ಇಕ್ಬಾಲ್ ಹುಸೇನ್ ಗೆ ನೋಟೀಸ್ ಜಾರಿ: ಡಿಕೆ ಶಿವಕುಮಾರ್
ಬೆಂಗಳೂರು: ಸಿಎಂ ಬದಲಾವಣೆ ಕುರಿತು ನೀಡಿದ ಹೇಳಿಕೆ ಕುರಿತು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುವುದಾಗಿ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಕ್ಬಾಲ್ ಹುಸೇನ್ ನೀವು ಸಿಎಂ ಆಗುವುದಾಗಿ ಹೇಳಿದ್ದಾರೆ ಎಂಬ ಪ್ರಶ್ನೆಗೆ “ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್
ಕಾಲ್ತುಳಿತ ನಿಯಂತ್ರಣಕ್ಕೆ ಜನದಟ್ಟಣೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಮರುಕಳಿಸಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಜನದಟ್ಟಣೆ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದೆ. ಕರ್ನಾಟಕ ಪೊಲೀಸ್ ಇಲಾಖೆಯು ಮಂಗಳವಾರ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೆಚ್ಚು
ಆಟೋದಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ
ಮದುವೆಗೆ ಮನೆಯಲ್ಲಿ ಒಪ್ಪಿಗೆ ದೊರೆಯದ ಕಾರಣಕ್ಕೆ ಪ್ರೇಮಿಗಳು ಆಟೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮನವಳ್ಳಿ ಪಟ್ಟಣ ನಿವಾಸಿಗಳಾದ ರಾಘವೇಂದ್ರ (28) ಮತ್ತು ರಂಜಿತಾ ಚೋಬರಿ (26) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾನು ಅದೃಷ್ಟವಂತ ಅದಕ್ಕೆ ಸಿಎಂ ಆಗಿದ್ದೀನಿ: ಸಿಎಂ ಸಿದ್ದರಾಮಯ್ಯ
ನಾನು ಅದೃಷ್ಟವಂತ ಅದಕ್ಕೆ ಸಿಎಂ ಆಗಿದ್ದೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಬಿ.ಆರ್.ಪಾಟೀಲ್ ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಈ ರೀತಿ ಪ್ರತಿಕ್ರಿಯೆ ನೀಡಿದರು. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ರೈತ
ಆನ್‌ಲೈನ್ ಬೆಟ್ಟಿಂಗ್ ಗೆ ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಕಳವು; ಖದೀಮನ ಸೆರೆ
ಬೆಂಗಳೂರು:ಆನ್‌ಲೈನ್ ಬೆಟ್ಟಿಂಗ್‌ನಿಂದ ಹಣ ಕಳೆದುಕೊಂಡು ಮಾಡಿದ್ದ ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಕಳ್ಳತನ ಮಾಡಿದ್ದ ಉದ್ಯೋಗಿಯನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿ ಮೌಲ್ಯ 19 ಲಕ್ಷ ಮೌಲ್ಯದ 30 ಹೆಚ್.ಪಿ ಕಂಪನಿಯ ಲ್ಯಾಪ್‌ಟಾಪ್‌ಗಳು ಹಾಗೂ 5 ಐ-ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಮೂರು
ಗ್ರೀನ್ ಸ್ಟೀಲ್, ಉನ್ನತ ದರ್ಜೆಯ ಅಲ್ಯೂಮೀನಿಯಂ; ಭಾರತ -ಯುಎಇ ಸಹಯೋಗಕ್ಕೆ ಒತ್ತು
ದುಬೈ, ಯುಎಇ: ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ ಉನ್ನತ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಉಕ್ಕು ಹಾಗೂ ಅಲ್ಯೂಮೀನಿಯಂ ಕುರಿತಾಗಿ ಅವರು ಮಾತುಕತೆ
ನವೆಂಬರ್ 26ರ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದ ಜ್ಯೋತಿಷಿ ಡಾ. ಬಿ.ಸಿ ವೆಂಕಟೇಶ್
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಾತಕದಲ್ಲಿ ಸಿಎಂ ಆಗುವ ಯೋಗವಿದೆ, ನವೆಂಬರ್ 26ರ ಬಳಿಕ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ. ಅವರು ಸಿಎಂ ಆಗೋದನ್ನು ಯಾರೂ ತಡೆಯಲಾಗದು ಎಂದು ಜ್ಯೋತಿಷಿ ಡಾ. ಬಿ.ಸಿ. ವೆಂಕಟೇಶ್ ಭವಿಷ್ಯ ಹೇಳಿದ್ದಾರೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಪಂಚಲಿಂಗೇಶ್ವರ
ರಾಜ್ಯದಲ್ಲಿ ಕ್ವಾಂಟಮ್ ಕ್ಷೇತ್ರದ ಅಭಿವೃದ್ದಿಗೆ ಹೊಸ ನೀತಿ ರೂಪಿಸಲು ಚಿಂತನೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ದೇಶದಲ್ಲೇ ಮೊದಲ ಕ್ವಾಂಟಮ್ ಕಂಪ್ಯೂಟರ್ ನಿರ್ಮಾಣದ ಮೂಲಕ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ ಸ್ಥಾನ ಹೊಂದಿದೆ. ಈ ಕ್ಷೇತ್ರದ ಹೆಚ್ಚಿನ ಅಭಿವೃದ್ದಿ ಅಗತ್ಯವಿರುವಂತಹ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ದವಿದ್ದು ಹೊಸ ನೀತಿ ರೂಪಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ
ಈ ನಂದಿನಿ ಪಾರ್ಲರ್‌ನಲ್ಲಿ ಹಾಲು ಮಾತ್ರವಲ್ಲ ಆಲ್ಕೋಹಾಲ್ ಕೂಡ ಮಾರಾಟ
ಕೆಎಂಎಫ್‌ನ ನಂದಿನಿ ಪಾರ್ಲರ್‌ನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಾತ್ರವಲ್ಲದೆ ಮದ್ಯ ಮಾರಾಟವೂ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಹಾಲು ಮಾರುವ ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಮಾಡುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ
ಮಾಧ್ಯಮಗಳಿಂದ ಅಧಿಕಾರಸ್ಥರ ಓಲೈಕೆ ಸಲ್ಲ, ಊಹಾ ಪತ್ರಿಕೋದ್ಯಮದಿಂದ ಸಮಾಜಕ್ಕೆ ಅಪಾಯ: ಸಿಎಂ
ಊಹಾ ಪತ್ರಿಕೋದ್ಯಮ ಪತ್ರಿಕೋದ್ಯಮಕ್ಕೆ ಮತ್ತು ಸಮಾಜಕ್ಕೂ ಅಪಾಯ, ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