Menu

ಸಿಎಂ ಹೆಸರು ಹೇಳಿ ಕೈ ಮುಖಂಡನಿಂದ ದಂಪತಿಗೆ ಹಲ್ಲೆ: ಪ್ರಧಾನಿ, ರಾಷ್ಟ್ರಪತಿಗೆ ದೂರು ಸಲ್ಲಿಸಲು ಸಂತ್ರಸ್ತರ ನಿರ್ಧಾರ

ಸಿಎಂ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ ಕಾಂಗ್ರೆಸ್ ಮುಖಂಡ ರಾಜು ಬೆದರಿಕೆ ಹಾಕಿ ನಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ದೂರಿ ಸಂತ್ರಸ್ತ ದಂಪತಿ ಅಮಿತಾಬ್ ಹಾಗೂ ಸುಷ್ಮಾ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಲಿಖಿತ ದೂರು ನೀಡಲು ಮುಂದಾಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಕೋರಿ ದೂರು ಸಲ್ಲಿಸಲು ಸಂತ್ರಸ್ತ ದಂಪತಿ ಸಿದ್ಧತೆ ನಡೆಸಿದ್ದು, ಆರೋಪಿ ರಾಜು ನಂಜನಗೂಡು ತಾಲೂಕು ವರುಣಾ

ಜಿಬಿಎ ಚುನಾವಣೆ: ಕಾಂಗ್ರೆಸ್‌ನಿಂದ 1,800 ಆಕಾಂಕ್ಷಿಗಳು

ಜಿಬಿಎ ಚುನಾವಣೆಯಲ್ಲಿ ಕಣಕ್ಕಿಳಿಯಲು ಬಯಸಿ 369 ವಾರ್ಡ್‌ಗಳಲ್ಲಿ 1,800 ಕಾಂಗ್ರೆಸ್‌ ಆಕಾಂಕ್ಷಿಗಳು ಅರ್ಜಿ ಸ್ವೀಕರಿಸಿದ್ದಾರೆ. ಜೂನ್ 30ರ ಒಳಗಡೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಈಗಾಗಲೇ ಎಲ್ಲಾ ಪಕ್ಷಗಳು ಜಿಬಿಎ ಚುನಾವಣೆಗೆ ಸಿದ್ಧತೆ ಆರಂಭಿಸಿವೆ. ಕಾಂಗ್ರೆಸ್‌ನಲ್ಲಿ ಇದು

ಮದ್ಯ ಮಾರಾಟಗಾರರಿಂದ ರಾಹುಲ್‌ ಗಾಂಧಿಗೆ ದೂರು: ಸಿಎಂ, ಡಿಸಿಎಂಗೆ ನಾಚಿಕೆಯಾಗ್ಬೇಕು ಎಂದ ಆರ್‌ ಅಶೋಕ

ಅಬಕಾರಿ ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಕಮಿಷನ್ ದಂಧೆ, ಭ್ರಷ್ಟಾಚಾರದ ಬಗ್ಗೆ ಬೇಸತ್ತಿರುವ ಮದ್ಯ ಮಾರಾಟಗಾರರ ಸಂಘ ಈ ಬಗ್ಗೆ ರಾಹುಲ್ ಗಾಂಧಿ ಅವರಿಗೆ ದೂರು ಕೊಡಲು ಮುಂದಾಗಿದೆ. ಈ ನಡೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್‌ ಅವರಿಗೆ ನಿಜಕ್ಕೂ ನಾಚಿಕೆಗೇಡಿನ

ಕೋರಮಂಗಲದಲ್ಲಿ ಎಟಿಎಂಗೆ ತುಂಬಬೇಕಿದ್ದ ಹಣದೊಂದಿಗೆ ಸಿಬ್ಬಂದಿ ಪರಾರಿ

ಎಟಿಎಂಗೆ ತುಂಬಲು ನೀಡಿದ್ದ ಒಂದು ಕೋಟಿಗೂ ರೂಪಾಯಿಗೂ ಹೆಚ್ಚಿನ ಹಣವನ್ನು ಖಾಸಗಿ ನಗದು ನಿರ್ವಹಣಾ ಸಂಸ್ಥೆ ಹಿಟಾಚಿ ಕಂಪನಿಯ ಸಿಬ್ಬಂದಿ ತೆಗೆದುಕೊಂಡು ಹೋಗಿ ಪರಾರಿಯಾಗಿದ್ದಾರೆ. ಕೋರಮಂಗಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಹಿಟಾಚಿ ಪೇಮೆಂಟ್ ಸರ್ವೀಸ್ ಸಂಸ್ಥೆಯು ಎಸ್‌ಬಿಐ

