Menu

ರಾಜ್ಯದಲ್ಲಿ ಡ್ರಗ್ಸ್‌ ದಂಧೆ ನಿಗ್ರಹಕ್ಕೆ ಕಾಂಗ್ರೆಸ್‌ ಸರ್ಕಾರ ವಿಫಲ: ಆರ್‌ ಅಶೋಕ ಕಿಡಿ

R Ashoka

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ನಮ್ಮ ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಿದ ಸಂದರ್ಭದಲ್ಲಿ “ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ” ಎಂದು ಇದರ ಗಂಭೀರತೆ ಅರಿಯದೆ ಗೃಹ ಸಚಿವ @DrParameshwara  ಉಡಾಫೆ ಉತ್ತರ ಕೊಟ್ಟಿದ್ದರು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕಾ ಘಟಕ ಪತ್ತೆ ಹಚ್ಚಿ, ಸುಮಾರು 390 ಕೋಟಿ ರು. ಮೌಲ್ಯದ 192 ಕೆ.ಜಿ. ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು ಇದೀಗ ಬೆಂಗಳೂರಿನ 3 ಡ್ರಗ್ಸ್‌ ಫ್ಯಾಕ್ಟರಿ ಮೇಲೆ ನಡೆಸಿ 56 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಶೌರ್ಯ, ಸಾಹಸ, ದಕ್ಷತೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ಪೊಲೀಸ್ ಇಲಾಖೆ ಕಾಂಗ್ರೆಸ್ ಸರ್ಕಾರದ ಅಸಮರ್ಥತೆಯಿಂದ ನಿತ್ರಾಣವಾಗಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಡ್ರಗ್ಸ್ ದಂಧೆ ಪತ್ತೆ ಹಚ್ಚಲು, ಡ್ರಗ್ಸ್ ದಂಧೆಕೋರರನ್ನು ಹಾಕಲು ಮಹಾರಾಷ್ಟ ಪೊಲೀಸರು ಬರಬೇಕಾದರೆ ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯದ ಗುಪ್ತಚರ ಇಲಾಖೆ ಏನು ಮಾಡುತ್ತಿದೆ ಎಂದು ಅಶೋಕ ಪ್ರಶ್ನಿಸಿದ್ದಾರೆ.

ಯುವ ಜನಾಂಗದ ಭವಿಷ್ಯಕ್ಕೆ ಮಾರವಾಗಿರುವ ಈ ಡ್ರಗ್ಸ್ ದಂಧೆಯನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಇದಕ್ಕೆ ಕಡಿವಾಣ ಹಾಕಲು ಕೂಡಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು @INCKarnataka ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *