ಶಿವಮೊಗ್ಗದಲ್ಲಿ ಚಿನ್ನ ಕಳ್ಳನಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಶಿವಮೊಗ್ಗದ ಗಾಂಧಿ ಬಜಾರ್ ನ ಬಂಗಾರದ ಅಂಗಡಿಗೆ ಬಂದು ಬಂಗಾರ ಖರೀದಿಸುವ ನೆಪದಲ್ಲಿ 96 ಗ್ರಾಂ ಚಿನ್ಬಾಭರಣ ಕದ್ದು ಪರಾರಿಯಾಗಿದ್ದ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ 5 ಸಾವಿರ ರೂ. ದಂಡ, ಮೂರು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 11 ವರ್ಷದ ಹಿಂದೆ ನಡೆದ ಘಟನೆ ಇದಾಗಿದೆ. ಆರೋಪಿ ದಾವಣಗೆರೆಯ ಹರಿಹರದ ಅಬ್ಬಾಸ್ ಖಾನ್ ಶಿವಮೊಗ್ಗ ನಗರ ಗಾಂಧಿ ಬಜಾರು ಮುಖ್ಯ ರಸ್ತೆ ಜಾಮಿಯಾ
ಹೊಂಗಸಂದ್ರದಲ್ಲಿ ಮನೆ ಬಿಟ್ಟು ಹೋದ ಮಗಳು: ಕಿರುಕುಳ ನೀಡುತ್ತಿದ್ದ ಪತಿಯ ಕೊಲೆಗೈದ ಪತ್ನಿ
ಬೆಂಗಳೂರಿನ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ಕಿರುಕುಳ ನೀಡುತ್ತಿದ್ದ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಪತ್ನಿಗೆ ಪ್ರತಿದಿನ ಕಿರುಕುಳ ನೀಡುತ್ತಿದ್ದ ಮುರುಗೇಶ್ (50) ಎಂಬವರನ್ನು ಪತ್ನಿ ಲಕ್ಷ್ಮೀ ಕೊಲೆ ಮಾಡಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಈ ದಂಪತಿ ಇಬ್ಬರು ಹೆಣ್ಣು ಮಕ್ಕಳಿದ್ದು,
ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ತುಳು: ರಾಜ್ಯ ಸರ್ಕಾರದ ತಂಡ ಆಂಧ್ರಪ್ರದೇಶಕ್ಕೆ ಭೇಟಿ
ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕಾನೂನು ಪ್ರಕ್ರಿಯೆ ಹಾಗೂ ಅನುಷ್ಠಾನದ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ ಪ್ರದೇಶದಲ್ಲಿ ಅಲ್ಲಿನ ಸರ್ಕಾರದ ವಿವಿಧ ಇಲಾಖೆಗಳ ಜೊತೆಗೆ ಮಾತುಕತೆ
ಕೆಐಎನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳವಿತ್ತ ನಿಲ್ದಾಣ ಸಿಬ್ಬಂದಿ ಅರೆಸ್ಟ್
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ವಿಮಾನಯಾನ ಸಂಸ್ಥೆಯ ಗ್ರೌಂಡ್-ಹ್ಯಾಂಡ್ಲಿಂಗ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮೊಹಮ್ಮದ್ ಅಫ್ಘಾನ್ ಅಹ್ಮದ್ ಬಂಧಿತ. ಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ತಪಾಸಣೆಯ ನೆಪದಲ್ಲಿ ಅನುಚಿತ ಸ್ಪರ್ಶಿಸಿ ತಬ್ಬಿಕೊಂಡು ಲೈಂಗಿಕ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಜೈಲು
ಶಿವಮೊಗ್ಗದಲ್ಲಿ ಬಾಲಕಿ ಮೇಲೆ 21 ವರ್ಷದ ಯುವಕ 2022ರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತ) ನ್ಯಾಯಾಲಯ ತಪ್ಪಿತಸ್ಥನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 50 ಸಾವಿರ ರೂ.
