ಆರೋಗ್ಯ
ತುಮಕೂರಿನಲ್ಲಿ ಮಗಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ ತಾಯಿ
ತುಮಕೂರಿನ ಮೆಗ್ಗಾನ್ ಆಸ್ಪತ್ರೆ ಕ್ವಾರ್ಟಸ್‌ನಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತನ್ನ ಹನ್ನೊಂದು ವರ್ಷದ ಮಗಳನ್ನು ಕೊಲೆ ಮಾಡಿದ ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 11 ವರ್ಷದ ಪೂರ್ವಿಕ ಕೊಲೆಯಾಗಿರುವ ಮಗು, 38 ವರ್ಷದ ಶೃತಿ ಮಗಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡವರು. ಮಾನಸಿಕ ಅಸ್ವಸ್ಥರಾಗಿದ್ದ ಶೃತಿಯವರು ಮಗಳು ಪೂರ್ವಿಕಾ ಮಲಗಿದ್ದಾಗ ಅವಳ ತಲೆಗೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಮಗಳ ಮೃತ ದೇಹದ ಮೇಲೆ ನಿಂತುಕೊಂಡು ಅಲ್ಲಿದ್ದ
ಚಿಂತಾಮಣಿಯಲ್ಲಿ ಜಾತಿ ಗಣತಿ ನಡೆಸುತ್ತಿದ್ದಾಗಲೇ ಶಿಕ್ಷಕನ ಸಾವು
ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ. ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ.
ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯು, ಬೆಂಗಳೂರಿನಲ್ಲಿ 2478 ಪ್ರಕರಣ
ರಾಜ್ಯದಲ್ಲಿ ಒಂದೆಡೆ ಮಳೆಯ ಅವಾಂತರವಾದರೆ ಮತ್ತೊಂದೆಡೆ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದು, ಐದಕ್ಕಿಂತ ಹೆಚ್ಚು ಸಾವುಗಳಾಗಿವೆ. ಸತತ ಮಳೆಯಿಂದಾಗಿ ಡೆಂಗ್ಯು ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ 5093 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2478 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅ.1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿ
ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ವೈದ್ಯಕೀಯ ಸೇವೆ ಒದಗಿಸಲು ಹೊಸ ಯೋಜನೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಅನ್ನು ಅಕ್ಟೋಬರ್ 1 ರಿಂದ ಜಾರಿಗೊಳಿಸಲು ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ
ಹಾಸನದಲ್ಲಿ ಎಡಗಾಲು ಬದಲು ಬಲಗಾಲಿಗೆ ಆಪರೇಷನ್: ಹಾಸಿಗೆ ಹಿಡಿದ ಮಹಿಳೆ
ಎಡಗಾಲಿನ ರಾಡ್ ತೆಗೆಸಲೆಂದು ಶಸ್ತ್ರಕ್ರಿಯೆಗಾಗಿ ಹಾಸನ ಹಿಮ್ಸ್ ಗೆ ದಾಖಲಾಗಿದ್ದ ಮಹಿಳೆಯ ಬಲಗಾಲನ್ನು ವೈದ್ಯರು ಆಪರೇಷನ್ ಮಾಡಿ ಆಕೆ ಓಡಾಡಲು ಆಗದೆ ಹಾಸಿಗೆ ಹಿಡಿಯುವಂತೆ ಮಾಡಿರುವುದಾಗಿ ಆರೋಪ ಕೇಳಿ ಬಂದಿದೆ. ಜ್ಯೋತಿ ಎಂಬವರು ಎಡಗಾಲಿನಲ್ಲಿದ್ದ ರಾಡ್ ತೆಗೆಸಲು ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಕಾಟ: ರಾಜ್ಯದಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ವ್ಯಾಪಕವಾಗಿದ್ದು, ಈ ವರ್ಷ ಸೋಂಕಿಗೆ 19 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆ ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ ಜನರಲ್ ಆಸ್ಪತ್ರೆ
ಮೈಸೂರಿನಲ್ಲಿ ನದಿಗೆ ಹಾರಿದ ಯುವತಿ, ಹಾಸನದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ
ಹುಣಸೂರು ತಾಲೂಕು ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಮಾಡಿಕೊಂಡ ಯುವತಿ. ಮೈಸೂರಿನ ಜಯಲಕ್ಷ್ಮಿಪುರಂ ನಲ್ಲಿರುವ ವಿಶ್ವಕವಿ ಕುವೆಂಪು ಕಾಲೇಜಿನಲ್ಲಿ ದ್ವಿತೀಯ
ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ಈ ವರ್ಷ 17 ಮಂದಿ ಬಲಿ
ಕೇರಳದಲ್ಲಿ ಮಾರಕವಾದ ಮೆದುಳಿನ ಸೋಂಕು ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್‌ನ ಹೊಸ ಪ್ರಕರಣ ವರದಿಯಾಗಿದ್ದು, ತಿರುವನಂತಪುರಂನಲ್ಲಿ 17 ವರ್ಷದ ಬಾಲಕನಿಗೆ ಸೋಂಕು ದೃಢಪಟ್ಟಿದೆ. ಈ ವರ್ಷ ಇಲ್ಲಿಯವರೆಗೆ ಈ ಸೋಂಕಿನಿಂದ 17 ಜನರು ಮೃತಪಟ್ಟಿದ್ದಾರೆ. ಒಟ್ಟು 67 ಜನರು ಮೆದುಳು ತಿನ್ನುವ ಅಮೀಬಾದಿಂದ
ರಜೆಯಲ್ಲಿ ಊರಿಗೆ ಬಂದಿದ್ದ ಕೋಲಾರದ ಯೋಧ ಹೃದಯಾಘಾತಕ್ಕೆ ಬಲಿ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುನಿ ನಾರಾಯಣ ಹೃದಯಾಘಾತದಿಂದ ಮೃತಪಟ್ಟವರು. ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ
ಬೆನ್ನು ನೋವೆಂದು ಬಾಸ್‌ಗೆ ಮೆಸೇಜ್: ಹತ್ತೇ ನಿಮಿಷದಲ್ಲಿ ಉದ್ಯೋಗಿ ಸಾವು
ಖಾಸಗಿ ಕಂಪನಿಯೊಂದರ ಉದ್ಯೋಗಿ 40 ವರ್ಷದ ಶಂಕರ್ ಎಂಬವರು ಬೆನ್ನು ನೋವು ಎಂದು ಸಿಕ್ ಲೀವ್ ಕೇಳಿ ಬಾಸ್‌ಗೆ ಮೆಸೇಜ್ ಮಾಡಿದ ಹತ್ತೇ ನಿಮಿಷಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಾಸ್ ಕೆ. ವಿ. ಅಯ್ಯರ್ ಎಂಬವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹಂಚಿಕೊಂಡ




