Tuesday, September 29, 2026
Menu

ವಿರಳಾತಿವಿರಳ Hyper-IgE Syndrome: ಸರ್ಕಾರದಿಂದ ಚಿಕಿತ್ಸೆಗೆ ಹಣ ಸಿಗದೆ ಸುಳ್ಯದ ಚಾಂದಿನಿ ಸಾವು

ಅಪರೂಪದಲ್ಲಿ ಅಪರೂಪದ ಕಾಯಿಲೆ (ಹೈಪರ್-IgE ಸಿಂಡ್ರೋಮ್‌)ಯಿಂದ ಬಳಲುತ್ತಿದ್ದ ದಕ್ಷಿಣ ಕನ್ನಡದ ಸುಳ್ಯ ಗಾಂಧಿನಗರ ನಿವಾಸಿ ಚಾಂದಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.  ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಚಾಂದಿನಿಯವರನ್ನು ಕಾಡುತ್ತಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳಷ್ಟು ಸಮಯ ಹಿಡಿದಿತ್ತು. ಕೊನೆಗೆ ಹೈಪರ್-IgE ಸಿಂಡ್ರೋಮ್‌ ಎಂಬುದು ಪತ್ತೆಯಾಗಿ ಅದಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ನೃತ್ಯ

ಬಾಗಲಕೋಟೆ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಬಾಣಂತಿ ಸಾವು

ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಪೂರ್ಣಿಮಾ ರಾಠೋಡ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದು, ಕುಟುಂಬ ಸದಸ್ಯರು ಆಸ್ಪತ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅರೆಬೆಂಚಿ ತಾಂಡದ ನಿವಾಸಿ ಪೂರ್ಣಿಮಾ ಅವರಿಗೆ ಹೆರಿಗೆ ನೋವು ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ

ಉಪ್ಪಿನ ಸೇವನೆಗೆ ಕಡಿವಾಣ: ಆಹಾರ ಸಂಬಂಧಿತ ಅಪಾಯ ತಡೆಗೆ ತಜ್ಞರ ಸಮಿತಿ

ಕರ್ನಾಟಕದಲ್ಲಿ ಆಹಾರ ಸಂಬಂಧಿತ ಅಪಾಯಗಳನ್ನು ತಡೆಗಟ್ಟುವ ಮೂಲಕ ರಕ್ತದೊತ್ತಡದ ಅಪಾಯವನ್ನು ಕಡಿಮೆ ಮಾಡುವ ಮಹತ್ವದ ಹೆಜ್ಜೆಯಾಗಿ, ದೇಶದಲ್ಲಿಯೇ ಮೊದಲ ಬಾರಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉಪ್ಪಿನ ಸೇವನೆ ಕಡಿತಗೊಳಿಸುವ ಕಾರ್ಯಯೋಜನೆಗೆ ಮಾರ್ಗದರ್ಶನ ನೀಡುವ ತಾಂತ್ರಿಕ ಸಲಹಾ ಸಮಿತಿಯನ್ನು

ಕೋಲ್ಡ್ರಿಫ್ ಸಿರಪ್‌ : ಮಕ್ಕಳ ಸಾವಿನ ಸಂಖ್ಯೆ 20 ಕ್ಕೆ ಏರಿಕೆ, ಕಂಪೆನಿ ಮಾಲೀಕ ಅರೆಸ್ಟ್‌

ಕೋಲ್ಡ್ರಿಫ್ ಸಿರಪ್‌ ಸೇವಿಸಿ ಮಧ್ಯಪ್ರದೇಶದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ ಮೃತಪಟ್ಟ ಮಕ್ಕಳ ಸಂಖ್ಯೆ 20 ಕ್ಕೆ ತಲುಪಿದೆ. ಮಧ್ಯಪ್ರದೇಶ ಪೊಲೀಸರು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸುತ್ತಿದ್ದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶ ಮತ್ತು ತಮಿಳುನಾಡು

ಕೆಮ್ಮು ಸಿರಪ್‌: ಮಧ್ಯಪ್ರದೇಶದಲ್ಲಿ ಮತ್ತೆ ಆರು ಮಕ್ಕಳ ಸಾವು

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಆರು ಮಕ್ಕಳು ಮತ್ತೆ ಮೃತಪಟ್ಟಿದ್ದು, ಈ ರಾಜ್ಯದಲ್ಲಿ ಕೆಮ್ಮು ಸಿರಪ್‌ ಸೇವನೆಯಿಂದ ಮೃತಪಟ್ಟ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಛಿಂದ್ವಾರದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್

ಬಡವರಿಗಾಗಿ ಪ್ರತಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ

ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ

ಕೆಮ್ಮು ಸಿರಪ್‌ ಸೇವಿಸಿದ ಎಂಟು ಮಕ್ಕಳ ಸಾವು

ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ಒಟ್ಟು ಎಂಟು ಮಕ್ಕಳು ಮೃತಪಟ್ಟಿದ್ದಾರೆ. ಔಷಧವು ವಿಷಯುಕ್ತವಾಗಿರಬಹುದು ಎಂಬ ಅನುಮಾನ ಪೋಷಕರು ಮತ್ತು ಸಾರ್ವಜನಿಕರಲ್ಲಿ ವ್ಯಕ್ತವಾಗಿದೆ.  ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ಸಿರಪ್ ಸೇವಿಸಿದ ಒಬ್ಬ ಹಿರಿಯ ವೈದ್ಯರೂ ಪ್ರಜ್ಞಾಹೀನ

ಮಾಲೂರಿನಲ್ಲಿ ಬಾಲಕಿಯ ಜೀವ ತೆಗೆದ ನಕಲಿ ವೈದ್ಯನ ಚಿಕಿತ್ಸೆ

ಕೋಲಾರದ ಮಾಲೂರಿನ ದೊಡ್ಡಿಗ್ಗಲೂರು ಗ್ರಾಮದಲ್ಲಿ ಎಂಟು ವರ್ಷದ ಬಾಲಕಿ ಈ ನಕಲಿ ವೈದ್ಯರ ಚಿಕಿತ್ಸೆಗೆ ಪ್ರಾಣ ಕಳೆದುಕೊಂಡಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್​ನಿಂದಲೇ ಮಗು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಚಿಕಿತ್ಸೆ

ತುಮಕೂರಿನಲ್ಲಿ ಮಗಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ ತಾಯಿ

ತುಮಕೂರಿನ ಮೆಗ್ಗಾನ್ ಆಸ್ಪತ್ರೆ ಕ್ವಾರ್ಟಸ್‌ನಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ತನ್ನ ಹನ್ನೊಂದು ವರ್ಷದ ಮಗಳನ್ನು ಕೊಲೆ ಮಾಡಿದ ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 11 ವರ್ಷದ ಪೂರ್ವಿಕ ಕೊಲೆಯಾಗಿರುವ ಮಗು, 38 ವರ್ಷದ ಶೃತಿ ಮಗಳ ಕೊಲೆಗೈದು ಆತ್ಮಹತ್ಯೆ

ಚಿಂತಾಮಣಿಯಲ್ಲಿ ಜಾತಿ ಗಣತಿ ನಡೆಸುತ್ತಿದ್ದಾಗಲೇ ಶಿಕ್ಷಕನ ಸಾವು

ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ. ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ.