ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ.
ಪೊಲೀಸ್ ಸಿಬ್ಬಂದಿಯೊಬ್ಬರ ಬೀಳ್ಕೊಡುಗೆ ಸಮಾರಂಭದಲ್ಲಿ ವಿಶ್ವನಾಥ್ ವೇದಿಕೆಯ ಮೇಲೆ ನಿಂತು ಹಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಸಹೋದ್ಯೋಗಿಗಳು, ಕುಟುಂಬಸ್ಥರು ಮತ್ತು ಸ್ನೇಹಿತರು ಸೇರಿದ್ದರು. ಹಾಡುವಾಗಲೇ ವಿಶ್ವನಾಥ್ ವೇದಿಕೆಯ ಮೇಲೆಯೇ ಕುಸಿದು ಬಿದ್ದರು, ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೃದಯಾಘಾತವೇ ಸಾವಿಗೆ ಕಾರಣ ಎಂದು ವೈದ್ಯರು ತಿಳಿಸಿದ್ದಾರೆ.
ಅವರು ಉಡುಪಿ ಜಿಲ್ಲಾ ಪೊಲೀಸ್ ಘಟಕದಲ್ಲಿ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಶ್ವನಾಥ್ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಉಡುಪಿ ಎಸ್‌ಪಿ ಹಾಗೂ ಇತರ ಅಧಿಕಾರಿಗಳು ವಿಶ್ವನಾಥ್ ಅವರ ಕುಟುಂಬಕ್ಕೆ ಸಂತಾಪ ಸಂದೇಶ ಕಳುಹಿಸಿದ್ದಾರೆ.


