Menu

ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ಯತ್ನ: ಹೆಡ್ ಕಾನ್‌ಸ್ಟೇಬಲ್‌ ಅಮಾನತು

ಹೋಟೆಲ್‌ನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮದ್ಯ ಮಾರಾಟಕ್ಕೆ ಆಕ್ಷೇಪಿಸಿದ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿ ಬೆದರಿಸಿದ ಆರೋಪದಡಿ ಹೆಡ್ ಕಾನ್‌ಸ್ಟೇಬಲ್‌ವೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಚಾಮರಾಜಪೇಟೆ ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೇಬಲ್‌ ಮಧುಸೂದನ್‌ ಅಮಾನತುಗೊಂಡವರು. ಭಾನುವಾರ ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ಕೆ.ಪಿ. ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಜತೆ ಮಧುಸೂದನ್‌ ಉದ್ಧಟತನದಿಂದ ವರ್ತಿಸಿರುವುದಾಗಿ ಕೆ.ಪಿ. ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪಶ್ಚಿಮ ವಿಭಾಗದ ಡಿಸಿಪಿ ಎಸ್‌. ಗಿರೀಶ್, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಧುಸೂದನ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಗಡಿ ರಸ್ತೆಯ ಟೋಲ್‌ ಗೇಟ್ ಬಳಿ ಮಧುಸೂದನ್ ಅವರ ಸಂಬಂಧಿ ಹೋಟೆಲ್‌ ನಡೆಸುತ್ತಿದ್ದು, ಊಟದ ಜತೆ ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಪಾದಚಾರಿ ಮಾರ್ಗವನ್ನು ಕೂಡ ಅತಿಕ್ರಮಿಸಿಕೊಂಡಿದ್ದರಿಂದ ಸಾರ್ವಜನಿಕರು ಓಡಾಟಕ್ಕೆ ಅಡ್ಡಿಯಾಗಿತ್ತು. ಹೋಟೆಲ್ ಬಳಿ ಪರಿಶೀಲನೆಗೆ ತೆರಳಿದ ಪಿಐ ಗೋವಿಂದರಾಜು ಅವರಿಗೆ, ನನಗೂ ಗೊತ್ತಿದೆ ಕಣ್ರೀ ಕಾನೂನು ಎಂದು ಮಾತನಾಡಿ ಮಧುಸೂದನ್ ಉದ್ಧಟತನ ತೋರಿಸಿದ್ದರು ಎನ್ನಲಾಗಿದೆ.

Related Posts

Leave a Reply

Your email address will not be published. Required fields are marked *