ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಚಣವೇ ಬಂಧಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಆದೇಶ ನೀಡಿದ್ದಾರೆ. ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ ಸಾಮಾಜಿಕ ಜಾಲತಾಣದಲ್ಲಿ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಹಿನ್ನೆಲೆ ಅವರನ್ನು ಬಂಧಿಸುವಂತೆ ಪರಮೇಶ್ವರ್ ಮಂಗಳೂರು ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, ಮಾಜಿ ಮುಖ್ಯಮಂತ್ರಿಯೊಬ್ಬರು 28 ಕೊಲೆಗಳನ್ನು ಮಾಡಿ ದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪ ಮುಂದಿಟ್ಟು ಪ್ರತಿಪಕ್ಷ ನಾಯಕ ಆರ್. ಅಶೋಕ್, ಶಾಸಕ ಸುನೀಲ್ ಕುಮಾರ್ ಸೇರಿದಂತೆ ಹಲವರು ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದಾರೆ.
ವಿಧಾನಸಭೆಯ ಚರ್ಚೆಯ ನಂತರ ಸಚಿವ ಪರಮೇಶ್ವರ್ ತಕ್ಷಣವೇ ಕ್ರಮಕ್ಕೆ ಸೂಚನೆ ನೀಡಿ ಮಂಗಳೂರು ಪೊಲೀಸ್ ಕಮಿಷನರ್‌ಗೆ ಆದೇಶಿಸಿದ್ದಾರೆ. ಮಹೇಶ್ ತಿಮರೋಡಿಯನ್ನು ಬಂಧಿಸಿ, ಕಾನೂನು ರೀತಿ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ತಿಮರೋಡಿ ವಿರುದ್ಧ ಹತ್ತಾರು ಕೇಸ್‌ಗಳಿವೆ. ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಸದನದಲ್ಲಿ ತಿಳಿಸಿದರು.