ಏಕದಿನ ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ್ತಿಯರಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದಿದೆ.
ಇಂಧೋಈರ್ ಖಜ್ರಾನಾದಲ್ಲಿ ಗುರುವಾರ ಬೆಳಿಗ್ಗೆ ಕೆಫೆಗೆ ಹೋಗುವಾಗ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ್ದ ಆರೋಪಿ ಅನುಚಿತವಾಗಿ ವರ್ತಿಸಿದ್ದ.
ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಮ್ಯಾನೇಜರ್ ಡ್ಯಾನಿ ಸಿಮೊನ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ.
ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಬೈಕ್ ನಲ್ಲಿ ಆಸ್ಟ್ರೇಲಿಯಾ ಆಟಗಾರ್ತಿಯನ್ನು ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ಚಿಸಿದ ಅಕೀಲ್ ಖಾನ್ ಎಂಬ ಬಯಕ್ ಸವಾರನನ್ನು ವಶಕ್ಕೆ ಪಡೆದಿದ್ದಾರೆ.
ಖಜ್ರಾನಾ ರಸ್ತೆಯಲ್ಲಿರುವ ಕೆಫೆಗೆ ಆಸ್ಟ್ರೇಲಿಯಾ ಆಟಗಾರ್ತಿಯರು ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಗಮನಿಸಿ ಅಕೀಲ್ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದು, ಒಬ್ಬ ಆಟಗಾರ್ತಿಯನ್ನು ಮುಟ್ಟಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕಿಲ್ ಖಾನ್ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ಇವೆ. ಈ ಹಿನ್ನೆಲೆಯಲ್ಲಿ ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


