ಆರೋಗ್ಯ
Heart attack death: ಬೆಂಗಳೂರಿನಲ್ಲಿ ಡ್ಯಾನ್ಸ್ ಮಾಡುತ್ತಲೇ ಹೃದಯಾಘಾತದಿಂದ ವ್ಯಕ್ತಿ
ಬೆಂಗಳೂರಿನಲ್ಲಿ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಲೇ ರಾಯಚೂರು ಮೂಲದ ಸೇಲ್ಸ್ ಎಕ್ಸಿಕ್ಯೂಟಿವ್ ಕುಸಿದು ಮೃತಪಟ್ಟಿದ್ದಾರೆ. ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದ ಬಸವರಾಜ್ (46) ಮೃತರು. ಖಾಸಗಿ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿದ್ದ ಬಸವರಾಜ್ ಕಂಪನಿಯ ಸ್ನೇಹಿತರೊಂದಿಗೆ ರೆಸಾರ್ಟ್ಗೆ ಹೋಗಿದ್ದಾಗ ಹೃದಯಾಘಾತದಿಂದ ಸಂಭವಿಸಿ ಅಸು ನೀಗಿದ್ದಾರೆ. ಶನಿವಾರ ರಾತ್ರಿ ರೆಸಾರ್ಟ್ನಲ್ಲಿ ಖುಷಿಯಿಂದ ಕಾಲ ಕಳೆಯುತ್ತಿದ್ದ ವೇಳೆ ಬಸವರಾಜ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೃದಯಾಘಾತದಿಂದ ಬಸವರಾಜ್
ಏಡ್ಸ್ ರೋಗಿಗಳಿಗೆ ಅಮೆರಿಕ ನೆರವು ಸ್ಥಗಿತ: 40 ಲಕ್ಷಕ್ಕೂ ಅಧಿಕ ಜಾಗತಿಕ ಸಾವಿನ ಭೀತಿ
ಅಮೆರಿಕದ ತುರ್ತು ಏಡ್ಸ್ ಪರಿಹಾರ ಯೋಜನೆಯಡಿ ನೀಡುತ್ತಿದ್ದ ಹಣವನ್ನು ಏಕಾಏಕಿ ನಿಲ್ಲಿಸಿರುವ ಕಾರಣ ಏಡ್ಸ್ ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯಲ್ಲಿ ದೊಡ್ಡ ವ್ಯತ್ಯಯ ಉಂಟಾಗಿದ್ದು. ಲಕ್ಷಾಂತರ ಜನ ಇದರಿಂದ ಸಾಯುವ ಭೀತಿ ಎದುರಾಗಿದೆ. ವಿಶ್ವಸಂಸ್ಥೆಯ ಯುಎನ್ ಏಡ್ಸ್ ನ 2025ರ ಗ್ಲೋಬಲ್ ಏಡ್ಸ್ ವರದಿಯ
Heart attack death: ಬೆಳಗಾವಿಯಲ್ಲಿ ಯೋಧ ಹೃದಯಾಘಾತಕ್ಕೆ ಬಲಿ
ಬೆಳಗಾವಿ ನಗರದ ಅನಗೋಳದಲ್ಲಿ ಬಜಾರ್ನಲ್ಲಿ ಏಕಾಏಕಿ ಎದೆನೋವಿನಿಂದ ಕುಸಿದು ಬಿದ್ದು ಯೋಧ ಮೃತಪಟ್ಟಿದ್ದಾರೆ. ಯೋಧ ಏಕಾಏಕಿ ಕುಸಿದು ಬಿದ್ದು ಅಸು ನೀಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಜೆಯಲ್ಲಿ ಊರಿಗೆ ಬಂದಿದ್ದ ಇಬ್ರಾಹಿಂ ದೇವಲಾಪುರ (37) ಮೃತಪಟ್ಟ ಯೋಧ. ಕುಸಿದು ಬಿದ್ದ ತಕ್ಷಣ
ಹೃದಯಾಘಾತ ಬಗ್ಗೆ ಆತಂಕ ಪಡಬೇಕಾದ ಅಗತ್ಯವಿಲ್ಲ: ಡಾ. ಶರಣಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್
Heart Attack deaths- ದಾವಣಗೆರೆ ಯುವಕ, ಧಾರವಾಡ ಯುವತಿ ಹೃದಯಾಘಾತದಿಂದ ಸಾವು
ದಾವಣಗೆರೆಯಲ್ಲಿ ಕಾಲೇಜು ವಿದ್ಯಾರ್ಥಿ ಹಾಗೂ ಧಾರವಾಡದಲ್ಲಿ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದಾವಣಗೆರೆಯ ಜಯನಗರದಲ್ಲಿ ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಹೃದಯಘಾತಕ್ಕೆ ಬಲಿಯಾದವರು, ಅಕ್ಷಯ್ ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ
