ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನ್ಯಾಪ್ ಪ್ರಕರಣ ದಾಖಲಾದ ಬಳಿಕ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಜನರನ್ನು ಬಂಧಿಸಿದ್ದರು.
ಬಂಧಿತರನ್ನು ವಿಚಾರಣೆಗೆ ಒಳಪಡಿಸಿದಾಗ ಈ ಅಒಹರಣ ಪ್ರಕರಣದ ಪ್ರಮುಖ ರೂವಾರಿ ಮಂಜುಳಾ ಎಂಬ ವಿಚಾರ ಬಹಿರಂಗಗೊಂಡಿದೆ. ಮಂಜುಳಾ ಅವರ ಮಗ ಈಶ್ವರ ರಾಮಗನಟ್ಟಿ ಪೊಲೀಸ್ ವಿಚಾರಣೆ ವೇಳೆ ಈ ಸತ್ಯವನ್ನು ಬಾಯ್ಬಿಟ್ಟಿದ್ದಾನೆ.
ಮಗ ಮತ್ತು ಸ್ನೇಹಿತರು ಮಂಜುಳಾ ಮಡಿದ ಪ್ಲ್ಯಾನ್‌ನಂತೆ ಉದ್ಯಮಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ತನಿಖೆ ನಡೆಸಿದ ಪೊಲೀಸರು ತಾಂತ್ರಿಕ ಸಾಕ್ಷಿ, ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ 7 ಆರೋಪಿಗಳನ್ನು ಬಂಧಿಸಲಾಗಿದೆ.