Saturday, February 14, 2026
Menu

ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಚಿನ್ನ ಎಗರಿಸುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್‌ ಅರೆಸ್ಟ್‌

ಆನ್ಲೈನ್ ಜೂಜಾಟಕ್ಕೆ ವ್ಯಸನಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನೇ ಎಗರಿಸಿರುವ ಪ್ರಕರಣ ಬಹಿರಂಗಗೊಂಡಿದೆ.

ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಘಟನೆ ನಡೆದಿದ್ದು, ಆರೋಪಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕಿರಣ್ ಕಳೆದ ಹಲವು ತಿಂಗಳುಗಳಿಂದ ಸಾರ್ವಜನಿಕರು ತುರ್ತು ಹಣಕಾಸು ಅಗತ್ಯಗಳಿಗಾಗಿ ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನಾಭರಣಗಳನ್ನು ತೆ ಲಾಕರ್‌ನಿಂದ ತೆಗೆದು ವಂಚಿಸಿದ್ದಾನೆ. ಅಧಿಕಾರ ಸ್ಥಾನ ದುರುಪಯೋಗಪಡಿಸಿಕೊಂಡು ದಾಖಲೆಗಳಲ್ಲಿ ಯಾವುದೇ ವ್ಯತ್ಯಾಸ ಮೇಲ್ನೋಟಕ್ಕೆ ಕಾಣದಂತೆ ಮಾಡಿದ್ದಾನೆ. ಒಟ್ಟು 4,12,65,000 ರೂಪಾಯಿ ಮೌಲ್ಯದ ಚಿನ್ನವನ್ನು ಕಿರಣ್ ಕಳವು ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಆರೋಪಿ ಕಿರಣ್‌ಗೆ ಆನ್ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ದಂಧೆ ಚಟವಿವಿದೆ. ಇದಕ್ಕೆಂದು ಹಣ ಹೊಂದಿಸಲು ಬ್ಯಾಂಕ್‌ನ ಚಿನ್ನವನ್ನೇ ಎಗರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಲಾಕರ್‌ನಲ್ಲಿರುವ ಚಿನ್ನಾಭರಣಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವಾಗ ಚಿನ್ನ ನಾಪತ್ತೆಯಾಗಿರುವ ಅನುಮಾನ ಉಂಟಾಗಿದೆ. ಕೂಡಲೇ ಆಂತರಿಕ ತನಿಖೆ ನಡೆಸಿದಾಗ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಮೇಲೆ ಶಂಕೆ ವ್ಯಕ್ತವಾಗಿ ಪೊಲೀಸ್ ವಿಚಾರಣೆ ನಡೆಸಿದಾಗ ಕಿರಣ್ ತಪ್ಪನ್ನು ಒಪ್ಪಿಕೊಂಡಿದ್ದಾನೆ.

Related Posts

Leave a Reply

Your email address will not be published. Required fields are marked *