Karnataka High Court- ಜನೌಷಧ ಕೇಂದ್ರ ಸ್ಥಗಿತ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳ ಸ್ಥಗಿತಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್ಗೆ
ಆರೋಗ್ಯ ಮತ್ತು ರುಚಿಗಾಗಿ ಅಡುಗೆಯಲ್ಲಿ ದೊಡ್ಡಪತ್ರೆ ಬಳಕೆ
ಸುಲಭವಾಗಿ ಬೆಳೆಸಬಹುದಾದ ದೊಡ್ಡಪತ್ರೆ ಮಳೆಗಾಲದಲ್ಲಿ ಶೀತ ಹಾಗೂ ಕೆಮ್ಮು ನಿಯಂತ್ರಣಕ್ಕೆ ಔಷಧಿಯಾದರೆ, ಬೇಸಿಗೆಯಲ್ಲಿ ತಂಪಾಗಿಸುವ ಗುಣ ಹೊಂದಿದೆ. ಹೀಗಾಗಿ ಇದನ್ನು ನಾನಾ ರೀತಿ ಅಡುಗೆಗಳಲ್ಲಿ ಬಳಸುವ ಮೂಲಕ ಆರೋಗ್ಯ ವರ್ಧಿಸಿಕೊಳ್ಳಬಹುದು. ದೊಡ್ಡಪತ್ರೆ ಎಲೆಗಳು ಹಸಿವು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುವುದು. ಚರ್ಮದ ಸಮಸ್ಯೆ
Heart attack death-ಮಂಗಳೂರಿನಲ್ಲಿ ಹೃದಯಾಘಾತಕ್ಕೆ ವಿದ್ಯಾರ್ಥಿ ಬಲಿ
ಮಂಗಳೂರಿನ ಸುರತ್ಕಲ್ ಬಳಿ ಹೃದಯಾಘಾತದಿಂದ ಡಿಪ್ಲೋಮಾ ವಿದ್ಯಾರ್ಥಿ ಅಫ್ತಾಬ್ (18)ಮೃತಪಟ್ಟಿದ್ದಾರೆ. ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿದ್ದು, ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಫ್ತಾಬ್ ಸುರತ್ಕಲ್ ಸೆಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೋಮಾ ಓದುತ್ತಿದ್ದರು.
ಹೃದಯಾಘಾತದಿಂದ ಸಾವು: ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲಿದೆ ಸರ್ಕಾರ
ರಾಜ್ಯದಲ್ಲಿ ಹೃದಯಾಘಾತ ಹಾಗೂ ಹಠಾತ್ ಸಾವು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲು ಯೋಜಿಸಿದೆ. ಆಸ್ಪತ್ರೆಗಳಿಗೆ ಮತ್ತು ಸಾರ್ವಜನಿಕರಿಗೆ ಹಲವು ಸೂಚನೆಗಳನ್ನು ನೀಡಲಿದೆ. ಹೃದಯಾಘಾತಕ್ಕೆ ಕೊರೋನ ಲಸಿಕೆ ಕಾರಣವೇ ಎಂಬ ಅನುಮಾನ ಇದ್ದು, ಮರಣೋತ್ತರ ಪರೀಕ್ಷೆ
Heart Attack deaths: ಹಾಸನದಲ್ಲಿ ರೈತ ಹೃದಯಾಘಾತಕ್ಕೆ ಬಲಿ
ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರಿದಿದೆ. ಹಾಸನದಲ್ಲಿ ಹೃದಯಾಘಾತಕ್ಕೆ ಒಬ್ಬರು ಬಲಿಯಾಗಿದ್ದು, ಈ ಮೂಲಕ ಒಂದುವರೆ ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ, ಮೆಣಸಮಕ್ಕಿ ಗ್ರಾಮದಲ್ಲಿ ರೈತರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಲಕ್ಷ್ಮಣ (52)