ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ ಸೋಲುಂಡ ಬೆನ್ನಲ್ಲೇ ಸ್ಟೀವನ್ ಸ್ಮಿತ್ ಏಕದಿನ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಸ್ಮಿತ್ ಟಿ-20 ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ 4 ವಿಕೆಟ್ ಗಳಿಂದ ಸೋಲುಂಡಿತ್ತು. ಸ್ಮಿತ್ 96 ಎಸೆತಗಳಲ್ಲಿ 73 ರನ್ ಗಳಿಸಿ ಮಿಂಚಿದ್ದರು. ಭಾರತ ವಿರುದ್ಧ ಸೋತ ಆಸ್ಟ್ರೇಲಿಯಾ ಪ್ರಶಸ್ತಿ ಹಾದಿಯಿಂದ ಹೊರಬಿದ್ದಿತ್ತು.
ಸ್ಮಿತ್ 170 ಏಕದಿನ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು, 12 ಶತಕ, 35 ಅರ್ಧಶತಕ ಸೇರಿದಂತೆ 43.28ರ ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. ಅಲ್ಲದೇ ಬೌಲಿಂಗ್ ನಲ್ಲಿ ೨೮ ವಿಕೆಟ್ ಪಡೆದಿದ್ದಾರೆ. 2015 ಮತ್ತು 2023ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು.