ಒಂದೇ ಕಡೆ 5 ಹುಲಿಗಳು ಪತ್ತೆ ಬೆನ್ನಲ್ಲೇ ಕಾರ್ಯಾಚರಣೆಗೆ ಬಂದ ಆನೆಗಳಿಗೆ ಗ್ರಾಮಸ್ಥರಿಂದ ಭರ್ಜರಿ ಸ್ವಾಗತ!
ಚಾಮರಾಜನಗರ ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳು ಒಂದೇ ಕಡೆ ಇರುವುದು ಪತ್ತೆಯಾಗಿ ಆತಂಕ ಮೂಡಿಸಿದ ಬೆನ್ನಲ್ಲೇ ಹುಲಿಗಳ ಸೆರೆಗೆ ಬಂದ ಎರಡು ಆನೆಗಳಿಗೆ ಗ್ರಾಮಸ್ಥರು ಭರ್ಜರಿ ಸ್ವಾಗತ ಕೋರಿದ್ದಾರೆ. ಹುಲಿಗಳ ಸೆರೆಗೆ ಕಾರ್ಯಾಚರಣೆ ನಡೆಸಲು ಆಗಮಿಸಿದ ಈಶ್ವರ ಹಾಗೂ ಲಕ್ಷ್ಮಣ ಆನೆಗಳನ್ನು ಕರೆ ತರಲಾಗಿದ್ದು, ಗ್ರಾಮಸ್ಥರು ಆನೆಗಳಿಗೆ ಪೂಜೆ ಮಾಡಿ ಭರ್ಜರಿ ಸ್ವಾಗತ ನೀಡಿದರು. ಸಂಜೆ ಬಳಿಕ ಮತ್ತೊಂದು ಹಂತದ ಕೂಂಬಿಂಗ್ ನಡೆಯುವ ಸಾಧ್ಯತೆ ಇದೆ.
2027ರ ವೇಳೆಗೆ ಬೆಂಗಳೂರಿನ ಮೆಟ್ರೋ ಜಾಲ 175 ಕಿ.ಮೀ.ಗೆ ವಿಸ್ತರಣೆ: ಡಿಸಿಎಂ ಶಿವಕುಮಾರ್
ಬೆಂಗಳೂರು: 2027ರ ಡಿಸೆಂಬರ್ ವೇಳೆಗೆ ಬೆಂಗಳೂರು 175 ಕಿ.ಮೀ ಮೆಟ್ರೋ ಜಾಲ ಹೊಂದಲಿದೆ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು. ಮೆಟ್ರೋ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಟಿ ನಗರವು
ಬಿಜೆಪಿ ಶಾಸಕ ಬೈರತಿ ಬಸವರಾಜು ವಿರುದ್ಧ ಲುಕೌಟ್ ನೋಟಿಸ್ ಜಾರಿ
ಬೆಂಗಳೂರು: ರೌಡ ಬಿಕ್ಕು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್ಔಟ್ ನೋಟಿಸ್ ಹೊರಡಿಸಲು ಮುಂದಾಗಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾಕ್ಕೆ
ಡೆವಿಲ್ ಚಿತ್ರದ 10,500 ಪೈರಸಿ ಲಿಂಕ್ ಡಿಲಿಟ್: ಗಳಿಕೆಯಲ್ಲಿ ದಿಢೀರ್ ಏರಿಕೆ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರದ 10,500ಕ್ಕೂ ಅಧಿಕ ಪೈರಸಿ ಲಿಂಕ್ ಡಿಲಿಟ್ ಮಾಡಿದ ಬೆನ್ನಲ್ಲೇ ಚಿತ್ರದ ಗಳಿಕೆಯಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ. ಕೆಲವು ದಿನಗಳ ಹಿಂದೆಯಷ್ಟೇ ಕಿಚ್ಚ ಸುದೀಪ್ ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರಮೋಷನ್ ವೇಳೆ ಯುದ್ಧಕ್ಕೆ
ಪ್ರಿಯಕರ ಅಪ್ಪನ ಕೊಲೆ ಮಾಡುತ್ತಿದ್ದರೆ ನೋಡುತ್ತಿದ್ದ 17 ವರ್ಷದ ಮಗಳು!
