ಇನ್ನು ಮುಂದೆ ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ಆಗಿದ್ದು, ಇಂದಿನಿಂದ ಆದೇಶ ಜಾರಿಯಾಗಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.