ಬೆಂಗಳೂರಿನಲ್ಲಿ ಲೈಟರ್‌ ಜಗಳ: ಕಾರು ಚಲಾಯಿಸಿ ಗೆಳೆಯನ ಕೊಲೆ

ಲೈಟರ್‌ ವಿಚಾರಕ್ಕೆ ಗೆಳೆಯರಿಬ್ಬರ ನಡುವೆ ಶುರುವಾದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯ ವೀರಸಂದ್ರದ ಬಳಿ ನಡೆದಿದೆ. ಸಾಫ್ಟ್‌ವೇರ್‌ ಎಂಜಿನಿಯರ್‌ ರೋಷನ್‌ ಹೆಗ್ಡೆ ಸ್ನೇಹಿತ ಪ್ರಶಾಂತ್‌ ಮೇಲೆ ಕಾರು ಚಲಾಯಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಇದು ಅಪಘಾತವಲ್ಲ,

ಲಿಂಗಸೂಗೂರಿನಲ್ಲಿ ಆಸ್ತಿಗಾಗಿ ತಾಯಿಯ ಕೊಲೆಗೈದ ಮಗ

ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ಆಸ್ತಿಗಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಗನೊಬ್ಬನ ತಾಯಿಯ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನು ಕೊಲೆ ಮಾಡಿ ಪರಾರಿಯಾದವ. ಕುಮಾರ ಮದ್ಯದ ಅಮಲಿನಲ್ಲಿ ತಾಯಿಯ ತಲೆ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷಕ್ಕೆ ಮೊದಲು ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರನ್ನು ನೇಮಕ ಮಾಡಲು ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ

ವಿಜಯಪುರದಲ್ಲಿ ಜ್ಯುವೆಲ್ಲರಿ ಶಾಪ್‌ ದರೋಡೆ, ವೀಡಿಯೊ ಮಾಡಲು ಹೋದಾತನಿಗೆ ಫೈರಿಂಗ್‌

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಚಿನ್ನದಂಗಡಿ ದರೋಡೆ ನಡೆದಿದೆ. ಈ ವೇಳೆ ವೀಡಿಯೊ ಸೆರೆ ಹಿಡಿಯಲು ಹೋದವನ ಮೇಲೆ ದರೋಡೆಕೋರರು ಫೈರಿಂಗ್‌ ಮಾಡಿದ್ದಾರೆ. ದರೋಡೆ ನಡೆಯುವಾಗ ಅನಿಲ್‌ ಎಂಬಾತ ವೀಡಿಯೊ ಸೆರೆ ಹಿಡಿಯಲು ಹೋದಾಗ ಆತನ ಮೇಲೆ ಗುಂಡು

ನಾಳೆ ಕನಕೋತ್ಸವಕ್ಕೆ ಚಾಲನೆ, “ಮನರೇಗಾ” ಮಕ್ಕಳಿಗೆ ಚಿತ್ರ ಸ್ಪರ್ಧೆ: ಡಿಕೆ ಶಿವಕುಮಾರ್‌

ಜನವರಿ 28ರಂದು ಬೆಳಗ್ಗೆ 5 ಗಂಟೆಗೆ ಕನಕೋತ್ಸವ ಕಾರ್ಯಕ್ರಮ ಅಧಿಕೃತವಾಗಿ ಆರಂಭವಾಗಲಿದೆ. ಯೋಗ ಗುರು ವಚನಾನಂದ ಸ್ವಾಮೀಜಿ ಅವರು ಆಗಮಿಸುತ್ತಿದ್ದಾರೆ.”ಮನರೇಗಾ”  ಯೋಜನೆ ವಿಷಯದಲ್ಲಿ ಮಕ್ಕಳಿಗೆ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡಿದ್ದೇವೆ. ಜನಪದ, ದೇಶಭಕ್ತಿ ಗೀತೆ, ಸಿನಿಮಾ ಗೀತೆಗಳ ಜಿಲ್ಲಾ ಮಟ್ಟದ ಸ್ಪರ್ಧೆ

ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಕೇರಳದಲ್ಲಿ ಅರೆಸ್ಟ್

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಉಚ್ಚಾಟಿತ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ಮೊಬೈಲ್ ಸಂಭಾಷಣೆ ವೇಳೆ ಬ್ಯಾನರ್ ವಿಷಯದಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ನಂತರ ತಲೆಮರೆಸಿಕೊಂಡಿದ್ದರು.