ಪ್ರೀತಿಗೆ ಒಪ್ಪದ ತಂದೆಗೆ ಡ್ರಗ್ಸ್ ನೀಡಿ ಮೈಮೇಲೆ ಎಚ್ಚರ ಇಲ್ಲದಂತೆ ಮಾಡಿದ ಮಗಳು ಪ್ರಿಯಕರ ಕೊಲೆ ಮಾಡಲು ಹೇಳಿ ನೋಡುತ್ತಾ ನಿಂತ ಅಮಾನವೀಯ ಘಟನೆ ಗುಜರಾತ್ ನಲ್ಲಿ ನಡೆದಿದೆ. ಗುಜರಾತ್ನ ವಡೋದರಾದ ಪದ್ರಾ ಗ್ರಾಮದಲ್ಲಿ 17ರ ಹುಡುಗಿ ಗೆಳೆಯನ ಜೊತೆ ಸೇರಿ
ದಿನದಲ್ಲಿ ಎರಡು ಗಂಟೆ ಡಿಜಿಟಲ್ ಆಫ್: ಗಮನ ಸೆಳೆದ ಹಲಗಾ ಗ್ರಾಮ
ಮಕ್ಕಳು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ಬೆಳಗಾವಿ ತಾಲೂಕಿನ ಹಲಗಾ ಗ್ರಾಮಸ್ಥರು ಒಂದು ಕ್ರಾಂತಿಕಾರಿ ಮತ್ತು ಮಾದರಿ ಪ್ರಯೋಗಕ್ಕೆ ಮುಂದಾಗಿದ್ದಾರೆ. ಅದೇ ‘ಡಿಜಿಟಲ್ ಆಫ್’ ಪ್ರಯೋಗ. ಎಲ್ಲರೂ ಮೊಬೈಲ್ ಮತ್ತು ಟಿವಿ ಸೇರಿದಂತೆ ಡಿಜಿಟಲ್ ವ್ಯಸನಕ್ಕೆ ಒಳಗಾಗಿದ್ದು, ಮಕ್ಕಳ ಓದಿನ ಮೇಲೆ ಮತ್ತು
ಚಾಮರಾಜನಗರದಲ್ಲಿ ಒಂದೇ ಕಡೆ 5 ಹುಲಿಗಳು ಪತ್ತೆ: ನಿಷೇಧಾಜ್ಞೆ ಜಾರಿ
ಚಾಮರಾಜನಗರದ ನಂಜೇದೇವನಪುರ ಗ್ರಾಮದ ಬಳಿ 5 ಹುಲಿಗಳು ಕಾಣಿಸಿಕೊಂಡಿರುವ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮದ ಜಮೀನು ಗಳಲ್ಲಿ ಹುಲಿಗಳು ಓಡಾಡುತ್ತಿರುವುದು ಡ್ರೋನ್ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಸ್ಥಳೀಯರಲ್ಲಿ ಭೀತಿ ಆವರಿಸಿಕೊಂಡಿದೆ. ಹೀಗಾಗಿ ಈ
50+ ನಾಗರಿಕರಿಗಾಗಿ ಬೆಂಗಳೂರಿನಲ್ಲಿ ಚೊಚ್ಚಲ ‘ಮರ್ಜಿ ಕಾರ್ನಿವಲ್ 2025’ ಮರ್ಜಿ ಬೈ ಪ್ರೈಮಸ್
ಬೆಂಗಳೂರು: ಮರ್ಜಿ ಬೈ ಪ್ರೈಮಸ್ ಸಂಸ್ಥೆಯು ಇದೇ ಮೊದಲ ಬಾರಿಗೆ 50 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಮರ್ಜಿ ಕಾರ್ನಿವಲ್ 2025 ಅನ್ನು ಯಶಸ್ವಿಯಾಗಿ ಆಯೋಜಿಸಿದೆ. ಚರ್ಚ್ ಸ್ಟ್ರೀಟ್ನಲ್ಲಿರುವ ಭೈವ್ ಪ್ಲಾಟಿನಂ ವರ್ಕ್ಸ್ಪೇಸ್ನಲ್ಲಿ ನಡೆದ ಈ ಕಾರ್ಯಕ್ರಮವು ಭೈವ್,
ಖಜಾನೆ ತುಂಬಿಸಲು ಸರ್ಕಾರದಿಂದ 569 ಮದ್ಯ ಲೈಸೆನ್ಸ್ ಇ- ಹರಾಜು
ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹಿಳಾ ಆಯೋಗ ಇತ್ತೀಚೆಗೆ ಮನವಿ ಮಾಡಿದೆ, ಇದೀಗ ಸರ್ಕಾರ ರಾಜ್ಯದ 569 ವೈನ್ ಸ್ಟೋರ್ ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಲೈಸೆನ್ಸ್ ಇ-ಹರಾಜಿಗೆ ಮುಂದಾಗಿದೆ. ಮದ್ಯ ಮಾರಾಟ ಇಳಿಕೆಯಾಗಿದ್ದು, ಸಂಪನ್ಮೂಲ ಕ್ರೋಢೀಕರಣಕ್ಕೆ
ಕಿಚ್ಚ ಸುದೀಪ್ ಅಭಿಮಾನಿಗೆ ಎಟಿಎಸ್ ಹೆಸರಲ್ಲಿ ಬೆದರಿಸಿ ಹಣ ದೋಚಿದ ಸೈಬರ್ ವಂಚಕರು
ಸೈಬರ್ ವಂಚಕರು ಕಿಚ್ಚ ಸುದೀಪ್ ಅಭಿಮಾನಿಯೊಬ್ಬರಿಗೆ ATS (ಭಯೋತ್ಪಾದನಾ ನಿಗ್ರಹ ದಳ) ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಿ ಹಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಬಾಂಬ್ ಸ್ಪೋಟದಲ್ಲಿ ನಿಮ್ಮ ಕೈವಾಡ ಇದೆ. ನಿಮ್ಮ ಮೊಬೈಲ್ ನಂಬರ್ ಬಳಕೆಯಾಗಿದೆ ಎಂದು




