ನಾವಾಬಿಟ್ ನಕಲಿ ಆ್ಯಪ್ ಮೂಲಕ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ 13,000 ಅಮಾಯಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಸೈಬರ್ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ.
10,000 ರೂ. ಹೂಡಿಕೆಗೆ ಪ್ರತಿದಿನ 400 ರೂ. ಲಾಭದ ಆಮಿಷ ಒಡ್ಡಿ ಸ್ಥಳೀಯ ಶಾಲಾ ಮುಖ್ಯ ಶಿಕ್ಷಕಿಯನ್ನು ಬಡ ಜನರನ್ನು ಲೂಟಿ ಮಾಡುತ್ತಿದ್ದ ಜಾಲದ ಪ್ರಮುಖ ತಮಿಳುನಾಡಿನ ಮಧುರೈ ನಿವಾಸಿ ಚೆಲ್ಲಪಂಡಿ ಸುಬ್ರಹ್ಮಣಿ ಬಂಧಿತ.
ಕಡಿಮೆ ಹಣ ಹೂಡಿಕೆ ಮಾಡಿ ಶ್ರೀಮಂತರಾಗಿ ಎಂಬ ಸೈಬರ್ ವಂಚಕರ ಆಮಿಷಕ್ಕೆ ದಾವಣಗೆರೆಯ 13 ಸಾವಿರ ಜನ ಮೋಸಹೋಗಿದ್ದಾರೆ.ಕ್ರಿಹರಿಯಾಣ, ಮಹಾರಾಷ್ಟ್ರ ಸೇರಿದಂತೆ ದೇಶದ ಹಲವೆಡೆ ತಲೆಮರೆಸಿಕೊಂಡಿರುವ ಪ್ರಕರಣದ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಕನಿಷ್ಠ 10,000 ರೂಪಾಯಿ ಹೂಡಿಕೆ ಮಾಡಿದರೆ ಅದನ್ನು ಕ್ರಿಪ್ಟೋ ಕರೆನ್ಸಿಯಾಗಿ ಪರಿವರ್ತಿಸಿ ದಿನಕ್ಕೆ 300 ರಿಂದ 400 ರೂಪಾಯಿ ಲಾಭಾಂಶ ನೀಡುವುದಾಗಿ ನಂಬಿಸಿ ಆರಂಭದಲ್ಲಿ ಜನರ ಬ್ಯಾಂಕ್ ಖಾತೆಗಳಿಗೆ ನಿಯಮಿತವಾಗಿ ಹಣ ಮಾಡಿ ವಂಚಕರು ನಂಬಿಕೆ ಗಳಿಸುತ್ತಿದ್ದರು.
ಸ್ಥಳೀಯ ಶಾಲೆಯ ಮುಖ್ಯೋಪಾಧ್ಯಾಯಿನಿ ಇದರಲ್ಲಿ ಭಾಗಿಯಾಗಿ ಜನರನ್ನು ಸೆಳೆಯುತ್ತಿದ್ದರು. ವಂಚನೆಗೆ ಒಳಗಾದ ಸಾದಿಕ್ ಎಂಬವರು ಮಾತನಾಡಿ, ಮುಖ್ಯೋಪಾಧ್ಯಾಯಿನಿ ಒತ್ತಡ ಹೇರಿ ನನ್ನಿಂದ ಮೊದಲು 10,000 ರೂ. ಹೂಡಿಕೆ ಮಾಡಿಸಿದ್ದರು. ಒಂದು ತಿಂಗಳು ದಿನಾಲೂ 300 ರೂ. ಬಂತು. ಆಮೇಲೆ ದೊಡ್ಡ ಆಫರ್ ಇದೆ ಎಂದು ನಂಬಿಸಿ 50 ಸಾವಿರದಿಂದ 5 ಲಕ್ಷದವರೆಗೆ ಹೂಡಿಕೆ ಮಾಡಿಸಿಕೊಂಡರು. ರಂಜಾನ್ ಹಬ್ಬದ ವೇಳೆ ಹಣ ಡ್ರಾ ಮಾಡಲು ಹೋದಾಗ ಖಾತೆ ಬ್ಲಾಕ್ ಆಗಿತ್ತು ಎಂದು ಅಳಲು ತೋಡಿಕೊಂಡಿದ್ದಾರೆ. ವಂಚಕರು ಪ್ರಮುಖವಾಗಿ ಬಡ ಮಹಿಳೆಯರು, ದಿನಗೂಲಿ ನೌಕರರು ಮತ್ತು ಸಣ್ಣಪುಟ್ಟ ವ್ಯಾಪಾರಿಗಳನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದರು.


