ಸಚಿವ ಸಂಪುಟ ವಿಸ್ತರಣೆ; ವರಿಷ್ಠರ ಮಾರ್ಗದರ್ಶನ ಪಡೆದು ಸಿದ್ಧತೆ ಎಂದ ಸಿಎಂ
ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಹಳೆ ಕಚೇರಿ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯಿಂದಾಗಿ ಜಿಬಿಎ
ಏನಿದು ಇಸ್ರೋ ವಿಜ್ಞಾನಿಗಳ ರಾಜೀನಾಮೆ
ಇಸ್ರೋ ವಿಜ್ಞಾನಿಗಳ ಸಾಮೂಹಿಕ ರಾಜೀನಾಮೆ ಎಂಬುದು ಕೇಂದ್ರ ಸರ್ಕಾರ ಮತ್ತ ಇಸ್ರೊ ಸಂಸ್ಥೆಗೆ ಮಾತ್ರ ಸಂಬಂಧಿಸಿದ ಸಾಮಾನ್ಯ ವಿಷಯವಂತೂ ಅಲ್ಲ. ಇದು ಬಾಹ್ಯಾಕಾಶ ರಂಗದಲ್ಲಿ ಭಾರತವಿಂದು ಪೈಪೋಟಿ ಎದುರಿಸುತ್ತಿರುವ ಇತರ ದೇಶಗಳ ದೃಷ್ಟಿಯಲ್ಲಿಯೂ ಅತಿ ಗಂಭೀರ. ದೇಶದ ಪ್ರತಿಷ್ಟಿತ ಇಸ್ರೋ ಸಂಸ್ಥೆಯ
ಇ-ಸ್ವತ್ತು ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ: ಈಶ್ವರ ಖಂಡ್ರೆ
ಇ-ಸ್ವತ್ತು ಪಡೆಯಲು ಪಂಚಾಯ್ತಿ ಕಚೇರಿಗೆ ಗ್ರಾಮಸ್ಥರು ಅಲೆಯುವುದನ್ನು ತಪ್ಪಿಸಲು ಮನೆಬಾಗಿಲಿಗೇ ಇ-ಸ್ವತ್ತು ನೀಡಲು ತೀರ್ಮಾನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇ-ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳ ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ
ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ರಿಯಲ್ ಎಸ್ಟೇಟ್ ವ್ಯವಹಾರ ಆರಂಭ: ಆರ್ ಅಶೋಕ
ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಆರಂಭವಾಗಿದೆ. ಮೂರು ರಾಜ್ಯಗಳ ಚುನಾವಣೆಗೆ ಬಿಡದಿ ಟೌನ್ಶಿಪ್ ಯೋಜನೆ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ
3.38 ಕೋಟಿ ರೂ. ಅಕ್ರಮ ಪಾವತಿ: ಬೌರಿಂಗ್ಸ್ ಕ್ಲಬ್ ಮಾಜಿ ಪದಾಧಿಕಾರಿ ಎಚ್.ಎಸ್.ಶ್ರೀಕಾಂತ್ ಅಮಾನತು
ಕೇಟರಿಂಗ್ ಕಂಪನಿಯೊಂದಕ್ಕೆ ರೂ 3.38 ಕೋಟಿಯನ್ನು ನಿಯಮಬಾಹಿರವಾಗಿ ಪಾವತಿಸಿರುವ ಆರೋಪದ ಮೇಲೆ ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿರುವ ಪ್ರತಿಷ್ಠಿತ ಬೌರಿಂಗ್ ಇನ್ ಸ್ಟಿಟ್ಯೂಟ್ ನ (ಬೌರಿಂಗ್ಸ್ ಕ್ಲಬ್) ಮಾಜಿ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಶ್ರೀಕಾಂತ್ ಅವರ ಸದಸ್ಯತ್ವವನ್ನು ಆರು ತಿಂಗಳ ಅವಧಿಗೆ ಅಮಾನತುಗೊಳಿಸಲಾಗಿದೆ.
ಡಿಸಿಆರ್ಇ ಠಾಣೆಗಳ ಕಾನ್ಸ್ಟೇಬಲ್ಗಳಿಗೆ ವಾರದಲ್ಲಿ ಒಂದು ಕಡ್ಡಾಯ ರಜೆ ಜಾರಿ
ಕರ್ನಾಟಕ ಡಿಸಿಆರ್ಇ (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಪೊಲೀಸ್ ಪ್ರಧಾನ ಕಚೇರಿಯ
ಜಿಬಿಎ ಚುನಾವಣೆ ಕಾಲಾವಕಾಶ ಡಿಸೆಂಬರ್ಗೆ ವಿಸ್ತರಿಸಿದ ಸುಪ್ರೀಂಕೋರ್ಟ್
ಜಿಬಿಎ ಚುನಾವಣೆ ನಡೆಸಲು ನೀಡಿದ್ದ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ನೀಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿ ಡಿಸೆಂಬರ್ವರೆಗೆ ಅವಕಾಶ ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಆಗಸ್ಟ್ 31ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಈ ಹಿಂದೆ ಆದೇಶಿಸಿತ್ತು.
ಲಿವ್ ಇನ್ ರಿಲೇಷನ್ಶಿಪ್: ಮಗು ಅನುಮಾನಾಸ್ಪದ ಸಾವು
ಲಿವ್ ಇನ್ ರಿಲೇಷನ್ಶಿಪ್ ಜೋಡಿಯೊಂದಿಗೆ ಇದ್ದ ಎರಡು ವರ್ಷದ ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಬೆಂಗಳೂರಿನ ಬಾಣಸವಾಡಿಯ ಇಂದಿರಾ ಸ್ಟ್ರೀಟ್ನಲ್ಲಿ ನಡೆದಿದೆ. ಜೇಸನ್ ಆಂಥೋನಿ ಮತ್ತು ರೋಸ್ಲಿನ್ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದು, ಅವರ ಎರಡು ವರ್ಷದ ಮಗು ಕಾರ್ಲೆಟ್ ಡೈಸಿ ಮೃತಪಟ್ಟಿದೆ.
ವಿಚ್ಛೇದಿತೆಯೊಂದಿಗೆ ಪ್ರೇಮವಿವಾಹ: ಅರತಕ್ಷತೆ ರಾತ್ರಿಯೇ ಯುವಕನ ಕೊಲೆ
ಬಳ್ಳಾರಿಯ ಬಟ್ಟಿ ಏರಿಯಾದಲ್ಲಿ ಪ್ರೀತಿಸಿ ಮದುವೆಯಾಗಿದ್ದ ನಭೀ ರಸೂಲ್ ಎಂಬ ಯುವಕನನ್ನು ಆರತಕ್ಷತೆ ದಿನವೇ ರಾತ್ರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಯುವತಿಯ ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿರುವುದಾಗಿ ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಭೀ ರಸೂಲ್ ಹತ್ಯೆಯಾದ
ಇರಾನ್ ಮೇಲೆ ಮುಂದುವರಿದ ಅಮೆರಿಕ ದಾಳಿ: ಕತಾರ್ ಸೇರಿ ಕೊಲ್ಲಿ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ
ಅಮೆರಿಕವು ಸತತ ಆರನೇ ದಿನ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದ್ದು ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್, ಪರ್ಷಿಯನ್ ಕೊಲ್ಲಿಯಲ್ಲಿರುವ ಕತಾರ್ ಸೇರಿದಂತೆ ಪ್ರಮುಖ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಬೆಳವಣಿಗೆಗಳಿಂದಾಗಿ ಪಶ್ಚಿಮ ಏಷ್ಯಾ