ಸಂಪ್ರದಾಯ ಬದಲಾಗುವ ದಿಕ್ಕಿನಲ್ಲಿ ಯುವನಾಯಕನಿಗೆ ಬಿಜೆಪಿ ಸಾರಥ್ಯ
ರಾಷ್ಟ್ರೀಯ ಪಕ್ಷಗಳ ನಾಯಕತ್ವವು ಸದಾ ಹಿರಿಯ ತಲೆಗೆ ವಹಿಸಬೇಕೆಂಬ ರಾಜಕೀಯ ಸಂಪ್ರದಾಯವೀಗ ಬದಲಾಗುವ ದಿಕ್ಕಿನಲ್ಲಿದೆ. ರಾಜಕಾರಣದಲ್ಲಿ ಹಿರಿಯರು, ಕಿರಿಯರಿಗೆ ದಾರಿ ಮಾಡಿಕೊಡಬೇಕೆಂದು ನಿತಿನ್ ಗಡ್ಕರಿ ನೀಡಿರುವ ಸಲಹೆ ಗಮನಿಸುವಂತಹದು. ಒಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಹೊಸ ಆಯಾಮ ಸೃಷ್ಟಿಯಾಗಿದೆ.
3 ದಿನಗಳ ಚಾಲುಕ್ಯ ಉತ್ಸವಕ್ಕೆ ವೈಭವದ ತೆರೆ
ಬಾಗಲಕೋಟೆ: ಮೂರು ದಿನಗಳ ಕಾಲ ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ನಡೆದ ಚಾಲುಕ್ಯರ ಗತವೈಭವ ಸಾರುವ ಐತಿಹಾಸಿಕ ಚಾಲುಕ್ಯ ಉತ್ಸವ ಬುಧವಾರ ತಡರಾತ್ರಿ ವೈಭವದಿಂದ ತೆರೆಕಂಡಿತು. ಬಾದಾಮಿಯ ಇಮ್ಮಡಿ ಪುಲಕೇಶಿ ವೇದಿಕೆ, ಪಟ್ಟದಕಲ್ಲಿನ ವಿಕ್ರಮಾದಿತ್ಯ ವೇದಿಕೆ ಹಾಗೂ ಐಹೊಳೆಯ ಜಯಸಿಂಹ ವೇದಿಕೆ
ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಸಂವಿಧಾನದ ರಕ್ಷಕರು: ಅಶೋಕ್ ವಾಗ್ದಾಳಿ
ಬೆಂಗಳೂರು: ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ
60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಸಚಿವ ಡಾ. ಶರಣಪ್ರಕಾಶ ಪಾಟೀಲ್
ಬೆಂಗಳೂರು, ಜ. 21: ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇಕಡ
ರಾಜ್ಯಪಾಲರಿಗೆ ಗೈರು: ಸಂವಿಧಾನದಲ್ಲಿ ಅವಕಾಶವಿಲ್ಲ!
ರಾಜ್ಯಪಾಲರಿಗೆ ಜಂಟಿ ಅಧಿವೇಶನದಲ್ಲಿ ಭಾಗವಹಿಸದೆ ಗೈರು ಹಾಜರಾಗುವ ಅವಕಾಶ ಸಂವಿಧಾನದಲ್ಲಿ ಉಲ್ಲೇಖವಾಗಿಲ್ಲ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ನರೇಗಾ ಕಾಯಿದೆಯನ್ನು ಕೇಂದ್ರ ಸರ್ಕಾರ ತಿದ್ದುಪಡಿಗೊಳಿಸಿರುವ ಹಿನ್ನಲೆಯಲ್ಲಿ, ಇದರ ಸುದೀರ್ಘ ಚರ್ಚೆಗೆ ವಿಶೇಷ ಜಂಟಿ ಅಧಿವೇಶನವನ್ನು ರಾಜ್ಯ ಸರ್ಕಾರ ಕರೆದಿದೆ. ಆದರೆ ಇದಕ್ಕೆ ರಾಜ್ಯಪಾಲರು




