ಅಬಕಾರಿ ನೀತಿ ಹಗರಣ ಕೇಸ್: ಕೇಜ್ರಿವಾಲ್ ಸೇರಿ 23 ಆರೋಪಿಗಳ ಖುಲಾಸೆ, ಸಿಬಿಐಗೆ ಕೋರ್ಟ್ ತರಾಟೆ
ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಹಾಗೂ ತೆಲಂಗಾಣದ ಎಂಎಲ್‌ಸಿ ಕೆ. ಕವಿತಾ ಸೇರಿದಂತೆ 23 ಆರೋಪಿ ಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಯಾವುದೇ ಸಾಕ್ಷ್ಯಗಳಿಲ್ಲದಿದ್ದರೂ ಈ ನಾಯಕರ ವಿರುದ್ಧ ದೋಷಾರೋಪ ಹೊರಿಸಿದ್ದಕ್ಕಾಗಿ ಕೋರ್ಟ್ ತೀವ್ರವಾಗಿ ಖಂಡಿಸಿದೆ. ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಕೆ. ಕವಿತಾ ಸೇರಿ ಎಲ್ಲಾ 23 ಆರೋಪಿಗಳು ಅಬಕಾರಿ ನೀತಿ ರಚನೆಯಲ್ಲಿ ಕ್ರಿಮಿನಲ್ ಪಿತೂರಿಯಾಗಲಿ ಅಥವಾ ತಪ್ಪು ಮಾಡಿರುವ
56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ
ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ರಾಜ್ಯದ ನಾನಾ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಉದ್ಯೋಗ ನೇಮಕಾತಿ ಸಂಬಂಧ ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಇರುವ ಸಾಧಕ ಭಾಧಕಗಳ ಬಗ್ಗೆ
ಮಂತ್ರಾಲಯದಿಂದ ವಾಪಸಾಗುತ್ತಿದ್ದ ಕಾರು ಲಾರಿಗೆ ಡಿಕ್ಕಿ: ಮೂವರ ಸಾವು
ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕುಣಿಗಲ್‌ನ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು ಕುಣಿಗಲ್‌ಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ
21 ಕೋಟಿ ರೂ. ಗ್ಯಾರಂಟಿ ಹಣ ಮೃತಪಟ್ಟವರ ಖಾತೆಗೆ ಹೋಗಿದೆ: ಡಿಸಿಎಂ
ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಸಹಾಯ ಮಾಡುತ್ತಿಲ್ಲ, ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ನಿಭಾಯಿಸುತ್ತಿದ್ದೇವೆ. ಸರ್ಕಾರವೂ ಅತ್ಯುತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿದೆ. 21 ಕೋಟಿಯಷ್ಟು ಹಣ ಮೃತಪಟ್ಟಿರುವ ಮಹಿಳೆಯರ ಖಾತೆಗೆ ಹೋಗಿದೆ. ಇದರ ಬಗ್ಗೆ ನಾವು ಚರ್ಚೆ
ಮೇಕೆದಾಟು ಯೋಜನೆ ರಾಜ್ಯಕ್ಕೆ ಮರೀಚಿಕೆಯಾಗುವುದೇ
ಮೇಕೆದಾಟು ಯೋಜನೆಯ ಮರು ಅಧ್ಯಯನಕ್ಕೆ ಕೇಂದ್ರ ಜಲ ಆಯೋಗವು ಈಗ ರಾಜ್ಯಕ್ಕೆ ಆದೇಶ ನೀಡಿದೆ. ಕೇಂದ್ರ ಜಲ ಆಯೋಗದಿಂದ ಇಂತಹ ಆದೇಶ ಅಗತ್ಯವಿರಲಿಲ್ಲ. ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಎಲ್ಲ ಅನುಮಾನಗಳನ್ನು ನಿವಾರಿಸಿದೆ ಮತ್ತು ಸಮಜಾಯಿಷಿ ಮತ್ತು ವಿವರಗಳನ್ನೂ ಸಲ್ಲಿಸಿದೆ. ಮರಗಳನ್ನು
ವಾಟ್ಸಾಪ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ತುರುವೇಕೆರೆಯಲ್ಲಿ ವಿದ್ಯಾರ್ಥಿ ಸುಸೈಡ್
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಎನ್ನಲಾದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವು ಆತ್ಮಹತ್ಯೆ ಎಂಬುದು ಗೊತ್ತಾಗಿದೆ. ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್ ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಟ್ಟಣದ ಸರ್ಕಾರಿ
ಪೋಕ್ಸೋ ಕೇಸ್, ಮುತ್ಯಾ ಅಜ್ಞಾತ ಸ್ಥಳಕ್ಕೆ: ಬಾಲಕಿ ಪೋಷಕರಿಂದ ಮುತ್ಯಾ ಪರ ಬ್ಯಾಟಿಂಗ್
ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಬಾಲಕಿ ಜೊತೆ ಅನುಚಿತವಾಗಿ ನಡೆದುಕೊಂಡಿರುವ ವೀಡಿಯೋ ವೈರಲ್ ಆದ ಬಳಿಕ ಕೇಸ್ ದಾಖಲಾಗುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ಪರಾರಿಯಾಗಿದ್ದು, ಅಲ್ಲಿಂದ
ನಿರ್ದೇಶಕ ಅನೀಶ್ ಅಪಹರಣ, ದರೋಡೆ: ನಟಿ ಸೇರಿ 11ಆರೋಪಿಗಳ ಬಂಧನ
ನಿರ್ದೇಶಕ ಅನೀಶ್ ಅವರನ್ನು ಅಪಹರಿಸಿ ಚಿನ್ನಾಭರಣ ದೋಚಿದ್ದ ಗ್ಯಾಂಗ್ ಪೊಲೀಸ್ ಬೆಲೆಗೆ ಬಿದ್ದಿದೆ. ಭೀಮಾ ಸಿನಿಮಾ ನಟಿ ಸೇರಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದುವರಿದಿದೆ. ನಿರ್ದೇಶಕ ಅನೀಶ್ ಇತ್ತೀಚೆಗೆ
ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ
ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ
‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಆಳ ಒಳಸಂಚು: ಕ್ಷಮೆಯಿಲ್ಲ, ತಪ್ಪಿತಸ್ಥರ ತಲೆದಂಡವೆಂದು ಸರ್ಕಾರಕ್ಕೆ ಸುಪ್ರೀಂ ತಾಕೀತು
ಎನ್‌ಸಿಇಆರ್‌ಟಿ ಎಂಟನೇ ತರಗತಿಗೆ ಅಳವಡಿಸಿರುವ ʼನ್ಯಾಯಾಂಗದಲ್ಲಿ ಭ್ರಷ್ಟಾಚಾರʼ ಪಾಠವನ್ನು ಒಳಗೊಂಡ ಸಮಾಜ ವಿಜ್ಞಾನ ಪಠ್ಯಪುಸ್ತಕದ ಮೇಲೆ ಸುಪ್ರೀಂ ಕೋರ್ಟ್ ಸಂಪೂರ್ಣ ನಿಷೇಧ ಹೇರಿದೆ. ಪುಸ್ತಕದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಭಾಗವನ್ನು ಸೇರಿಸಿರುವುದು ಆಳವಾದ ಒಳಸಂಚು ಎಂದು ತೀವ್ರವಾಗಿ ಖಂಡಿಸಿದೆ. ಮುಖ್ಯ ನ್ಯಾಯಮೂರ್ತಿ




