Menu

ಅಣ್ಣನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಎಲ್ಲದಕ್ಕೂ ಅಂತ್ಯ ಇದ್ದೇ ಇದೆ: ಡಿಕೆ ಸುರೇಶ್‌

ಅಧಿಕಾರ ಯಾರಿಗೂ ಸುಲಭವಾಗಿ ಬರುವುದಿಲ್ಲ. ನಮ್ಮ ಅಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ. ಯಾವುದೂ ಶಾಶ್ವತವಲ್ಲ. ಈ ಮೊದಲು ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತೇನೆ. ಎಂದು ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್  ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು  ಪ್ರತಿಕ್ರಿಯೆ ನೀಡಿದರು. ಎಷ್ಟು ದಿನ ತಾಳ್ಮೆಯಿಂದ ಇರಬೇಕು ಎಂಬ ಪ್ರಶ್ನೆ ಶಿವಕುಮಾರ್ ಅವರ ಬೆಂಬಲಿಗ ಶಾಸಕರಲ್ಲಿದೆ ಎಂದು ಕೇಳಿದಾಗ ಅವರು, ರಾಜಕಾರಣದಲ್ಲಿ ಇದ್ದ ಮೇಲೆ, ಯಾವುದೂ ಶಾಶ್ವತವಲ್ಲ.

ಸ್ವಂತ 3 ಮನೆ 3 ಆಟೋ, ಕಾರು ಹೊಂದಿರುವ ಭಿಕ್ಷುಕ: ವ್ಯಾಪಾರಿಗಳಿಗೆ ಬಡ್ಡಿಗೆ ಸಾಲ ಕೊಡುವಷ್ಟು ಶ್ರೀಮಂತ!

ಭಿಕ್ಷುಕ ಅಂದರೆ ಕಷ್ಟದಲ್ಲಿ ಇರುವವನು, ದುಡಿಯಲು ಆಗದೇ ಹೊಟ್ಟೆಪಾಡಿಗಾಗಿ ಈ ಕೆಲಸ ಮಾಡುವವನು, ಅತ್ಯಂತ ಬಡವ ಎಂಬ ಕಲ್ಪನೆ ಇದೆ. ಆದರೆ ಇತ್ತೀಚೆಗೆ ಫೋನ್ ಪೇ ಭಿಕ್ಷಕರನ್ನು ನೋಡಿದ್ದೇವೆ. ಸತ್ತ ಮೇಲೆ ಭಿಕ್ಷುಕನ ಬಳಿ ಲಕ್ಷಗಟ್ಟಲೆ ದುಡ್ಡನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ

ಜನವರಿ 22ರಿಂದ 31ರವರೆಗೆ ಜಂಟಿ ಅಧಿವೇಶನದಲ್ಲಿ MGNREGA ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. \ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಂಟಿ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣ ಮತ್ತು ನರೇಗಾ(MGNREGA) ಯೋಜನೆ

ಜನವರಿ 29ರಂದು ಸಾರಿಗೆ ನೌಕರರ ಪ್ರತಿಭಟನೆ

ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಜನವರಿ 29ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಲಿದ್ದಾರೆ. ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರು

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ನೀರು: ಸಾರ್ವಜನಿಕರಿಗೆ ಎಚ್ಚರಿಕೆ

ವಿಜಯನಗರದ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಜ.20 ರಿಂದ ಜ. 30ರವರೆಗೆ ಪ್ರತಿ ದಿನ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ   500 ಕ್ಯೂಸೆಕ್‌ ನಂತೆ  ಒಟ್ಟು 0.50 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. ಈ

ಏಪ್ರಿಲ್‌ನಿಂದ ಹೈವೇ ಟೋಲ್ ಪ್ಲಾಜಾದಲ್ಲಿ ನಗದು ಪಾವತಿ ಇಲ್ಲ

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಬಳಿ ನಗದು ಪಾವತಿಗೆ ಸಮಯ ಹಿಡಿಯುವ ಕಾರಣ ವಾಹನಗಳ ದಟ್ಟಣೆ ಉಂಟಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಕ್ರಮ ಕೈಗೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು 2026 ಏಪ್ರಿಲ್

ರನ್ಯಾರಾವ್‌ ಅಕ್ರಮ ಚಿನ್ನ ಸಾಗಣೆ ಕೇಸ್‌: ಸಸ್ಪೆಂಡೆಡ್‌ ಡಿಜಿಪಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್‌

ಕಚೇರಿಯಲ್ಲಿ ಸಮವಸ್ತ್ರದಲ್ಲಿ ಇರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ನಡೆದುಕೊಂಡ ವೀಡಿಯೊ ವೈರಲ್‌ ಬಳಿಕ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರರಾವ್‌ಗೆ ನಟಿ ರನ್ಯಾರಾವ್ ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಸರ್ಕಾರಿ ವಾಹನ ದುರ್ಬಳಕೆ ಮಾಡಿರುವುದಾಗಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸಚಿವರಾಗಿರುವ ಜೆ.ಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಅವಧಿ ಪೂರ್ಣಗೊಳಿಸಿದ ಬಳಿಕ ನಡೆದ ಚುನಾವಣೆಯಲ್ಲಿ ನಿತಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ

ತಮಿಳ್ನಾಡು ಅಸೆಂಬ್ಲಿಯಲ್ಲಿ ಭಾಷಣ ಮಾಡದೆ ಹೊರ ನಡೆದ ರಾಜ್ಯಪಾಲರು

ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡದೆ ರಾಜ್ಯಪಾಲರು ಹೊರ ನಡೆದಿದ್ದಾರೆ. ಈ ಭಾಷಣದಲ್ಲಿ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳಿವೆ. ಜನರಿಗೆ ತೊಂದರೆ ನೀಡುವ ನಿರ್ಣಾಯಕ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ. ತಮಿಳುನಾಡು 12 ಲಕ್ಷ ಕೋಟಿ ರೂ. ಗೂ ಹೆಚ್ಚು ಹೂಡಿಕೆ ಆಕರ್ಷಿಸಿದೆ ಎಂದು

ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸಚಿವ ತಿಮ್ಮಾಪುರ ರಾಜೀನಾಮೆಗೆ ಆರ್‌ ಅಶೋಕ ಆಗ್ರಹ

ಬಾರ್, ಪಬ್, ಕ್ಲಬ್‌ಗಳಿಂದ ‘ಮಂಥ್ಲಿ ಮನಿ’ ವಸೂಲಿ ಮಾಡುವ ಭ್ರಷ್ಟ ಸಚಿವ ಆರ್. ಬಿ. ತಿಮ್ಮಾಪುರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಿ.ಮದ್ಯದ ಅಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ನಡೆಯುತ್ತಿರುವ ಬಲವಂತದ ವಸೂಲಿ ದಂಧೆಯಲ್ಲಿ ಬರೋಬ್ಬರಿ 2,500 ಕೋಟಿ ರೂಪಾಯಿಗಳ ಬೃಹತ್ ಹಗರಣ