂಚ್ ಜಿಲ್ಲೆಯ ಕೃಷ್ಣ ಘಾಟ್ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಅಕ್ರಮ ನುಸುಳುಕೋರರನ್ನು ಎನ್ ಕೌಂಟರ್ ಮಾಡಲಾಗಿದೆ.
ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಗಡಿಯಿಂದ ಅಪ್ರೋಚಿತ ಗುಂಡಿನ ದಾಳಿ ನಡೆದಿದ್ದು, ಇದಕ್ಕೆ ಭಾರತೀಯ ಸೇನೆ ಪ್ರತಿದಾಳಿ ನಡೆಸಿತು. ಅಲ್ಲದೇ ಇದೇ ವೇಳೆ ಅಕ್ರಮವಾಗಿ ನುಸುಳಲು ಯತ್ನಿಸಿದ ನುಸುಳುಕೋರರನ್ನು ಹತ್ಯೆಗೈಯ್ಯಲಾಯಿತು ಎಂದು ಭಾರತೀಯ ಸೇನೆ ತಿಳಿಸಿದೆ.