Menu

ಅಂಬೇಡ್ಕರ್ ಸೋಲಿಗೆ ತಂತ್ರಗಾರಿಕೆ ಹೆಣೆದಿದ್ದು ಕಾಂಗ್ರೆಸ್ ಎಂದ ಆರ್‌. ಅಶೋಕ್‌

ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರ ಸೋಲಿಗೆ ಎಲ್ಲ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್ ಪಕ್ಷ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನ ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್ ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್ ಪಕ್ಷ. ಅಂಬೇಡ್ಕರ್ ಅವರನ್ನು ಸೋಲಿಸಿದ್ದಕಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಬಹುಮಾನ ಕೊಟ್ಟಿದ್ದೂ ಕಾಂಗ್ರೆಸ್ ಪಕ್ಷ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ 

ವಕ್ಫ್ ತಿದ್ದುಪಡಿ ಕಾಯ್ದೆ: ಹೊತ್ತಿ ಉರಿಯುತ್ತಿರುವ ಬಂಗಾಳದಲ್ಲಿ ಮೂರು ಸಾವು

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಆ ರಾಜ್ಯ ಹೊತ್ತಿ ಉರಿಯುತ್ತಿದೆ. ಘರ್ಷಣೆಯಲ್ಲಿ ಈವರೆಗೆ ಒಟ್ಟು ಮೂವರು ಮೃತಪಟ್ಟಿದ್ದಾರೆ. 150ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಂಸಾಚಾರ ಮುರ್ಷಿದಾಬಾದ್‌ ಜಿಲ್ಲೆಯ ಹಲವು

ಬೆಂಗಳೂರಿನಲ್ಲಿ ಅಗ್ನಿ ಆಕಸ್ಮಿಕ: ಕಾರ್ಮಿಕರು ವಾಸವಿದ್ದ ಟೆಂಟ್‌ಗಳು ಭಸ್ಮ

ಬೆಂಗಳೂರಿನ ವೀರನಪಾಳ್ಯದಲ್ಲಿ ಆಕಸ್ಮಿಕ ಅಗ್ನಿ ದುರಂತ ಸಂಭವಿಸಿ ಕೂಲಿ ಕಾರ್ಮಿಕರು ವಾಸವಿದ್ದ 40ಕ್ಕೂ ಹೆಚ್ಚು ಶೆಡ್‍ಗಳು ಬೆಂಕಿಯಿಂದ ಭಸ್ಮವಾಗಿ ಹೋಗಿವೆ. ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ ಕೂಲಿ ಕಾರ್ಮಿಕರು 50 ಶೆಡ್ ನಿರ್ಮಿಸಿಕೊಂಡಿದ್ದರು. ಒಂದು ಶೆಡ್‍ನಲ್ಲಿ ಮೊದಲಿಗೆ ಬೆಂಕಿ

ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ: ಸಿಎಂ ಸಿದ್ದರಾಮಯ್ಯ

ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆ ಹೆಚ್ಚಿದ್ದು, ಬಿಜೆಪಿಯವರು ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ರಾಜ್ಯಾದ್ಯಂತ ಬಿಜೆಪಿಯವರು ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ

ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಸೇರ್ಪಡೆ: ಡಿ.ಕೆ.ಶಿವಕುಮಾರ್

ಮುಂಬರುವ ನಾಡಹಬ್ಬ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆಯನ್ನು ಸೇರ್ಪಡೆ ಮಾಡಲು ನಾವು ತೀರ್ಮಾನ ಮಾಡುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಯವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದ್ವಿತೀಯ ವರ್ಷದ ಹೊನಲು

ಸನ್ ರೈಸರ್ಸ್ ಹೈದರಾಬಾದ್ ಐತಿಹಾಸಿಕ ಗೆಲುವಿನ `ಅಭಿಷೇಕ’!

ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಪಂದ್ಯದಲ್ಲಿ

ಉಕ್ರೇನ್ ನ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ!

ಕೀವ್: ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ಶನಿವಾರ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಉಕ್ರೇನ್ ನಲ್ಲಿ ಭಾರತದ ಔಷಧ ಉದ್ಯಮಕ್ಕೆ ಧಕ್ಕೆ ತರಲು

ಬಾವಿಗೆ ಬಿದ್ದು ನರಳಾಡುತ್ತಿದ್ದ 2 ಕಾಡಾನೆಗಳು ರಕ್ಷಣೆ

ಬೆಂಗಳೂರು: ಮೂವತ್ತು ಅಡಿ ಆಳದ ಬಾವಿಗೆ ಬಿದ್ದು ನರಳಾಡುತ್ತಿದ್ದ ಎರಡು ಕಾಡಾನೆಗಳನ್ನು ಶುಕ್ರವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ಕುಂಡಲಂ ಗ್ರಾಮದ ಬಳಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಜವಳಗೆರೆ

ಸೋನಿಯಾ ರಾಹುಲ್ ಗೆ ಇಡಿ ಸಂಕಷ್ಟ 661 ಕೋಟಿ ಮೌಲ್ಯದ ಆಸ್ತಿ ಸ್ವಾಧೀನಕ್ಕೆ ಇಡಿ ನೋಟೀಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ‌ ರಾಹುಲ್ ಗಾಂಧಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಜಾರಿ ನಿರ್ದೇಶನಾಲಯ(ಇಡಿ)ದ ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ

ಅಗ್ರಸ್ಥಾನಿ ಗುಜರಾತ್ ಗೆ ಸೋಲುಣಿಸಿದ ಲಕ್ನೋ ಸೂಪರ್ ಜೈಂಟ್ಸ್

ಲಕ್ನೋ: ಆರಂಭಿಕ ಏಡಿಯಂ ಮರ್ಕರಂ ಮತ್ತು ನಿಕೊಲಸ್ ಪೂರನ್ ಅವರ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ 6 ವಿಕೆಟ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಮೊದಲ ಪಂದ್ಯದಲ್ಲಿ